ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಅಸನಿ ಚಂಡಮಾರುತದಿಂದ ರಾಜ್ಯದಲ್ಲಿ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಮತ್ತು ಹಾಸನದಲ್ಲಿ ಮಾ. 21ರಿಂದ ಮಾ.23ರವರೆಗೆ ಭಾರಿ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಲ್ಲಿ ಮುಂದಿನ 72 ಗಂಟೆ ಗುಡುಗು ಮಿಂಚು ಸಹಿತ ಹಗುರದಿಂದ ಕೂಡಿದ ಮಳೆಯಾಗಲಿದೆ.
ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಮಧ್ಯಾಹ್ನದವರೆಗೆ ಬಿಸಿಲು ಜತೆಗೆ ಮೋಡಕವಿದ ವಾತಾವರಣವಿತ್ತು. ಸಂಜೆ ವೇಳೆ ಕೆಲವೆಡೆ ಭರ್ಜರಿ ಮಳೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗಿದೆ.
ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮಳೆ; ಎಷ್ಟು ದಿನ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
