ಹುಬ್ಬಳ್ಳಿ:ಮೂರು ದಿನಗಳ ಹಿಂದೆ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವಿಗೀಡಾದವರ ಸಂಖ್ಯೆ ಇದೀಗ ಹತ್ತಕ್ಕೆ ತಲುಪಿದೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬರು ಇಂದು ಕೊನೆಯುಸಿರೆಳೆದರು.
ಗಾಯಾಳು ಮುತ್ತು ಮರಿಗೌಡ್ರ (16) ಸಾವಿಗೀಡಾದ ಯುವಕ. ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೂರು ದಿನಗಳ ಹಿಂದೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿತ್ತು. ದಿಬ್ಬಣ ಹೊರಟಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಬಳಿಕ ಇನ್ನೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಭಾನುವಾರ ಮತ್ತೊಬ್ಬರು ಸಾವಿಗೀಡಾಗಿದ್ದು, ಇಂದು ಮಗದೊಬ್ಬರ ಸಾವಿನಿಂದ ಸತ್ತವರ ಸಂಖ್ಯೆ ಹತ್ತಕ್ಕೆ ತಲುಪಿದೆ.
ಧಾರವಾಡ ರಸ್ತೆ ಅಪಘಾತ ಪ್ರಕರಣ: ಮೃತರ ಸಂಖ್ಯೆ 9ಕ್ಕೇ ಏರಿಕೆ, ಅಕ್ಕನ ಬೆನ್ನಲ್ಲೇ ತಂಗಿಯು ಸಾವು
ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 8ಕ್ಕೇರಿದ ಮೃತರ ಸಂಖ್ಯೆ, ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − fourteen =
Remember me
