ಬೆಂಗಳೂರು:ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಆರ್​.ಅಶೋಕ್​ ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ಈ ಕ್ಷೇತ್ರದ ಮೇಲೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್​ ದೃಷ್ಟಿಹರಿಸಿದ್ದಾರೆ.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, 2028 ರಲ್ಲಿ ಪದ್ಮನಾಭನಗರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎನ್ನುವ ಭರವಸೆಗೆ ಶುಕ್ರವಾರದ ಶುಭದಿನ ಪೀಠಿಕೆಯಾಗಿದೆ ಎಂದರು.ವಿವಿಧ ಪಕ್ಷಗಳ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ವಿಶ್ವ ಪ್ರಜಾಪ್ರಭುತ್ವ ದಿನ ಸಾಕ್ಷಿಯಾಗಿದೆ. ಇಂತಹ ಪವಿತ್ರವಾದ ದಿನದಂದು ಸಂವಿಧಾನದ ಪೀಠಿಕೆ ಓದಿ ನಾನು ಮತ್ತು ರಾಮಲಿಂಗಾರೆಡ್ಡಿ ಅವರು ಈ ಶುಭ ಕಾರ್ಯಕ್ಕೆ ಬಂದಿದ್ದೇವೆ ಎಂದು ಹೇಳುವ ಮೂಲಕ ಪದ್ಮನಾಭ ನಗರ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ತಂತ್ರ ರೂಪಿಸಿರುವ ಸುಳಿವು ನೀಡಿದರು.
ಸಂಘಟನೆ ಮಾಡುವುದು, ಪಕ್ಷ ಕಟ್ಟುವುದು ಅತ್ಯಂತ ಕಷ್ಟದ ಕೆಲಸ ಎಂಬುದು ನನಗೆ ಅರಿವಿಗೆ ಬಂದಿದೆ. ಇಂದು ಪಕ್ಷ ಸೇರಿದವರು ಬೆಂಗಳೂರಿನಲ್ಲಿ ಹಾಗೂ ಪದ್ಮನಾಭನಗರದಲ್ಲಿ ದೊಡ್ಡ ಸಂಘಟನಾ ಶಕ್ತಿಗಳು. ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಸೇರಿರುವ ನಿಮ್ಮ ನಿರ್ಧಾರ ಸರಿಯಾಗಿದೆ. ಇದು ಭಾಗ್ಯ, ಇದು ಭಾಗ್ಯ ಇದು ಭಾಗ್ಯವಯ್ಯ ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಎನ್ನುವ ಪುರಂದರದಾಸರ ಕೀರ್ತನೆಯಂತೆ ಪದ್ಮನಾಭನಗರದ ನಾಯಕರನ್ನು ಅಪ್ಪಿಕೊಳ್ಳುವ ಭಾಗ್ಯ ಸಿಕ್ಕಿದ್ದು ನಮ್ಮ ಪುಣ್ಯ ಎಂದು ಹೇಳಿದರು.
ರಾಮಲಿಂಗಾರೆಡ್ಡಿ ಅವರು ಹಾಗೂ ನಾವು ಪದ್ಮನಾಭನಗರದ ನಾಯಕರ ಜತೆಗಿದ್ದೇವೆ. ಪಕ್ಷದ ಹಳಬರನ್ನು ಜತೆಯಲ್ಲಿ ಕರೆದುಕೊಂಡು ಹೋಗಬೇಕು, ಪದ್ಮನಾಭನಗರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದೇ ಇರಬಹುದು ಆದರೆ ಕಾರ್ಯಕರ್ತರು ಪಕ್ಷದ ಭಾವುಟ ಹಿಡಿದಿದ್ದಾರೆ “ಹೆಣ, ಪಲ್ಲಕ್ಕಿ ಹೊತ್ತಿದ್ದಾರೆ” ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದರು.
ಕಾಂಗ್ರೆಸ್ ಸೇರುವವರನ್ನು ತಡೆದರು, ಅಡ್ಡಿಪಡಿಸಿದರು. ಈಗ ಆರ್​.ಅಶೋಕ್​ ಅವರಿಗೆ ಬಿಜೆಪಿ ಕಾರ್ಯಕರ್ತರು ನೆನಪಾಗುತ್ತಿದ್ದಾರೆ. ಅಶೋಕಣ್ಣನಿಗೆ ಅನೇಕ ಕ್ಷೇತ್ರಗಳು ಇದ್ದವು ಅಲ್ಲೆ ಎಲ್ಲಾದರೂ ನಿಲ್ಲಬಹುದಿತ್ತು, ಯಾಕೋ ಇಲ್ಲೇ ಬಂದು ನಿಂತು ನಿಷ್ಟಾವಂತ ಕಾರ್ಯಕರ್ತರ ಬೆಳವಣಿಗೆಗೆ ಅಡ್ಡಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ನೋಡೋಣ. ಕನಕಪುರದಿಂದ ಬಂದು ನೆಲೆ ನಿಂತಿರುವ 35 ಸಾವಿರ ಮತದಾರರು ಕ್ಷೇತ್ರದಲ್ಲಿ ಇದ್ದಾರೆ. ನಾವೆಲ್ಲಾ ಒಟ್ಟಿಗೆ ಸೇರೋಣ, ಚರ್ಚೆ ಮಾಡೋಣ, ಕೆಲಸ ಮಾಡೋಣ ಎಂದು ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × two =
Remember me
