ಬೆಂಗಳೂರು:ಬರಗಾಲದಿಂದ ತತ್ತರಿಸಿರುವ ಅನ್ನದಾತರಿಗೆ ಆಸರೆಯಾಗಲು ಬ್ಯಾಂಕ್‌ಗಳು ಮುಂದೆ ಬಂದಿದ್ದು, ಸಾಲ ಮರು ಪಾವತಿ ಹೊರೆಗೆ ತಾತ್ಕಾಲಿಕ ರಿಲೀಫ್ ಸಿಗಲಿದೆ !. ಅರ್ಹ ರೈತರ ಕೃಷಿ ಹಾಗೂ ತೋಟಗಾರಿಕೆ ಬೆಳೆ ಸಾಲಗಳನ್ನು ಪುನರ್ ರಚಿಸಬೇಕೆಂಬ ಸೂಚನೆ ರವಾನೆಯಾಗಿದೆ.
ಇದರಿಂದಾಗಿ ಅಲ್ಪಾವಧಿ ಸಾಲಗಳು ದೀರ್ಘಾವಧಿ ಸಾಲದ ರೂಪದಲ್ಲಿ ಪರಿವರ್ತನೆಯಾಗುವ ಸಾಧ್ಯತೆಗಳಿವೆ. ರಿಸರ್ವ್ ಬ್ಯಾಂಕ್ ಆ್ ಇಂಡಿಯಾ ನಿರ್ದೇಶನದಂತೆ ಪರಿಹಾರ ಕ್ರಮಗಳನ್ನು ಬ್ಯಾಂಕ್‌ಗಳು ಕೈಗೊಳ್ಳಲಿವೆ.
ಮುಂಗಾರು ಮಳೆ ವೈಲ್ಯ, ತೀವ್ರತರ ಶುಷ್ಕ ವಾತಾವರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರ ಪೀಡಿತ ತಾಲೂಕುಗಳು ಎಂದು ೋಷಿಸಿ, ಅಗತ್ಯ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಆಯುಕ್ತರಾದ ಡಾ.ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ (ಎಸ್‌ಎಲ್‌ಬಿಸಿ) ವಿಶೇಷ ಸಭೆ ನಡೆದು, ಅರ್ಹ ರೈತರ ಸಾಲಗಳ ಮರು ರಚನೆ ತೀರ್ಮಾನ ತೆಗೆದುಕೊಂಡಿದೆ.
ಕೃಷಿ, ತೋಟಗಾರಿಕೆ ಬೆಳೆಗಳ ನಷ್ಟದ ಆಧಾರದಲ್ಲಿ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳು ಎಂದು ೋಷಿಸಿ, ನೈಸರ್ಗಿಕ ವಿಕೋಪ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ. ಈಗಾಗಲೇ 161 ತೀವ್ರ, 34 ಸಾಧಾರಣ ಬರಪೀಡಿತ ತಾಲೂಕಗಳನ್ನು ಗುರುತಿಸಿದ್ದು, ಇನ್ನೂ 21 ತಾಲೂಕುಗಳನ್ನು ಬರ ಪೀಡಿತಪಟ್ಟಿಗೆ ಸೇರಿಸಲು ತಯಾರಿ ನಡೆಸಿದೆ.
ಸರ್ಕಾರ ಕೈಗೊಳ್ಳಲಿರುವ ಪರಿಹಾರ ಕ್ರಮಗಳನ್ನು ವಿಸ್ತರಿಸುವ ಭಾಗವಾಗಿ ಅರ್ಹ ರೈತರ ಸಾಲಗಳ ಪುನರ್ ರಚಿಸಬೇಕು ಎಂದು ತೀರ್ಮಾನಿಸಿದ್ದು, ಸೂಕ್ತ ಕ್ರಮವಹಿಸುವಂತೆ ಎಲ್ಲ ಶೆಡ್ಯೂಲ್ ವಾಣಿಜ್ಯ ಬ್ಯಾಂಕ್‌ಗಳು ಮತ್ತು ಆರ್‌ಆರ್‌ಬಿಗಳಿಗೆ ಸಭೆ ನಡವಳಿ ಸಹಿತ ಸೂಚನೆ ರವಾನಿಸಲಾಗಿದೆ.
ಪರಿಹಾರ ಕ್ರಮ ಕೈಗೊಳ್ಳುವಾಗ ಆರ್‌ಬಿಐ ನಿರ್ದೇಶನವನ್ನು ಪಾಲಿಸಬೇಕು ಎಂದು ಈ ಬ್ಯಾಂಕ್ ಶಾಖೆಗಳು ಮತ್ತು ಆರ್‌ಆರ್‌ಬಿಗಳಿಗೆ ತಿಳಿಸುವಂತೆ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ ಎಂದು ಎಸ್‌ಎಲ್‌ಬಿಸಿ ಉಸ್ತುವಾರಿ ಸಂಚಾಲಕ ಬಿ.ಪಾರ್ಶ್ವನಾಥ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
