ಬೆಂಗಳೂರು:ಅಸನಿ ಚಂಡಮಾರುತ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ಮೂರ್ನಾಲ್ಕು ದಿನ ಮುಂದುವರಿಯಲಿದೆ. ಸೋಮವಾರವೂ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು, ಚಾಮರಾಜನಗರದ ಹರದನಹಳ್ಳಿಯಲ್ಲಿ 19 ಮಿಮೀ ಮತ್ತು ಕೊಪ್ಪಳದ ಮುನಿರ್‌ಬಾದ್‌ನಲ್ಲಿ 15 ಮಿಮೀ ಮಳೆ ಸುರಿದಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ ಮತ್ತು ಬೀದರ್‌ನಲ್ಲಿ ಮೇ 10ರಂದು ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣ, ಒಡಿಶಾದ ಪುರಿಯತ್ತ ಚಂಡಮಾರುತ ಚಲಿಸುತ್ತಿದ್ದು, ಮೇ 10ರಿಂದ ಮೇ 12ರವರೆಗೆ ಈ ಭಾಗಗಳಲ್ಲಿ ಭಾರಿ ಮಳೆ ಬೀಳಲಿದೆ. ಗಂಟೆಗೆ 110-100 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಎತ್ತರದ ಅಲೆಗಳು ಎಳೆಯುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ಅಕ್ಕಪಕ್ಕದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚಿಸಿದೆ.
ಒಂದು ಮುತ್ತಿನ ಕಥೆ: ಮದುವೆಯಂತೂ ತ್ವರಿತ, ಅದು ಬಿಂದುವಲ್ಲ ಹರಿತ!; ಖ್ಯಾತ ನಟನ ಸ್ಪಷ್ಟೀಕರಣ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
