ಬೆಂಗಳೂರು:ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದ ಪಿಯುಸಿವರೆಗೆ ಉದ್ಯಮಶೀಲತೆ ಬೆಳವಣಿಗೆ ತಿಳಿಸುವ ಪಠ್ಯಕ್ರಮ ಮತ್ತು 8ನೇ ತರಗತಿಯಿಂದ ಪದವಿಯವರೆಗೂ ವೃತ್ತಿ ಮಾರ್ಗದರ್ಶನ ಕಡ್ಡಾಯಗೊಳಿಸಬೇಕು ಎಂದು ಕೌಶಲ, ಉದ್ಯಮಶೀಲತೆ ಮತ್ತು ನವೋದ್ಯಮ ಕಾರ್ಯಪಡೆಯು ಶಿಫಾರಸು ಮಾಡಿದೆ. ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಕಾರ್ಯಪಡೆ ಅಧ್ಯಕ್ಷರೂ ಆದ ಉದ್ಯಮಶೀಲತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಕೊಟ್ಟ ವರದಿಯನ್ನು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂದಿನ 10 ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದು ಸರ್ಕಾರದ ಗುರಿಯಾಗಿದೆ. ಕೃಷಿ ಸೇರಿ ಎಲ್ಲ ವಲಯಗಳಲ್ಲಿ ಗರಿಷ್ಠ ಉದ್ಯೋಗಾವಕಾಶದ ಸಾಧ್ಯತೆ ಇದೆ. ಇದನ್ನು ನನಸಾಗಿಸಲು ಪ್ರಮುಖ ಇಲಾಖೆಗಳನ್ನೆಲ್ಲ ಸೇರಿಸಿಕೊಂಡು ಕಾರ್ಯ ಪ್ರವೃತ್ತರಾಗಲಿದ್ದೇವೆ ಎಂದರು. ವಿದ್ಯಾರ್ಥಿಗಳ ಉಜ್ವಲ ಭವಿಷ್ಯ, ನಿರುದ್ಯೋಗ ನಿವಾರಣೆ ಮತ್ತು ಗುಣಮಟ್ಟದ ಶಿಕ್ಷಣ ಇವು ಸಾಧ್ಯವಾಗಬೇಕೆಂದರೆ ಕಲಿಕೆಯ ಹಂತದಿಂದಲೇ ಕೌಶಲವನ್ನು ಕಲಿಸುವುದರ ಜತೆಗೆ ಉದ್ಯಮಶೀಲ ಮನೋಭಾವ ಬೆಳೆಸಬೇಕಾಗಿದೆ. ಹಾಗಾಗಿ ಕಾರ್ಯಪಡೆ ಶಿಫಾರಸಿನಂತೆ ಜಿಲ್ಲಾ ಮಟ್ಟದಲ್ಲಿ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಉದ್ಯಮಶೀಲತಾ ವಿಕಸನ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಇಸ್ರೇಲ್ ಮಾದರಿ:ಆಧುನಿಕ ಕಾಲಕ್ಕೆ ತಕ್ಕಂತೆ ಎಲ್ಲ ಜಿಲ್ಲೆಗಳಲ್ಲೂ ವಿಕಸನ ಅಥವಾ ಪರಿಪೋಷಣಾ ಕೇಂದ್ರಗಳ ಜಾಲವನ್ನು ಅಸ್ತಿತ್ವಕ್ಕೆ ತರಬೇಕು. ಇದನ್ನು ಬಲಪಡಿಸಲು ಇಸ್ರೇಲಿನ ತಂತ್ರಜ್ಞಾನ ವರ್ಗಾವಣೆ ಕೇಂದ್ರಗಳ ಮಾದರಿಯಲ್ಲಿ ‘ಕರ್ನಾಟಕ ಸಂಶೋಧನೆ ಮತ್ತು ನಾವೀನ್ಯತೆ ಪ್ರಾಧಿಕಾರ ಸ್ಥಾಪಿಸಿ, ಅದನ್ನು ನೋಡಲ್ ಏಜೆನ್ಸಿಯಾಗಿ ಮಾಡಲಿದ್ದೇವೆ ಎಂದು ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಜೀವನೋಪಾಯ ಇಲಾಖೆ ಮಿಷನ್ ನಿರ್ದೇಶಕಿ ಮಂಜುಶ್ರೀ, ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ, ಉದ್ಯಮಿ, ಕಾರ್ಯಪಡೆಯ ಸಂಚಾಲಕ ಮದನ್ ಪದಕಿ ಇದ್ದರು.
