ಬೆಂಗಳೂರು:ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 8ರಿಂದ ಚುರುಕು ಪಡೆಯಲಿದೆ. ಶುಕ್ರವಾರ ಬಳ್ಳಾರಿ ಜಿಲ್ಲೆಯ ಹಗರಿ, ತುಮಕೂರಿನ ಮಿಡಿಗೇಶಿ, ಕಲಬುರಗಿಯ ಚಿತ್ತಾಪುರ, ಬೆಂಗಳೂರು ನಗರದ ಜ್ಞಾನಭಾರತಿ ವಿವಿ ಕ್ಯಾಂಪಸ್, ಬಳ್ಳಾರಿಯ ಕುರುಗೋಡು, ಕೋಲಾರ ಹಾಗೂ ರಾಮನಗರ ಸೇರಿ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಬಿದ್ದಿದೆ.
ಚಂಡಮಾರುತ ಪರಿಣಾಮದಿಂದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರದಲ್ಲಿ ಮೇ 8 ಮತ್ತು ಮೇ 9ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಮೇ 8ರಂದು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಸುತ್ತಮುತ್ತ ಪ್ರದೇಶಗಳು, ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ, ರಾಯಲಸೀಮಾ ಹಾಗೂ ಕರ್ನಾಟಕದಲ್ಲಿ ಭರ್ಜರಿ ವರ್ಷಧಾರೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ( ಐಎಂಡಿ) ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 14 =
Remember me
