ಬೆಂಗಳೂರು:ಬೆಳಗಾವಿ ಅಧಿವೇಶನದಲ್ಲಿ ಸಾರ್ವಕರ್ ಅವರ ವಿರುದ್ಧ ಕಾಂಗ್ರೆಸ್​ ಸಚಿವ ಪ್ರಿಯಾಂಕ್​ ಖರ್ಗೆ ನೀಡಿದ ವಿವಾದಾತ್ಮಕ ಹೇಳಿಕೆ ಕುರಿತು ಇದೀಗ ಬಿಜೆಪಿ ಮಾಜಿ ಸಚಿವ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದು, ನೇರ ಸವಾಲವೊಂದನ್ನು ಹಾಕಿದ್ದಾರೆ.
ಇದನ್ನೂ ಓದಿ:ಬಿಜೆಪಿಗೆ ಡಿಕೆಶಿ ಹೇಗೆ ಟಾಂಗ್​ ಕೊಟ್ರು ನೋಡಿ
ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ. ರವಿ, “ಆತ್ಮೀಯರಾದ ಪ್ರಿಯಾಂಕ್​ ಖರ್ಗೆ ಅವರೇ, ತಾಯಿ ಭಾರತಾಂಬೆಯ ಮಡಿಲಿನಲ್ಲಿ ಜನಿಸಿದ ಮಹಾನ್ ರಾಷ್ಟ್ರೀಯವಾದಿ, ಕರಿನೀರ ವೀರ, ಹುತಾತ್ಮ ವೀರ್ ಸಾವರ್ಕರ್ ಅವರು, ಬ್ರಿಟಿಷರಿಂದ ಕಠಿಣ ಕಾರಾಗೃಹ ಶಿಕ್ಷೆಗೊಳಪಡಿಸುವ ತೀರ್ಪಿನಂತೆ, ಘೋರ ಕರಿನೀರಿನ ಶಿಕ್ಷೆ ಅನುಭವಿಸಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇರುವ ಸೆಲ್ಯುಲರ್ ಜೈಲಿಗೆ ಭೇಟಿ ನೀಡಲು ನಿಮ್ಮನ್ನು ಆಹ್ವಾನಿಸುತ್ತೇನೆ. ಅಂದ ಹಾಗೆ ನಿಮ್ಮ ಪ್ರವಾಸದ ಸಂಪೂರ್ಣ ಖರ್ಚುವೆಚ್ಚ ನಾನೇ ಭರಿಸುತ್ತೇನೆ” ಎಂದಿದ್ದಾರೆ.
“ಅತ್ತ ನಿಮ್ಮ ನೆಚ್ಚಿನ ನೆಹರು, ಶಿಕ್ಷೆಯ ನೆಪದಲ್ಲಿ, ಬ್ರಿಟಿಷರ ಜೈಲುಗಳಲ್ಲಿ ಐಷಾರಾಮಿ ಉಪಚಾರ ಪಡೆಯುತ್ತಿರುವಾಗ, ಇತ್ತ ಅಂಡಮಾನಿನ ಜೈಲಿನಲ್ಲಿ ವೀರ್ ಸಾವರ್ಕರ್ ಯಾವ ರೀತಿಯ ನೋವು ಮತ್ತು ಸಂಕಟವನ್ನು ಅನುಭವಿಸಿದರು ಎಂಬ ಸಣ್ಣ ಅನುಭೂತಿ ನಿಮಗಾಗಬಹುದು. ಸೆಲ್ಲ್ಯುಲರ್ ಜೈಲಿನ ಆವರಣದಲ್ಲೇ ಸಾವರ್ಕರ್ ಮತ್ತು ನೆಹರು ಇವರಿಬ್ಬರಲ್ಲಿ ನಿಜವಾದ ಸ್ವಾತಂತ್ರ್ಯ ಹೋರಾಟಗಾರ ಯಾರು? ಎಂಬುದರ ಕುರಿತು ಬಹಿರಂಗ ಚರ್ಚೆ ನಡೆಸಲು ನಾನು ನಿಮಗೆ ಸವಾಲು ಹಾಕುತ್ತೇನೆ” ಎಂದರು.
