ಹೊಸಕೋಟೆ:ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖತರ್ನಾಕ್​ಕಳ್ಳರು ಫಕೀರರ ವೇಷ ಹಾಗೂ ಪಾಲಿಶ್ ಮಾಡುವ ನೆಪದಲ್ಲಿ ಮನೆಗಳಿಗೆ ಬಂದು ಕನ್ನ ಹಾಕುತ್ತಿದ್ದವನ್ನು ಬಂಧಿಸಿದ್ದಾರೆ.
ಈ ಮೂರು ಜನ ಅಂತರ್​​ರಾಜ್ಯ ಕುಖ್ಯಾತ ಕಳ್ಳರನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ ಒಟ್ಟು 32 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.
ಬಂಧಿತರನ್ನು ಆರೋಪಿಗಳನ್ನು ಸೈಯದ್ ಆಲಿ, ಭರತ್ ಕುಮಾರ್, ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಖದೀಮರು ಫಕೀರನ ವೇಶ ಹಾಕಿಕೊಂಡು ಮತ್ತು ಚಿನ್ನಾಭರಣಗಳನ್ನ ಪಾಲಿಶ್ ಮಾಡುವ ನೆಪದಲ್ಲಿ ಬರುತ್ತಿದ್ದರು. ಈ ವೇಳೆ ಮಹಿಳೆಯರ ಗಮನ ಬೆರೆಡೆ ಸೆಳೆದು ಚಿನ್ನಾಭರಣ ದೋಚಿ ಎಸ್ಕೇಪ್‌ ಆರೋಪಿಗಳು ಆಗುತ್ತಿದ್ದರು.
ಇವರು ಬೆಂಗಳೂರು, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಕಳ್ಳತನ ಕೃತ್ಯಗಳನ್ನು ಮಾಡುತ್ತಿದ್ದರು. ಇದಿಷ್ಟೇ ಅಲ್ಲದೇ ವಯೋವೃದ್ದರನ್ನು ಯಾಮಾರಿಸಿ ಚಿನ್ನಾಭರಣ ದೋಚುತ್ತಿದ್ದರು ಎನ್ನಲಾಗಿದೆ. ಹೊಸಕೋಟೆ ನಗರದಲ್ಲೂ ಇದೇ ರೀತಿ ಮಾಡಿ ಈ ಮೂವರು ಎಸ್ಕೇಪ್ ಆಗಿದ್ದರು. ಹೀಗಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ‌ ನಡೆಸಿ ಇವರನ್ನು ಬಂಧಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 19 =
Remember me
