ಬೆಂಗಳೂರು: ಇನ್ನು ಮುಂದೆ ಎಲ್ಲಾ ಸಭೆ ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ, ಸರಬರಾಜು ಮಾಡುವುದನ್ನು ನಿಲ್ಲಿಸಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಯವರು ಎಲ್ಲಾ ಇಲಾಖೆಗಳಿಗೆ, ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.ಸರ್ಕಾರದಿಂದ ಆಯೋಜಿಸಲ್ಪಡುವ ಅಧಿಕೃತ ಸಭೆ ಸಮಾರಂಭಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳ ಬಳಕೆ ನಿಷೇಧಿಸಿ 2018ರ ಸೆಪ್ಟೆಂಬರ್‌ನಲ್ಲಿ ಆದೇಶ ಹೊರಡಿಸಲಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಸರ್ಕಾರದಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯ, ಸರ್ಕಾರದಿಂದ ಅನುದಾನ ಪಡೆಯುವ ಯಾವುದೇ ಸಂಸ್ಥೆಗಳಿಂದ ಆಯೋಜಿಸುವ ಸಭೆ ಸಮಾರಂಭಗಳಲ್ಲಿ ಈ ಆದೇಶ ಪಾಲನೆಯಾಗುತ್ತಿಲ್ಲ. ಸಭೆ- ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುವುದು ಸಮರ್ಥನೀಯವಲ್ಲ ಎಂದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten + 20 =
Remember me
