ಮಂಡ್ಯ:ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ… ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪಷ್ಟನೆ ಕೊಟ್ಟಿದ್ದಾರೆ.
ಫೆ.19ರಂದು ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸೇವಿಸಿದ್ದರು. ಬಳಿಕ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಹಳೇ ಬಸ್ ನಿಲ್ದಾಣ ಸಮೀಪವಿರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಸಿ.ಟಿ.ರವಿ ಬಾಡೂಟ ಸೇವಿಸುತ್ತಿರುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಮಾಂಸ ಸೇವಿಸಿ ಸಿ,ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬಂದಿತ್ತು.
ಇದನ್ನೂ ಓದಿ:ಬಾಯ್​​ಫ್ರೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾದ 19ರ ಯುವತಿ; ಇದಕ್ಕಾಗಿ ಮಾಡಿದ್ದು ಮಾತ್ರ ಹೇಯ ಕೃತ್ಯ!
ಈ ವಿಚಾರವಾಗಿ ಮಂಡ್ಯದಲ್ಲ ಸ್ಪಷ್ಟನೆ ನೀಡಿ ಮಾತನಾಡಿರುವ ಸಿ.ಟಿ.ರವಿ, ಭಟ್ಕಳಕ್ಕೆ ಹೋಗಿದ್ದಾನ ನಾಗಬನ ನೋಡಲು ಕರೆದಿದ್ದರು. ಹೊಸದಾಗಿ ದೇವಾಲಯ ಕಟ್ಟಲಾಗಿದ್ದರಿಂದ 45 ದಿನಗಳ ಕಾಲ ತೆರೆದಿರಲಿಲ್ಲ. ನಾಗಬನದ ಹೊರಾವರಣದಲ್ಲಿ ನಿಂತು ದರ್ಶನ ಪಡೆದಿದ್ದೇವೆ. ನನಗೆ ದೇವರ ಬಗ್ಗೆ ಶ್ರದ್ಧೆ ಇದೆ. ದೇವಾಲಯಕ್ಕೆ ಮಾಂಸ ತಿಂದು ತಿಂದು ಹೋಗಿಲ್ಲ ಎಂದು ಹೇಳಿದ್ದಾರೆ.
ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ವ್ರತ, ಪೂಜೆಗಳನ್ನು ಆಚರಿಸುತ್ತಾ ಬಂದಿರುವ ನನಗೆ ದೇವರ ಬಗ್ಗೆ ಶ್ರದ್ಧೆ ಇದೆ. ಮಾಂಸ ತಿನ್ನುತ್ತೇನೆ… ಹಾಗಂತ ತಿಂದು ದಾಸ್ಟ್ಯ ತೋರಿಸುವುದಿಲ್ಲ. ಮಾಂಸ ತಿಂದು ದೇವಾಲಯಕ್ಕೆ ಹೋಗ್ತೀನಿ ಏನಿವಾಗ? ಯಾರು ಏನ್ ಮಾಡ್ತಾರೆ ಅಂತ ಸಿದ್ದರಾಮಯ್ಯ ರೀತಿ ಹೇಳಲ್ಲ ಎಂದು ಹೇಳಿದರು.
ಇದನ್ನೂ ಓದಿ:ದೇವಾಲಯಕ್ಕೆ ಮಾಂಸದ ಹಾರ ತಂದುಕೊಟ್ಟ ಕಿಡಿಗೇಡಿಗಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
