ಬೆಂಗಳೂರು:ನಾ ಮುಂದು, ತಾ ಮುಂದು ಎನ್ನುತ್ತಾ ಗೃಹ ಜ್ಯೋತಿ ಯೋಜನೆಗೆ ಜನರು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ. ಈ ನಡುವೆ ಏಕಕಾಲದಲ್ಲಿ ಸುಮಾರು 5 ಕೋಟಿಗೂ ಅಧಿಕ ಜನರು ಅರ್ಜಿ ಸಲ್ಲಿಕೆ ಮಾಡಿದರೆ ಸೇವಾ ಸಿಂಧು ಪೋರ್ಟಲ್​ಗೆ ತಡೆಯುವ ಸಾಮರ್ಥ್ಯ ಇದೆಯಾ? ಎಂಬ ಪ್ರಶ್ನೆ ಉದ್ಭವಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು ಅಮಾಯಕ ಜನರನ್ನು ವಂಚಿಸಲು ಮುಂದಾಗಿದ್ದಾರೆ ಎಂದು ಸೈಬರ್ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.
ಸೇವಾ ಸಿಂಧು ಪೋರ್ಟಲ್​ನಲ್ಲಿ ಎಲ್ಲರೂ ಏಕಕಾಲದಲ್ಲಿ ಲಾಗ್​ ಇನ್​ ಆಗುತ್ತಿರುವುದರಿಂದ ಸರ್ವರ್ ಸಮಸ್ಯೆ ಕಾಣುತ್ತಿದೆ. ಸರ್ವರ್ ಲೋಡ್ ಹೆಚ್ಚು ಮಾಡುವ ಪ್ರಯತ್ನ ಸರ್ಕಾರ ಮಾಡಬಹುದು. ಆದರೆ ಕೆಲವೇ ತಿಂಗಳಿಗಾಗಿ ಬ್ಯಾಂಡ್ ವಿಡ್ತ್ ಹೆಚ್ಚು ಮಾಡುವುದು ಕಷ್ಟ. ಇದೇ ಸಂದರ್ಭವನ್ನು ಬಳಸಿಕೊಂಡು ಜನರನ್ನು ಮೋಸದ ಬಲೆಗೆ ಬೀಳಿಸಲು ಸೈಬರ್ ವಂಚಕರು ಕಾಯುತ್ತಿದ್ದಾರೆ. ಹೀಗಾಗಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕೆಂದು ಸೈಬರ್ ಕ್ರೈಂ ತಜ್ಞರು ಸೂಚಿಸಿದ್ದಾರೆ.
ಇದನ್ನೂ ಓದಿ:ವಿದ್ಯುತ್ ಕಡಿತ​ ಸಮಸ್ಯೆ; ಮಹಿಳೆಯರ ಆಕ್ರೋಶಕ್ಕೆ ಪುಡಿಪುಡಿಯಾಯ್ತು ಪವರ್ ಹೌಸ್​ನ ಕಿಟಿಕಿ, ಬಾಗಿಲು!
ಈ ಸಂದರ್ಭದಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಸೈಬರ್ ಕ್ರೈಂ ತಪ್ಪಿಸುವುದು ಬಹಳ ಮುಖ್ಯವಾಗುತ್ತದೆ. ಮಾಹಿತಿ ಹಾಗೂ ದತ್ತಾಂಶ ಸೋರಿಕೆಯಾಗದಂತೆ ತಡೆಯಬೇಕು. ಮುಖ್ಯವಾಗಿ ನೋಂದಣಿ ಬಳಿಕ ಜನರಿಗೆ ಒಟಿಪಿ ಸಂಖ್ಯೆಯನ್ನು ಎಲ್ಲಿಯೂ ಹಂಚಿಕೊಳ್ಳಬಾರದು ಎಂಬ ಬಗ್ಗೆ ಅರಿವು ಮೂಡಿಸಬೇಕು ಎಂದು ಸೈಬರ್ ತಜ್ಞರು ಸಲಹೆ ನೀಡಿದ್ದಾರೆ.
ಏಕ ಕಾಲದಲ್ಲಿ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗಿದ್ದರಿಂದ ನಿನ್ನೆಯಂತೆ ಇಂದು ಕೂಡ ಬಹುತೇಕ ಕಡೆ ಸೇವಾ ಸಿಂಧು ಪೋರ್ಟಲ್​ ಸರ್ವರ್ ಡೌನ್ ಆಗಿದೆ. ಹೀಗಾಗಿ ಅರ್ಜಿ ಸಲ್ಲಿಸಲು ಬಂದವರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆಯ ಹೊರತಾಗಿ ಮೊದಲ ದಿನವೇ 55 ಸಾವಿರ ಮಂದಿ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − four =
Remember me
