ಬೆಂಗಳೂರು:ಅನವಶ್ಯಕವಾಗಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ವದಂತಿ ಹರಿಬಿಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ಸಿದ್ಧತೆ ಕುರಿತು ಶುಕ್ರವಾರ ಶಿಕ್ಷಣ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆಗೆ ನಡೆಸಿದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೆಲವರು ವಿದ್ಯಾರ್ಥಿಗಳಿಗೆ ಆತಂಕ ಹಾಗೂ ಇಲಾಖೆಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಹಳೇ ಪತ್ರಿಕೆಯ ಇಸವಿ ಬದಲು ಮಾಡಿ ವದಂತಿ ಹಬ್ಬಿಸುತ್ತಾರೆ. ಇಂತಹ ಕೃತ್ಯ ಎಸಗುವವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಎಚ್ಚರಿಸಿದರು. ಈಗಾಗಲೇ ಪ್ರಶ್ನೆಪತ್ರಿಕೆ ಸೋರಿಕೆಗೆ ಪ್ರಯತ್ನಿಸುವ ವಿದ್ಯಾರ್ಥಿಗಳು ಹಾಗೂ ಪ್ರಕರಣದಲ್ಲಿ ಭಾಗಿಯಾಗುವವರ ವಿರುದ್ಧ ಕರ್ನಾಟಕ ಸುರಕ್ಷಿತಾ ಪರೀಕ್ಷಾ ವ್ಯವಸ್ಥೆಯಲ್ಲಿ ಕ್ರಮ ಜರುಗಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮೂರು ವರ್ಷದವರೆಗೆ ಪರೀಕ್ಷೆಯಲ್ಲಿ ಪಾಲ್ಗೊಳ್ಳದಂತೆ ರದ್ದುಗೊಳಿಸುವುದು, ಬೇರೆ ವ್ಯಕ್ತಿಗಳಿಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುತ್ತಿದೆ. ಇದಕ್ಕೆ ಹೊಸದಾಗಿ ವದಂತಿ ಹಬ್ಬಿಸುವವರನ್ನು ಸೇರ್ಪಡೆ ಮಾಡಲಾಗುತ್ತಿದೆ ಎಂದರು.
ಕಟ್ಟುನಿಟ್ಟಿನ ಸೂಚನೆ:ಮುಂಜಾಗ್ರತೆಯಾಗಿ ಟ್ಯೂಷನ್ ಕೇಂದ್ರ, ಝೆರಾಕ್ಸ್ ಕೇಂದ್ರ, ಸೈಬರ್ ಸೆಂಟರ್, ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪಾಲ್ಗೊಂಡಿದ್ದವರ ಮೇಲೆ ಗಮನವಿಡಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದರು.
14ಕ್ಕೆ ವಿಡಿಯೋ ಕಾನ್ಪರೆನ್ಸ್
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಸಂಬಂಧ ತೆಗೆದುಕೊಂಡಿರುವ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮದ ಬಗ್ಗೆ ರ್ಚಚಿಸಲು ಫೆ.14ರಂದು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಲಾಗುವುದು. ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟಲು ಸರ್ಕಾರ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದು ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 18 =
Remember me
