ಬೆಂಗಳೂರು/ಬಾಳೆಹೊನ್ನೂರು:ಕೇಂದ್ರ ಸರ್ಕಾರ ಬಜೆಟ್​ನಲ್ಲಿ ಘೋಷಣೆ ಮಾಡಿರುವ ಪರಂಪರೆ ಮತ್ತು ಸಾಂಸ್ಕೃತಿಕ ವಿಶ್ವವಿದ್ಯಾಲಯವನ್ನು ರಾಜ್ಯಕ್ಕೆ ತರಲು ಸರ್ಕಾರ ಪ್ರಯತ್ನ ಆರಂಭಿಸಿದೆ.
ರಾಜ್ಯ ಸರ್ಕಾರದಿಂದ ಈಗಾಗಲೆ ಪ್ರಸ್ತಾವನೆ ಸಲ್ಲಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಮಧ್ಯಪ್ರದೇಶ ಸೇರಿ ಇನ್ನೂ ಕೆಲ ರಾಜ್ಯಗಳು ಈ ವಿಚಾರದಲ್ಲಿ ಸ್ಪರ್ಧೆಯಲ್ಲಿದ್ದು, ರಾಜ್ಯ ಸರ್ಕಾರ ಇದನ್ನು ಪಡೆಯಲೇಬೇಕೆಂದು ಪ್ರಯತ್ನ ನಡೆಸಿದೆ.
ಏನಿದು ವಿವಿ:ಕಲೆ, ಪರಂಪರೆ, ಸಂಸ್ಕೃತಿ, ಸಾಹಿತ್ಯ, ಜಾನಪದ, ನೃತ್ಯ, ಸಂಗೀತ, ಪ್ರದರ್ಶಕ ಕಲೆ, ಶಿಲ್ಪ, ಚಿತ್ರಕಲೆ, ಆದಿವಾಸಿಗಳ ಕಲೆ ಹೀಗೆ ವಿವಿಧ ಪ್ರಕಾರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೆಚ್ಚಿನ ಅಧ್ಯಯನ ಹಾಗೂ ಸಂಶೋಧನೆಗೆ ಪೂರಕವಾಗಿ ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಕೇಂದ್ರ ಸರ್ಕಾರ ಒಪ್ಪಿದರೆ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಗೆ ಮೀಸಲಿಟ್ಟಿದ್ದ ಜಾಗವನ್ನು ಸಾಂಸ್ಕೃತಿಕ ವಿಶ್ವವಿದ್ಯಾಲಯಕ್ಕೆ ಬಿಟ್ಟುಕೊಡಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರಕ್ಕೂ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮುಂದಿನ 10 ವರ್ಷಗಳಲ್ಲಿ ವಿಶ್ವವಿದ್ಯಾಲಯ ಬೆಳವಣಿಗೆಗೆ ಸುಮಾರು 2000 ಕೋಟಿ ರೂ. ಲಭ್ಯವಾಗಲಿದೆ. ಇಂತಹ ಒಂದು ವಿವಿ ಒಡಿಶಾದಲ್ಲಿದೆ.
ಸಾಂಸ್ಕೃತಿಕ ವಿವಿಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ. ಈ ವಿಚಾರವಾಗಿ ನಿರ್ಮಲಾ ಸೀತಾರಾಮನ್ ಅವರನ್ನು ಮಂಗಳವಾರ ಭೇಟಿ ಮಾಡಲಾಗುವುದು. ಬೇರೆ ರಾಜ್ಯಗಳ ಸ್ಪರ್ಧೆಯ ನಡುವೆಯೂ ರಾಜ್ಯಕ್ಕೆ ಮಂಜೂರು ಮಾಡಬಹುದೆಂಬ ವಿಶ್ವಾಸವಿದೆ. ರಾಜ್ಯದ ಕ್ರೀಡಾ ಇಲಾಖೆಯ ಕೆಲ ಯೋಜನೆಗಳಿಗೆ ಕೇಂದ್ರ ಕ್ರೀಡಾ ಸಚಿವರನ್ನು ಭೇಟಿ ಮಾಡಲಾಗುವುದು. ನಿತಿನ್ ಗಡ್ಕರಿ, ರಮೇಶ್ ಪೋಖ್ರಿಯಾಲ್ ಅವರ ಭೇಟಿಗೂ ಅನುಮತಿ ಸಿಕ್ಕಿದ್ದು ರಾಜ್ಯಕ್ಕೆ ವಿವಿಧ ಯೋಜನೆಗಳ ಕುರಿತು ಮಾತುಕತೆ ನಡೆಸಲಾಗುವುದು.
| ಸಿ.ಟಿ. ರವಿ ಕನ್ನಡಮತ್ತು ಸಂಸ್ಕೃತಿ ಸಚಿವ
https://www.vijayavani.net/toilets-liquor-shops-built-atop-demolished-masjid-in-china/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 11 =
Remember me
