ಬೆಂಗಳೂರು:ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿ.ಟಿ.ರವಿ ಬಡ್ತಿ ಪಡೆದ ಬಳಿಕ ಸಚಿವ ಸ್ಥಾನಕ್ಕೆ ನೀಡಿದ ರಾಜೀನಾಮೆ ಪತ್ರವನ್ನು ಇನ್ನೂ ಅಂಗೀಕರಿಸಿಲ್ಲ. ಯಾಕೆ ಗೊತ್ತಾ?
ಸೆ.26ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸಿ.ಟಿ.ರವಿಯನ್ನು ಆಯ್ಕೆ ಮಾಡಿ ಹೈಕಮಾಂಡ್​ ಆದೇಶಿಸಿತ್ತು. ಬಳಿಕ ಪಕ್ಷ ಸಂಘಟನೆಯಷ್ಟೇ ನನ್ನ ಗುರಿ ಎಂದಿದ್ದ ಅವರು, ಒಬ್ಬ ವ್ಯಕ್ತಿಗೆ ಒಂದು ಹುದ್ದೆ ನಿಯಮದಂತೆ ಅ.2ರ ಗಾಂಧಿ ಜಯಂತಿಯಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅಂದು ಸಿಎಂ ಸಿಗದ ಕಾರಣ ಅ.3ರಂದು ಯಡಿಯೂರಪ್ಪರನ್ನು ಭೇಟಿಯಾಗಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದರು.
ಕನ್ನಡ ರಾಜ್ಯೋತ್ಸವ ಬಳಿಕ ಸಿ.ಟಿ.ರವಿ ರಾಜೀನಾಮೆ ಅಂಗೀಕರಿಸಲು ಬಿಎಸ್​ವೈ ಚಿಂತನೆ ನಡೆಸಿದ್ದಾರೆ. ಆ ವೇಳೆಗೆ 2 ವಿಧಾನಸಭೆ ಹಾಗೂ 4 ವಿಧಾನಪರಿಷತ್​ ಕ್ಷೇತ್ರಗಳ ಚುನಾವಣೆ ಮುಗಿದಿರುತ್ತವೆ. ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರು ಅನುಮತಿ ನೀಡಿದರೆ ಮತ್ತೊಂದು ಸ್ಥಾನ ಲಭಿಸಲಿದೆ ಎನ್ನುವುದು ಈ ಚಿಂತನೆಯ ಹಿಂದಿನ ಲೆಕ್ಕಾಚಾರ.
ಪಕ್ಷದ ರಾಷ್ಟ್ರಮಟ್ಟದ ಪ್ರಮುಖ ಹುದ್ದೆ ಜತೆಗೆ ದಕ್ಷಿಣ ಭಾರತದ ಉಸ್ತುವಾರಿ ಜವಾಬ್ದಾರಿಯೂ ಸಿ.ಟಿ.ರವಿ ಹೆಗಲೇರಿದೆ. ಸಂಘಟನಾ ಚಟುವಟಿಕೆಗೆ ಹೆಚ್ಚು ಸಮಯ ಮೀಸಲಿಡಬೇಕಾಗಿರುವ ಕಾರಣ ಇಲಾಖೆಗಳನ್ನು ನಿಭಾಯಿಸುವುದು ಕಷ್ಟವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಗಾಯಗೊಂಡ ಲಕ್ಷ್ಮೀ ಫೋಟೋ ಹಾಕಿ ಅಸಮಾಧಾನ ಹೊರಹಾಕಿದ್ರು ನಟ ದರ್ಶನ್​ ಪತ್ನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
