ಗುಂಡ್ಲುಪೇಟೆ:ಕೇರಳ ಹಾಗೂ ತಮಿಳುನಾಡಿನಿಂದ ರಾಜ್ಯಕ್ಕೆ ಪ್ರವೇಶಿಸುವವರು ಒಂದೇ ಐಡಿ ಇರುವ ನಕಲಿ ಆರ್​ಟಿಪಿಸಿಆರ್ ಪ್ರಮಾಣ ಪತ್ರ ನೀಡುತ್ತಿರುವುದು ಕಂಡು ಬಂದಿದೆ. ತಾಲೂಕಿನ ಕೇರಳ ಗಡಿಯಲ್ಲಿರುವ ಮೂಲೆಹೊಳೆ ಚೆಕ್​ಪೋಸ್ಟ್​ಗೆ ಶನಿವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಹೊರ ರಾಜ್ಯಗಳ ಪ್ರಯಾಣಿಕರು ನೀಡಿರುವ ಆರ್​ಟಿಪಿಸಿಆರ್ ಪ್ರಮಾಣ ಪತ್ರಗಳನ್ನು ಪರಿಶೀಲಿಸಿದರು. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳು ನಕಲಿ ಪ್ರಮಾಣ ಪತ್ರದ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
ಈ ಕುರಿತು ಸಚಿವರಿಗೆ ಮಾಹಿತಿ ನೀಡಿದ ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ.ಸೋಮಣ್ಣ, ಕೇರಳ ಹಾಗೂ ತಮಿಳುನಾಡಿನಿಂದ ಬರುವ ಎಲ್ಲ ಪ್ರಯಾಣಿಕರಿಗೂ ಆರ್​ಟಿಪಿಸಿಆರ್ ಪ್ರಮಾಣ ಪತ್ರ ಹಾಗೂ ಎರಡು ಲಸಿಕೆ ಪಡೆದಿರುವ ಪ್ರಮಾಣಪತ್ರ ಕಡ್ಡಾಯಗೊಳಿಸಲಾಗಿದೆ. ಕಳೆದ ವಾರ ತಾಲೂಕಿನ ಹಂಗಳ ಗ್ರಾಮದ ಅಂಗಡಿಯೊಂದರಲ್ಲಿ 800 ರೂ. ಪಡೆದು ನಕಲಿ ಆರ್​ಟಿಪಿಸಿಆರ್ ಪ್ರಮಾಣ ಪತ್ರ ನೀಡುತ್ತಿದ್ದವನನ್ನು ಬಂಧಿಸಲಾಗಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಕಲಿ ಆರ್​ಟಿಪಿಸಿಆರ್ ಪ್ರಮಾಣಪತ್ರ ತೋರಿಸುವ ವ್ಯಕ್ತಿಗಳು ಹಾಗೂ ವಾಹನಗಳನ್ನು ವಶಕ್ಕೆ ಪಡೆದು ಕ್ರಿಮಿನಲ್ ಪ್ರಕರಣ ದಾಖಲಿಸಿ. ಇದರಿಂದ ಕೋವಿಡ್ ನಿಯಮ ಪಾಲನೆಯಾಗುವ ಜತೆಗೆ ಅಕ್ರಮಗಳಿಗೆ ಬ್ರೇಕ್ ಬೀಳುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್-19 ಸಂಭವನೀಯ 3ನೇ ಅಲೆ ಕುರಿತು ತಜ್ಞರ ಸಮಿತಿ ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೊದಲ ಹಂತದಲ್ಲಿ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಗಡಿ ಗ್ರಾಮಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಸೂಚಿಸಲಾಗಿದೆ. ಬ್ಲ್ಯಾಕ್ ಫಂಗಸ್ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ ಬಳಿಕ ಅವರಿಗೆ ವಯಲ್​ಗಳನ್ನು ಪೂರೈಸಲು ಸರ್ಕಾರ ಬದ್ಧವಾಗಿದೆ.
|ಬಸವರಾಜ ಬೊಮ್ಮಾಯಿಮುಖ್ಯಮಂತ್ರಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 3 =
Remember me
