ಬೆಂಗಳೂರು:ರಾಹುಲ್ ಗಾಂಧಿ ಅಪೇಕ್ಷೆ ಮೇರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ದಿನೇಶ್ ಗುಂಡೂರಾವ್ ಅವಧಿಯಲ್ಲಿ ನಡೆದ ಬೆಳವಣಿಗೆ ಹಿನ್ನೆಲೆ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರಂಭ ದಿಂದಲೇ ಎಚ್ಚರಿಕೆ ಹೆಜ್ಜೆ ಇಡಲಾರಂಭಿಸಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಹೆಸರು ಘೋಷಣೆಯಾಗುತ್ತಿದ್ದಂತೆ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಶನಿವಾರ ಬೆಳಗ್ಗೆ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮನೆಗೆ ಭೇಟಿಕೊಟ್ಟು ಸಹಕಾರ ನೀಡುವಂತೆ ಕೋರಿದರು. ಈ ವೇಳೆ ಸಣ್ಣ ರಾಜಕೀಯ ಚರ್ಚೆಗಳು ನಡೆದಿದ್ದು, ಉಭಯ ನಾಯಕರು ಸಲಹೆ ಸೂಚನೆ ನೀಡಿದ್ದಾರೆ. ಸಂಜೆ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ, ದಿನೇಶ್ ಗುಂಡೂರಾವ್ ಮನೆಗೂ ಭೇಟಿ ಕೊಟ್ಟರು.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಎಲ್ಲರನ್ನ ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ಹಿರಿಯರ ಅನುಭವ- ಮಾರ್ಗದರ್ಶನ, ಯುವಕರ ಸ್ಪೂರ್ತಿ, ಮಹಿಳೆಯರ ಸಂಘಟನಾ ಶಕ್ತಿ ಅತ್ಯಗತ್ಯ, ಇಲ್ಲದಿದ್ದರೆ ಪಕ್ಷವನ್ನು ಸದೃಢವಾಗಿ ಸಂಘಟಿಸಲು ಸಾಧ್ಯವಿಲ್ಲ. ಹಾಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇನೆ ಎಂದರು. ದಿನೇಶ್ ಗುಂಡೂರಾವ್​ರನ್ನು ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿ ಹಿರಿಯ ನಾಯಕರಲ್ಲಿ ಬಹುತೇಕರು ಅಸಹಕಾರ ನೀಡಿದ್ದರು. ಹೈಕಮಾಂಡ್​ಗೂ ದೂರು ನೀಡಿದ್ದರು. ಈ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸಿದ್ದ ಡಿಕೆಶಿ, ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.

ಅವಕಾಶದ ನಿರೀಕ್ಷಣೆ, ಶಿವಕುಮಾರ್ ಸುತ್ತ ಪ್ರದಕ್ಷಿಣೆ: ನೂತನ ಅಧ್ಯಕ್ಷರ ತಂಡ ಸೇರಲು ಅತ್ಯುತ್ಸಾಹ

ಖಾಲಿ ಖಾಲಿ ಸ್ಟೇಡಿಯಂನಲ್ಲಿ ಗೆದ್ದ ಆಸೀಸ್: ಪ್ರೇಕ್ಷಕರಿಲ್ಲದೆ ನಡೆದ ಮೊದಲ ಏಕದಿನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