ಇದೊಂದು ವಿನೂತನ ಪ್ರಯತ್ನ. ಖಾಸಗಿ ಮತ್ತು ಸರ್ಕಾರದ ವಿವಿಧ ಇಲಾಖೆಗಳು ಸೇರಿ ಸಿದ್ಧಪಡಿಸಿದ್ದು ಗ್ರಾಮೀಣ ಮಟ್ಟದಲ್ಲಿ ದೊಡ್ಡ ಬದಲಾವಣೆ ತರಲು ನೆರವಾಗುತ್ತದೆ.
|ಪ್ರಶಾಂತ್ ಪ್ರಕಾಶ್ರಾಜ್ಯ ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ
ಡಿಜಿಟಲ್ ಕೌಶಲ ಸಮೀಕ್ಷೆ:ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಕೌಶಲಗಳು ಯಾವ ಮಟ್ಟದಲ್ಲಿವೆ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಮಾದರಿ ಸಮೀಕ್ಷೆ ಕೈಗೊಳ್ಳಬೇಕು. ಜತೆಗೆ, ಜಿಲ್ಲಾ ಮಟ್ಟದಲ್ಲಿ ‘ಉದ್ಯಮ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಇದರಲ್ಲಿ ಹೇಳಲಾಗಿದೆ. ಹೊಸ ಉದ್ಯಮಿಗಳನ್ನು ಪೋ›ತ್ಸಾಹಿಸಲು ಏಂಜಲ್ ಹೂಡಿಕೆದಾರರು, ಬ್ಯಾಂಕ್ ಮತ್ತು ಇನ್ನಿತರ ಸೂಕ್ತ ಹಣಕಾಸು ಸಂಸ್ಥೆಗಳಿಂದ ಸಾಫ್ಟ್ ಲೋನ್ ಒದಗಿಸಲು ವ್ಯವಸ್ಥೆ ಮಾಡುವ ಅಗತ್ಯವಿದೆ. ಇವೆಲ್ಲವುಗಳನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಶೀಘ್ರದಲ್ಲೇ ಮುಂದಿನ ಕಾರ್ಯಕ್ರಮಗಳನ್ನು ರೂಪಿಸಲಿದೆ ಎಂದು ಭರವಸೆ ನೀಡಿದರು.
ಯುವಕರಿಗೆ ಅಪಾರ ಬೇಡಿಕೆ:ಡಿಜಿಟಲ್ ಆರ್ಥಿಕತೆಯಲ್ಲಿ ಕೌಶಲಪೂರ್ಣ ಯುವಜನರಿಗೆ ಅಪಾರ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಪದವಿ ಶಿಕ್ಷಣ ಮುಗಿಸಿರುವ ವಿದ್ಯಾರ್ಥಿಗಳಿಗೆ ಸೂಕ್ತ ಕೌಶಲ ಕೋರ್ಸಗಳನ್ನು ಅಭಿವೃದ್ಧಿಪಡಿಸಲಾಗುವುದು. ಮಿಗಿಲಾಗಿ ಯುವಜನರನ್ನು ಭವಿಷ್ಯದ ಕೌಶಲಗಳಲ್ಲಿ ಸನ್ನದ್ಧಗೊಳಿಸಲು ಇನ್ಪೋಸಿಸ್, ಮೈಕ್ರೋಸಾಫ್ಟ್ , ಐಬಿಎಂ ಮುಂತಾದ ಕಂಪನಿಗಳಲ್ಲಿ ಇಂಟರ್ನ್-ಶಿಪ್ ಮಾಡಲು ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ‘ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್, ಈ ಕಂಪನಿಗಳೊಂದಿಗೆ ಸಹಯೋಗ ಹೊಂದಲಿದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು.
ಕೃಷಿ ವಿ.ವಿ.ಗಳು, ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್​ರಾಜ್ ವಿವಿ ಮೂಲಕ 8 ಬಿಜಿನೆಸ್ ಸ್ಕೂಲ್​ಗಳ ನೆರವಿನೊಂದಿಗೆ ರೈತ ಉತ್ಪಾದಕ ಸಂಸ್ಥೆಗಳ ನಿರ್ವಾಹಕರಿಗೆ ಕೃಷಿ ಮತ್ತು ಕೃಷಿ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಸಾಮರ್ಥ್ಯ ಬಲವ ರ್ಧನೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಶಿಫಾರಸು ಮಾಡಲಾಗಿದೆ. ಇದು ಸಾಧ್ಯವಾದರೆ ರೈತ ಸಮುದಾಯದ ಸಬಲೀಕರಣದ ನಿಟ್ಟಿನಲ್ಲಿ ದಾಪುಗಾಲು ಇಟ್ಟಂತಾಗುತ್ತದೆ.
|ಎಸ್.ಸೆಲ್ವಕುಮಾರ್ಉದ್ಯಮಶೀಲತೆ ಇಲಾಖೆ ಪ್ರಧಾನ ಕಾರ್ಯದರ್ಶಿ
ರೌಡಿಯ ಹೆಂಡ್ತಿಗೇ ಮೆಸೇಜ್ ಮಾಡ್ತಿದ್ದ ಕಿಡಿಗೇಡಿ!; ಬಳಿಕ ರಸ್ತೆಯಲ್ಲಿದ್ದ ವಾಹನಗಳ ಗಾಜು ಪುಡಿಪುಡಿ..

36 ರೆವಿನ್ಯೂ ಸೈಟ್‌ಗಳಿಗೆ ಇ-ಖಾತಾ ನೀಡಿದ್ದ ಭೂಪ ಅಮಾನತು; ಇ-ಸ್ವತ್ತು ತಂತ್ರಾಂಶವನ್ನೇ ದುರ್ಬಳಕೆ ಮಾಡ್ಕೊಂಡಿದ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + nineteen =
Remember me
