ಚಿಕ್ಕಮಗಳೂರು:ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarthy Sulibele)ಅಪ್ರತಿಮ ದೇಶಭಕ್ತ, ಅವರ ದೇಶಭಕ್ತಿಗೆ ಕಾಂಗ್ರೆಸ್(Congress)ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಮಾಜಿ ಶಾಸಕ ಸಿ.ಟಿ. ರವಿ(CT Ravi)ಹೇಳಿದ್ದಾರೆ.
“ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ. ಬಹುಶಃ ಕಾಂಗ್ರೆಸ್ ಅವರ ಕಣ್ಣಿಗೆ ಸೂಲಿಬೆಲೆ ಲಾಡೆನ್ ತರ ಕಾಣ್ತಿದ್ದಾರಾ?, ಲಾಡೆನ್ ಬಂದ್ರೆ ಒಳಗೆ ಬಿಟ್ಟುಕೊಳ್ತಾರೆ. ಚಕ್ರವರ್ತಿ ಸೂಲಿಬೆಲೆ ಬಂದ್ರೆ ಏನು?, ಕಾಂಗ್ರೆಸ್ಸಿಗರಿಗೆ ಅಧಿಕಾರದ ಮದ ಅತಿಯಾಗಿದೆ ಎಂದು ಕಾಣಿಸುತ್ತದೆ. ಹಾಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಹೇಳಿದರು.“ಅಧಿಕಾರದ ಅತಿಯಾದ ಮದ ಹೆಚ್ಚು‌ ದಿನ‌ ಉಳಿಯಲು ಸಾಧ್ಯವಿಲ್ಲ! ಈ ಹಿಂದೆ ಕಾಂಗ್ರೆಸ್ ಸಂವಿಧಾನವನ್ನೇ ಬುಡಮೇಲು ಮಾಡಿ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿತ್ತು. ಜನ ಈ ಹಿಂದೆ ಕಾಂಗ್ರೆಸ್ಸಿಗೆ ಬುದ್ಧಿ ಕಲಿಸಿದ್ದನ್ನ ಅವರು ನೆನಪಿಟ್ಟುಕೊಳ್ಳಬೇಕು” ಎಂದು ಸಿ.ಟಿ ರವಿ ಹೇಳಿದರು.
“ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲಬೇಕಾಗಲ್ಲ” ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
