ನವದೆಹಲಿ:ಕರ್ನಾಟಕದಿಂದ ತಮಿಳಿನಾಡಿಗೆ ಜುಲೈ 12ರಿಂದ 31ರವರೆಗೆ  ಪ್ರತಿದಿನ ಒಂದು ಟಿಎಂಸಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.
ಇದನ್ನೂ ಓದಿ:ಕಾಶ್ಮೀರದ ಕಥುವಾದಲ್ಲಿ ಉಗ್ರರ ಹೊಂಚು ದಾಳಿ: 24 ಮಂದಿ ವಶಕ್ಕೆ, ವಿಚಾರಣೆ
ಇಂದು  ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ನೀರು ಬಿಡುವಂತೆ ತಮಿಳುನಾಡು ವಾದಮಾಡಿದೆ. ಇದಕ್ಕೆ ಪ್ರತಿಯಾಗಿ ಕರ್ನಾಟಕವೂ ಸಹ ಕಾವೇರಿಯಲ್ಲಿ ನೀರಿನ ಕೊರತೆ ಇದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಹೀಗಾಗಿ ನೀರು ಬಿಡಲು ಆಗುವುದಿಲ್ಲ ಎಂದು ಕರ್ನಾಟಕದ ಪರ ಅಧಿಕಾರಿಗಳು ವಾದ ಮಂಡಿಸಿದ್ದಾರೆ. ಎರಡೂ ರಾಜ್ಯಗಳ ವಾದ-ಪ್ರತಿವಾದ ಆಲಿಸಿದ CWRC, ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಶಿಫಾರಸು ಮಾಡಿದೆ
ರಾಜ್ಯದ ಪಶ್ಚಿಮಘಟ್ಟ, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದು ನದಿಗಳಿಗೆ ಮರುಜೀವ ಕೊಟ್ಟಿದೆ. ರಾಜ್ಯದ ಬಹುತೇಕ ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು, ಜಲಾಶಯಗಳ ಒಳಹರಿವು ಕೂಡ ಹೆಚ್ಚಾಗುತ್ತಿದೆ.
ಕೃಷ್ಣರಾಜ ಸಾಗರ (ಕೆಆರ್ ಎಸ್) ಜಲಾಶಯಕ್ಕೆ ಸದ್ಯ 8425 ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, ಶುಕ್ರವಾರ ವೇಳೆಗೆ ಈ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ಕೆಆರ್ ಎಸ್‌ ನಿಂದ ಸದ್ಯ 567 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. 49.45 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 25.09 ಟಿಎಂಸಿ ನೀರು ಸಂಗ್ರಹವಾಗಿದೆ.
ಅರ್ಧಕ್ಕೂ ಹೆಚ್ಚು ಭರ್ತಿಯಾದ ಕೆಆರ್​ಎಸ್:ಕಳೆದ ವರ್ಷ ನೀರಿಲ್ಲದೆ ಬಣಗುಡುತ್ತಿದ್ದ ಕನ್ನಂಬಾಡಿ ಅಣೆಕಟ್ಟೆ ಈ ಬಾರಿ ಮಳೆಗಾಲದಲ್ಲಿ ಬೇಗನೆ ತುಂಬುವ ಸಾಧ್ಯತೆ ಇದೆ. ಈಗಾಗಲೇ ಕೆಆರ್ ಎಸ್ ಜಲಾಶಯ ಅರ್ಧ ತುಂಬಿದ್ದು, ಜುಲೈ ಅಂತ್ಯ ಅಥವಾ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ.
ಮಳೆರಾಯ ಹೀಗೆ ಕೃಪೆ ತೋರಿದರೆ ಈ ಬಾರಿ ಕೃಷ್ಣರಾಜಸಾಗರ ಭರ್ತಿಯಾಗುವುದು ಗ್ಯಾರಂಟಿ. ಆದಷ್ಟು ಬೇಗ ಜಲಾಶಯ ಭರ್ತಿಯಾಗಿ ತಮಿಳುನಾಡಿನ ಪಾಲಿನ ನೀರನ್ನೂ ಹರಿಸಿದರೆ, ಕೆಆರ್ ಎಸ್ ವ್ಯಾಪ್ತಿಯ ರೈತರು ಕೂಡ ನೆಮ್ಮದಿಯಾಗಿ ಬೆಳೆ ಬೆಳೆದುಕೊಳ್ಳಬಹುದು.
ವಿದ್ಯಾವಂತರಿಂದಲೇ ಹೆಚ್ಚುತ್ತಿದೆ ಭ್ರಷ್ಟಾಚಾರ: ನಿವೃತ್ತಿ ನ್ಯಾ. ಸಂತೋಷ್ ಹೆಗ್ಡೆ ಕಳವಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 20 =
Remember me
