ಚಿಕ್ಕಮಗಳೂರು:ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ.ಟಿ. ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈವರೆಗೆ ಅಂಗೀಕಾರವಾಗಿಲ್ಲ. ಆದರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಸಚಿವರು ಖಾಸಗಿ ಕಾರು ಬಳಸುತ್ತಿದ್ದಾರೆ. ಜಿಲ್ಲೆಯಲ್ಲಿ 2 ದಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಅವರು ಸರ್ಕಾರದ ಸೌಲಭ್ಯ ಬಳಸಿಕೊಳ್ಳುತ್ತಿಲ್ಲ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೈ ಕೆಟಗರಿಯಲ್ಲಿ ಬರುವ ಕಾರಣ ಎಸ್ಕಾರ್ಟ್ ಇದೆ.
ಶಾಸಕರಿಗೆ ದೀಪಾವಳಿ ಕೊಡುಗೆ
ಬೆಂಗಳೂರು: ದೀರ್ಘಾವಧಿಯಿಂದ ನಿರೀಕ್ಷೆ, ಅಸಮಾಧಾನದಿಂದ ಚಡಪಡಿಸುತ್ತಿದ್ದ ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೀಪಾವಳಿಗೆ ಮುನ್ನವೇ ಕೊಡುಗೆ ನೀಡಿದ್ದು, ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದ 2ನೇ ಕಂತಿನ ಅನುದಾನವಾಗಿ ಒಟ್ಟು 150 ಕೋಟಿ ರೂ. ಬಿಡುಗಡೆಗೆ ಬಿಎಸ್​ವೈ ಅನುಮೋದಿಸಿದ್ದು, ಆರ್ಥಿಕ ಇಲಾಖೆ ಸಹಮತಿಸಿದೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಹಿಂದಿನ ಸಾಲಿನಲ್ಲಿ ಅನುಮೋದಿಸಿದ ಕಾಮಗಾರಿಗಳನ್ನು ಮೊದಲಿಗೆ ಪೂರ್ಣಗೊಳಿಸಬೇಕು ಎಂದು ಇಲಾಖೆ ಅನಧಿಕೃತ ಟಿಪ್ಪಣಿಯಲ್ಲಿ ತಿಳಿಸಿದೆ. 2019-20ರ ಬಾಕಿ ಕಾಮಗಾರಿಗಳನ್ನು 2 ಕೋಟಿ ರೂ.ಗಳವರೆಗೆ ಮುಂದುವರಿಸುವ ಪ್ರಸ್ತಾವನೆಯಂತೆ 2020ರ ಜು.8ರಲ್ಲಿ ಈಗಾಗಲೇ ಪ್ರಾರಂಭವಾಗಿರುವ ಹಾಗೂ ಮುಂದುವರಿದ ಕಾಮಗಾರಿಗಳಿಗೂ ಹಣಕಾಸಿನ ಸಮಸ್ಯೆಯಾಗದಂತೆ ಬಿಎಸ್​ವೈ ನೋಡಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
