ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ “ರಿಮಾಲ್​’ ಚಂಡಮಾರುತ ಪರಿಣಾಮದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 4 ದಿನ ಮಳೆ ಸುರಿಯಲಿದೆ.
ಭಾನುವಾರ ಬಾಗಲಕೋಟೆಯಲ್ಲಿ 6 ಮಿಮೀ ಮಳೆ ಬಿದ್ದಿದೆ. ಹಾವೇರಿಯ ಹನುಮಾನ್​ಮಟ್ಟಿ, ಕೊಪ್ಪಳದ ಗಂಗಾವತಿ, ಶಿವಮೊಗ್ಗ ಆಗುಂಬೆ, ಯಾದಗಿರಿಯ ಕವಡಿಮಟ್ಟಿ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ವರ್ಷಧಾರೆಯಾಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಮೇ 27ರಿಂದ ಮೇ 29ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ. ಉತ್ತರ ಕನ್ನಡ, ಕಲಬುರಗಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ ಮೂರು ದಿನ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಲಾಲ್‌ಬಾಗ್‌ ಮಾವು-ಹಲಸು ಮೇಳಕ್ಕೆ ಹರಿದುಬಂದ ಜನಸಾಗರ; ಬಾಯಲ್ಲಿ ನೀರೂರಿಸುವ ವಿವಿಧ ತಳಿಯ ಹಣ್ಣುಗಳುಪೂರಕ ವಾತಾವರಣ:ಅಂಡಮಾನ್​ ಮತ್ತು ನಿಕೋಬಾರ್​ ದ್ವೀಪದಿಂದ ಮೇ 19ರಂದು ನೈಋತ್ಯ ಮಾನ್ಸೂನ್​ ಆರಂಭವಾಗಿದ್ದು, ಸದ್ಯ ಬಂಗಾಳಕೊಲ್ಲಿಯ ಮಧ್ಯ, ಈಶಾನ್ಯ ಭಾಗದಲ್ಲಿ ಮಾನ್ಸೂನ್​ ಇನ್ನಷ್ಟು ವ್ಯಾಪಿಸಲು ಪೂರಕ ವಾತಾವರಣ ಇದೆ. ಮುಂದಿನ 4 ದಿನಗಳಲ್ಲಿ ಹಂತ ಹಂತವಾಗಿ ಕೇರಳಕ್ಕೆ ಸಮೀಪಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮಾಹಿತಿ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + ten =
Remember me
