ಬೆಂಗಳೂರು: ರಾಜ್ಯದಲ್ಲಿ ಶನಿವಾರ ರಾತ್ರಿ 7 ಗಂಟೆಯಿಂದ ಕರೊನಾ ಕರ್ಫ್ಯೂ ಜಾರಿಯಲ್ಲಿದ್ದು, ಸೋಮವಾರ ಬೆಳಗ್ಗೆ 7 ಗಂಟೆವರೆಗೆ ಮುಂದುವರಿಯಲಿದೆ. ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ವಹಿವಾಟು ಸಂಪೂರ್ಣವಾಗಿ ಬಂದ್ ಇರಲಿದೆ. ರಾಜ್ಯ ಸರ್ಕಾರ ಮೇ 31ರವರೆಗೆ ಕರೊನಾ ಲಾಕ್​ಡೌನ್ ಮುಂದುವರಿಸಿ ಬಹುತೇಕ ಸೇವೆಗಳಿಗೆ ನಿಯಮ ಸಡಿಲಿಕೆ ಮಾಡಿದೆ. ಆದರೆ, ಪ್ರತಿದಿನ ರಾತ್ರಿ 7 ರಿಂದ ಬೆಳಗ್ಗೆ 7 ವರೆಗೆ ಹಾಗೂ ಭಾನುವಾರ ಸಂಪೂರ್ಣ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಆದೇಶಿಸಿತ್ತು.
ಇದನ್ನೂ ಓದಿ:#TTDForSale ಟ್ವಿಟರ್​ನಲ್ಲಿ ಟ್ರೆಂಡಿಂಗ್​: ಅನುಪಯುಕ್ತ ಆಸ್ತಿ ಮಾರಾಟಕ್ಕೆ ಟಿಟಿಡಿ ತೀರ್ಮಾನ
ರಸ್ತೆಗಳಲ್ಲಿ ಬ್ಯಾರಿಕೇಡ್:ರಾಷ್ಟ್ರೀಯ, ರಾಜ್ಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಪೊಲೀಸರು ಬಂದ್ ಮಾಡಿದ್ದಾರೆ. ಜಿಲ್ಲಾ ಗಡಿ ಮತ್ತು ಪ್ರಮುಖ ಜಂಕ್ಷನ್​ಗಳಲ್ಲಿ ಪೊಲೀಸ್ ಕಾವಲು ಇರಲಿದೆ. ಪೂರ್ವನಿಗದಿತ ಮದುವೆ ಸಮಾರಂಭಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಧರ್ಮ, ರಾಜಕೀಯ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ. ಪಾರ್ಕ್ ಮತ್ತು ರಸ್ತೆಗಳಲ್ಲಿ ವಾಯು ವಿಹಾರ, ಶಾಪಿಂಗ್, ಸಂಬಂಧಿಕರ ಮನೆಗೆ ಸುತ್ತಾಡುವುದು ಎಲ್ಲವನ್ನು ಸರ್ಕಾರ ನಿರ್ಬಂಧಿಸಿದೆ.
ಇದನ್ನೂ ಓದಿ:ಕ್ವಾರಂಟೈನ್​ನಲ್ಲಿದ್ದ ಗೆಳೆಯನಿಗೆ ಹಲ್ವಾ ತಗೊಂಡು ಹೋದವನನ್ನು ಹುಡುಕುತ್ತಿದ್ದಾರೆ ಪೊಲೀಸರು!
ಸುತ್ತಾಡಿದರೆ ವಾಹನ ಸೀಜ್:ಲಾಕ್​ಡೌನ್ ಸಡಿಲಿಕೆ ಆದ ಬಳಿಕ ಮೊದಲ ಭಾನುವಾರವೆಂದು ಸುತ್ತಾಡಲು ಹೊರಬಂದರೆ ವಾಹನ ಜಪ್ತಿ ಮಾಡಿ, ಕೇಸ್ ದಾಖಲಿಸುತ್ತಾರೆ. ಸಂಚಾರಕ್ಕೆ ಯಾವುದೇ ಪಾಸ್ ಅನ್ವಯ ಆಗುವುದಿಲ್ಲ. ಕೇವಲ ತುರ್ತು ಮತ್ತು ಅಗತ್ಯ ಸೇವೆಗಳಿಗೆ ಅವಕಾಶ.
ಏನಿರಲ್ಲ?
ಏನಿರುತ್ತೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 17 =
Remember me
