ಬೆಂಗಳೂರುಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ರಾಜ್ಯಪಠ್ಯಕ್ರಮ ಮತ್ತು ಕೇಂದ್ರ ಪಠ್ಯಕ್ರಮದ ವಿದ್ಯಾರ್ಥಿಗಳ ನಡುವೆ ಸಾಕಷ್ಟು ತಾರತಮ್ಯ ಎದುರಾಗುತ್ತಿದ್ದು, ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಇದನ್ನು ತನಿಖೆಗೆ ಒಳಪಡಿಸಿ ಮಕ್ಕಳಿಗೆ ನ್ಯಾಯ ಕಲ್ಪಿಸಬೇಕೆಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ(ಕ್ಯಾಮ್ಸ್) ಮನವಿ ಮಾಡಿದೆ.
ಈ ಸಂಬಂಧ ಕ್ಯಾಮ್ಸ್ ಸಂಘಟನೆಯು ಆಯೋಗಕ್ಕೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಎನ್‌ಇಆರ್‌ಟಿ ಪೂರಕವಾದ ಪಠ್ಯವನ್ನೇ ಅನುಸರಿಸಲಾಗುತ್ತಿದೆ. ವಿಜ್ಞಾನ ಮತ್ತು ಗಣಿತದಲ್ಲಿ ಕೇಂದ್ರ ಮತ್ತು ರಾಜ್ಯಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೇಂದ್ರ ಪಠ್ಯಕ್ರಮದಲ್ಲಿ ಓದಿದ ವಿದ್ಯಾರ್ಥಿಗಳು ಮಾತ್ರವೇ ಬುದ್ಧಿವಂತರು ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಇದರಿಂದ ರಾಜ್ಯಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಭಾರೀ ಅನ್ಯಾಯವಾಗುತ್ತಿದೆ ಎಂದಿದ್ದಾರೆ.
ಕೇಂದ್ರ ಪಠ್ಯಕ್ರಮ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬೇಗ ತರಗತಿಗಳನ್ನು ಮುಗಿಸಿ, ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. ಇದರಿಂದ ಈ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ರ‌್ಯಾಂಕ್ ಪಡೆಯುತ್ತಿದ್ದು ರಾಜ್ಯದ ವಿದ್ಯಾರ್ಥಿಗಳು ಹಿಂದುಳಿಯುತ್ತಿದ್ದಾರೆ. ಈ ಕಾರಣದಿಂದ ಪಾಲಕರು ಕೇಂದ್ರ ಪಠ್ಯಕ್ರಮದ ಕಡೆ ಮುಖ ಮಾಡುತ್ತಿದ್ದಾರೆ.
ಈ ರೀತಿ ಜೆಇಇ, ನೀಟ್ ನಂತಹ ಪರೀಕ್ಷೆಗಳಿಗೆ ತರಬೇತಿ ನೀಡುವುದು ಕಾನೂನು ಬಾಹಿರವಾಗಿದ್ದರೂ ಸಹ ಶಾಲೆಗಳು ತರಬೇತಿ ನೀಡುತ್ತಲೇ ಇವೆ. ಇದರ ಬಗ್ಗೆ ಶಿಕ್ಷಣ ಇಲಾಖೆ ಮತ್ತು ಮಕ್ಕಳ ಹಕ್ಕುಗಳ ಆಯೋಗ ಎಚ್ಚರವಹಿಸಬೇಕು. ರಾಜ್ಯದ ಪಠ್ಯಕ್ರಮದ ಶಾಲೆಗಳನ್ನು ಉಳಿಸಬೇಕೆಂದು ಕ್ಯಾಮ್ಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಪತ್ರ ಬರೆದು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
