ಬೆಂಗಳೂರು:ರೌಡಿ ಶೀಟರ್ ಸೈಲೆಂಟ್ ಸುನೀಲ್ ಬಿಜೆಪಿಗೆ ಸೇರ್ಪಡೆಯಾಗಿರುವ ಫೋಟೋಗಳು ಸಾಜಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಸಾಕಷ್ಟು ಚರ್ಚೆಗಳು ಆರಂಭವಾಗಿದೆ. ಸೈಲೆಂಟ್ ಸುನಿಲ್ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿದ್ದಂತೆ, ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಆರೋಪ, ಪ್ರತ್ಯಾರೋಪಗಳಿಗೆ ಅವಕಾಶ ಮಾಡಿಕೊಟ್ಟಿತ್ತು.
ಬೆಂಗಳೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ರೌಡಿ ಸೈಲೆಂಟ್ ಸುನೀಲ ಜೊತೆಗೆ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ಪಿಸಿ ಮೋಹನ್, ಶಾಸಕ ಉದಯ ಗರುಡಾಚಾರ್‌ ಭಾಗಿಯಾಗಿದ್ದರು. ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿರುವ ಸೈಲೆಂಟ್ ಸುನೀಲ ಜೊತೆಗೆ ಬಿಜೆಪಿ ಮುಖಂಡರು ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ:ರೈಲ್ವೇ ನಿಲ್ದಾಣದಲ್ಲಿ ಶವ ಪತ್ತೆ ಪ್ರಕರಣ | ಮೂವರ ಬಂಧನ; ಪೊಲೀಸರಿಗೆ ಹಂತಕರ ಸುಳಿವು ನೀಡಿದ್ದು ಡ್ರಮ್ ಮೇಲಿದ್ದ ಸ್ಟಿಕ್ಕರ್
ಕುಖ್ಯಾತ ಪಾತಕಿ ಸೈಲೆಂಟ್ ಸುನೀಲನನ್ನು ಪಕ್ಷಕ್ಕೆ ಅಧಿಕೃತವಾಗಿ ಸೇರಿಸಿಕೊಳ್ಳುವ ಮೂಲಕ#BJPRowdyMorchaಕ್ಕೆ ಬಹಿರಂಗವಾಗಿ ಚಾಲನೆ ದೊರೆತಿದೆ!ಯಾವುದೇ ಕಾರಣಕ್ಕೂ ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದ@BSBommaiಅವರೇ, ನಿಮ್ಮ ನಾಲಿಗೆಯನ್ನು ಈಗ ಯಾವುದರಲ್ಲಿ ತೊಳೆದುಕೊಳ್ಳುವಿರಿ?ಗೋಮೂತ್ರವೋ, ಗೋಮಯವೋ!?pic.twitter.com/1e2UawSpC7— Karnataka Congress (@INCKarnataka)March 18, 2023
ಕುಖ್ಯಾತ ಪಾತಕಿ ಸೈಲೆಂಟ್ ಸುನೀಲನನ್ನು ಪಕ್ಷಕ್ಕೆ ಅಧಿಕೃತವಾಗಿ ಸೇರಿಸಿಕೊಳ್ಳುವ ಮೂಲಕ#BJPRowdyMorchaಕ್ಕೆ ಬಹಿರಂಗವಾಗಿ ಚಾಲನೆ ದೊರೆತಿದೆ!ಯಾವುದೇ ಕಾರಣಕ್ಕೂ ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದ@BSBommaiಅವರೇ, ನಿಮ್ಮ ನಾಲಿಗೆಯನ್ನು ಈಗ ಯಾವುದರಲ್ಲಿ ತೊಳೆದುಕೊಳ್ಳುವಿರಿ?ಗೋಮೂತ್ರವೋ, ಗೋಮಯವೋ!?pic.twitter.com/1e2UawSpC7
ಇಂದು ಬೆಳಗ್ಗೆ ಸೈಲೆಂಟ್ ಸುನಿಲ್ ಬಿಜೆಪಿ ಸದಸ್ಯತ್ವ ಪಡೆದುಕೊಂಡಿರುವುದ ಬಹಿರಂಗವಾಗುತ್ತಿದ್ದಂತೆ, ವಿಪಕ್ಷಗಳು ಟೀಕೆಗಳ ಸುರಿಮಳೆಗೈಯ್ಯುತ್ತಿವೆ. ಈ ಹಿಂದೆಯೂ ಸುನಿಲ್ ವಿಚಾರವಾಗಿ ಕಾಂಗ್ರೆಸ್ ಟೀಕಿಸುತ್ತಾ, ಬಿಜೆಪಿ ರೌಡಿಗಳನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ರೌಡಿ ಮೋರ್ಚಾ ಮಾಡಲು ಹೊರಟಿದೆ ಎಂದು ಹೇಳಿತ್ತು.
ಇದೀಗ ಬಿಜೆಪಿಗೆ ಸೈಲೆಂಟ್ ಸುನಿಲ್ ಎಂಟ್ರಿ ಕೊಡುತ್ತಿದ್ದಂತೆ ಮತ್ತೆ ಟ್ವೀಟ್ ಮೂಲಕ ಕಿಡಿಕಾರಿರುವ ಕಾಂಗ್ರೆಸ್, ಕುಖ್ಯಾತ ಪಾತಕಿ ಸೈಲೆಂಟ್ ಸುನೀಲನನ್ನು ಪಕ್ಷಕ್ಕೆ ಅಧಿಕೃತವಾಗಿ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ರೌಡಿ ಮೋರ್ಚಾಕ್ಕೆ ಬಹಿರಂಗವಾಗಿ ಚಾಲನೆ ದೊರೆತಿದೆ ಎಂದು ಹೇಳಿದೆ.
ಇದೇ ವೇಳೆ ಸಿಎಂ ಬೊಮ್ಮಾಯಿ ಅವರನ್ನು ಪ್ರಶ್ನಿಸುತ್ತಾ, ಯಾವುದೇ ಕಾರಣಕ್ಕೂ ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದ ನೀವು, ನಿಮ್ಮ ನಾಲಿಗೆಯನ್ನು ಗೋಮೂತ್ರ ಅಥವಾ ಗೋಮಯದಲ್ಲಿ ತೊಳೆದುಕೊಳ್ಳುತ್ತೀರಾ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ:‘ಸಿಎಂ ಯೋಗಿ ಜೀ… ನನ್ನನ್ನು ಕ್ಷಮಿಸಿ’ ಎನ್ನುತ್ತಲೇ ಎನ್​ಕೌಂಟರ್ ಭಯದಿಂದ ಪೊಲೀಸರಿಗೆ ಶರಣಾದ ಖದೀಮ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
