ಮೈಸೂರು:ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ವಿವಿಧ ಸಂಘಟನೆಗಳು ಬೆಂಗಳೂರು ಬಂದ್​ ನಡೆಸಿದ್ದರೂ, ತಮಿಳುನಾಡಿಗೆ ನಿತ್ಯ ಮೂರು ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ.
ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು. ಸಿಡಬ್ಲ್ಯುಆರ್​​ಸಿ ಮುಂದಿನ 18 ದಿನ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಲು ಸೂಚಿಸಿದೆ. ಈ ಬಗ್ಗೆ ಇನ್ನೂ ಕಾನೂನು ತಜ್ಞರ ಜೊತೆ ಚರ್ಚೆ ಮಾಡಬೇಕಿದೆ. ಚರ್ಚೆ ಬಳಿಕ ಸರ್ಕಾರದ ನಿರ್ಧಾರ ತಿಳಿಸುತ್ತೇವೆ ಎಂದರು.
ಅಲ್ಲದೆ, ನಮಗೆ ಈ ವಿಚಾರವಾಗಿ ಇನ್ನೂ ಸೆ.27ರ ವರೆಗೆ ಕಾಲಾವಕಾಶವಿದೆ. ಆದೇಶ ಇರುವುದು ಸೆ.28ರಿಂದ 18 ದಿನ ಅಂತ. ಹೀಗಾಗಿ ನಮ್ಮ ತೀರ್ಮಾನ ತೆಗೆದುಕೊಳ್ಳಲು ಇನ್ನೂ ಸಮಯ ಇದೆ ಎಂದು ಸಿದ್ದರಾಮಯ್ಯ ಹೇಳಿದರು. ಜೊತೆಗೆ ಕಾವೇರಿ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕಾರಣ ಮಾಡುತ್ತಿದೆ ಎಂದ ಅವರು, ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಕಾವೇರಿ ವಿಚಾರದಲ್ಲಿ ಕನ್ನಡಿಗರಿಗೆ ಮತ್ತೊಂದು ಶಾಕ್: ಅ.15 ರವರೆಗೆ 3000 ಕ್ಯೂಸೆಕ್ ನೀರು ಬಿಡಲು ಶಿಫಾರಸು

ಬೆಂಗಳೂರು-ಮೈಸೂರು ದಶಪಥದಲ್ಲಿ ಆರು ಕಾರುಗಳು ಮಧ್ಯೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
