ಬೆಂಗಳೂರು:ಭೀಕರ ಅಪಘಾತವೊಂದರಲ್ಲಿ ಬಾಲಕ ಸೇರಿ ಆರು ಜನರು ದಾರುಣವಾಗಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಕರ್ನಾಟಕದ ಕಲಬುರಗಿಯವರು ಸೇರಿದಂತೆ ಆರು ಮಂದಿ ಸಾವಿಗೀಡಾಗಿದ್ದಾರೆ. ಮೃತಪಟ್ಟವರ ಪೈಕಿ ಒಬ್ಬ 12 ವರ್ಷದ ಬಾಲಕ ಹಾಗೂ ಐವರು ಮಹಿಳೆಯರು.
ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಶಿರವಾಡಿ ಬಳಿ ಕ್ರೂಸರ್ ವಾಹನ ಮತ್ತು ಟ್ಯಾಂಕರ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರಲ್ಲಿ ಹಲವರು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಅಣೂರ ಗ್ರಾಮದ ನಿವಾಸಿಗಳು. ಹತ್ತು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸೊಲ್ಲಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಶಕ್ತಿ ಯೋಜನೆ ರದ್ದು ಮಾಡಿ ಅಥವಾ ನಮಗೆ ಆರ್ಥಿಕ ನೆರವು ನೀಡಿ: ಮುಖ್ಯಮಂತ್ರಿಗೆ ಆಟೋಚಾಲಕರ ಮನವಿ
ಇವರು ಮಹಾರಾಷ್ಟ್ರದ ತೀರ್ಥಕ್ಷೇತ್ರಗಳ ಪ್ರವಾಸ ಮುಗಿಸಿಕೊಂಡು ಮರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು ಉಸ್ಮಾನಾಬಾದ್ ಜಿಲ್ಲೆ ಉಮರ್ಗಾ ತಾಲೂಕಿನ ಸಂಗೀತಾ ಗದನ್ ಮಾನೇ (35), ಪುಣೆಯ ಇಂದಾಪುರ ನಿವಾಸಿ ಛಾಯಾ ಹನುಮನವರೆ (46), ಅಳಂದ ತಾಲೂಕಿನ ಅಣೂರ ಗ್ರಾಮದ ನಿವಾಸಿಗಳಾದ ಲಲಿತಾ ಮಹಾದೇವ್ ಬುಗ್ಗೆ (50), ರೋಹಿಣಿ ಪೂಜಾರಿ (40), ಸಾಯಿನಾಥ್ ಗೋವಿಂದ ಪೂಜಾರಿ (10), ಸಂದ್ರಾಬಾಯಿ(45) ಎಂದು ಗುರುತಿಸಲಾಗಿದೆ. ಅಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮ್ಮನನ್ನು ಉಳಿಸಲು ಹೋದ ಅಕ್ಕ, ಅವರಿಬ್ಬರನ್ನು ರಕ್ಷಿಸಲು ಹೋದ ಅಮ್ಮ: ಕೊನೆಗೆ ಮೂವರೂ ಬದುಕಲಿಲ್ಲ!; ಆಗಿದ್ದೇನು?

ಪಿಕ್​ನಿಕ್​ಗೆ ತೆರಳಿದ್ದ 27 ವರ್ಷದ ಯುವಕ ಹೃದಯಾಘಾತದಿಂದ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + four =
Remember me
