ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎದುರಿಸುತ್ತಿರುವ ಕಾನೂನು ಸಂಕಷ್ಟದಿಂದ ಸದ್ಯಕ್ಕೆ ನಿರಾಳರಾಗಿದ್ದಾರೆ. ಹೈಕೋರ್ಟ್​ನಲ್ಲಿ ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಏಕಸದಸ್ಯ ಪೀಠವು ಡಿ.ಕೆ.ಶಿವಕುಮಾರ್ ಅರ್ಜಿಯನ್ನು ವಜಾಗೊಳಿಸಿತ್ತು.
ಇದನ್ನೂ ಓದಿ:ಮೂರನೇ ಮಗುವಾದರೆ 5 ಲಕ್ಷ ರೂ. ಕೊಡ್ತಾರಂತೆ!; ಶಿಕ್ಷಣ-ಚಿಕಿತ್ಸೆಯೂ ಉಚಿತ, ಮದ್ವೆ ಖರ್ಚಿಗೂ ಧನಸಹಾಯ: ಇಲ್ಲಿದೆ ವಿವರ..
ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು. ಈ ಸಂಬಂಧ ಇಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದಿತ್ತು. ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಿದ ವಿಭಾಗೀಯ ಪೀಠವು ಸಿಬಿಐಗೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದೆ. ಹೀಗಾಗಿ ಡಿ.ಕೆ.ಶಿವಕುಮಾರ್ ಈ ಪ್ರಕರಣದಲ್ಲಿ ಸದ್ಯಕ್ಕೆ ನಿರಾಳರಾದಂತಾಗಿದೆ.
ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