ಇದನ್ನೂ ಓದಿ:ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯಲ್ಲಿ ತ್ರಿದಿನಗಳ ಶಾಲಾ ವಾರ್ಷಿಕೋತ್ಸವ
“ವಿನಾಯಕ ದಾಮೋದರ್ ಸಾವರ್ಕರ್ ಅವರ ಫೋಟೋವನ್ನು ವಿಧಾನಸಭೆ ಅಥವಾ ಪರಿಷತ್ತಿನಿಂದ ತೆಗೆಯುವ ದುಸ್ಸಾಹಸ ಮಾಡಿದರೆ, ಇಡೀ ರಾಜ್ಯದ ಜನತೆಯ ಪರವಾಗಿ ನಾವೆಲ್ಲರೂ ಉಗ್ರ ಪ್ರತಿಭಟನೆ ನಡೆಸುತ್ತೇವೆ. ಇಂದು ನೀವು ಅಧಿಕಾರದಲ್ಲಿರಬಹುದು, ನೆನಪಿಡಿ, ಮುಂದೆ ನಾವು ಅಧಿಕಾರಕ್ಕೆ ಬಂದಾಗ ನೆಹರೂ ಅವರ ಭಾವಚಿತ್ರ ವಿಧಾನಸೌಧದಲ್ಲಿ ಹೇಗೆ ಇರುತ್ತದೆ ನೋಡೋಣ” ಎಂದು ಹೇಳಿದರು.
ಆತ್ಮೀಯರಾದ ಶ್ರೀಯುತ@PriyankKhargeಅವರೇ,
ತಾಯಿ ಭಾರತಿಯ ಮಡಿಲಿನಲ್ಲಿ ಜನಿಸಿದ ಮಹಾನ್ ರಾಷ್ಟ್ರೀಯವಾದಿ, ಕರಿನೀರ ವೀರ, ಹುತಾತ್ಮ ವೀರ್ ಸಾವರ್ಕರ್ ಅವರು, ಬ್ರಿಟಿಷರಿಂದ ಕಠಿಣ ಕಾರಾಗ್ರಹ ಶಿಕ್ಷೆಗೊಳಪಡಿಸುವ ತೀರ್ಪಿನಂತೆ, ಘೋರ ಕರಿನೀರಿನ ಶಿಕ್ಷೆ ಅನುಭವಿಸಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇರುವ ಸೆಲ್ಯುಲರ್ ಜೈಲಿಗೆ ಭೇಟಿ…
— C T Ravi 🇮🇳 ಸಿ ಟಿ ರವಿ (@CTRavi_BJP)December 7, 2023

“ನೆನಪಿಡಿ, ಪರಿವಾರವಾದದ ಬಲದಿಂದ ಬೆಳೆದಂತಹ ಹೊಗಳುಭಟ್ಟರು ಬೇಕು ಎಂದಾಗ ಭಾವಚಿತ್ರ ಇಡಲಿಕ್ಕೆ, ಬೇಡ ಅಂದಾಗ ತೆಗಯಲಿಕ್ಕೆ, ವೀರ ಸಾವರ್ಕರ್ ಅವರು ನಿಮ್ಮ ಹಾಗೆ ಅಥವಾ ನೆಹರು ಅವರ ಹಾಗೆ ವಂಶವಾದದಿಂದ ಬೆಳೆದವರಲ್ಲ” ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ.
ರಾಜ್ಯಸಭೆಯಲ್ಲಿ ‘ಅನಿಮಲ್’​; ವಿವಾದದ ಅಲೆಯಲ್ಲಿ ಸಿಲುಕಿದ ರಣಬೀರ್​ ಸಿನಿಮಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 14 =
Remember me
