ನವದೆಹಲಿ:ಕಾವೇರಿ ನದಿ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ವಿವಾದ ಮುಂದುವರೆದಿದೆ. ಇದರ ನಡುವೆ ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.
ಇದನ್ನೂ ಓದಿ:ಬಿಜೆಪಿ-ಆರ್‌ಜೆಡಿ ಮಧ್ಯೆ ಭಾರೀ ಘರ್ಷಣೆ, ಗುಂಡಿನ ದಾಳಿಯಲ್ಲಿ ಓರ್ವ ಬಲಿ, 2 ದಿನ ಇಂಟರ್‌ನೆಟ್ ಬಂದ್!
ಮಂಗಳವಾರ ಸಭೆ ನಡೆಸಿದ ಪ್ರಾಧಿಕಾರ, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ಹರಿಸಲು ನಿರ್ದೇಶನ ನೀಡಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯೂ 2.5 ಟಿಎಂಸಿ ನೀರು ಹರಿಸಲು ಶಿಫಾರಸು ಮಾಡಿತ್ತು.
ಇತ್ತೀಚೆಗೆ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಮಿತಿ ಸಭೆಯಲ್ಲಿ ಕರ್ನಾಟಕದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಮಿತಿಯು ತಮಿಳುನಾಡಿಗೆ ಸೂಚಿಸಿತ್ತು. ಇದೀಗ ಮಂಗಳವಾರ ನಡೆದ ಸಭೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.
ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಕೊಡಗಿನ ತ್ರಿವೇಣಿ ಸಂಗಮದಲ್ಲಿ ಮಳೆ ಹೆಚ್ಚಾಗಿದ್ದು, ಕಾವೇರಿ ಒಡಲಿಗೆ ಜೀವಕಳೆ ಬಂದಿದೆ. ಪರಿಣಾಮ ಕೆಆರ್‌ಎಸ್ ಒಳ ಹರಿವು ಹೆಚ್ಚಾಗಿದೆ. ಕಳೆದೊಂದು ವಾರದಲ್ಲಿ 1 ಟಿಎಂಸಿಯಷ್ಟು ನೀರು ಕನ್ನಂಬಾಡಿ ಕಟ್ಟೆ ಸೇರಿದೆ ಎಂದು ವರದಿಯಾಗಿದೆ.
ಮಧ್ಯಪ್ರದೇಶ: ಫ್ಲೈಓವರ್‌ನಿಂದ ಉರುಳಿ ಬಿದ್ದ ಖಾಸಗಿ ಬಸ್; ಇಬ್ಬರು ಸಾವು, 40 ಮಂದಿಗೆ ಗಾಯ

‘ಪುರಿ ಜಗನ್ನಾಥ ಮೋದಿ ಭಕ್ತ ಹೇಳಿಕೆ: 3 ದಿನ ಉಪವಾಸ ಮಾಡುತ್ತೇನೆಂದ ಬಿಜೆಪಿಯ ಸಂಬಿತ್ ಪಾತ್ರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
