ಬೆಂಗಳೂರು:“ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ಶಾಸಕರು ಎಲ್ಲೂ ಹೋಗುವುದಿಲ್ಲ. ಅವರನ್ನು ರಕ್ಷಣೆ ಮಾಡುವ ಅಗತ್ಯವಿಲ್ಲ. ಆ ಬಗ್ಗೆ ನನಗೆ ಇದುವರೆಗೂ ಯಾವುದೇ ಜವಾಬ್ದಾರಿ ನೀಡಿಲ್ಲ. ತೆಲಂಗಾಣ ಸೇರಿದಂತೆ ಕೆಲವು ಕಡೆ ನಮ್ಮ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ನಮ್ಮ ಪಕ್ಷದವರು ಸ್ಥಳೀಯ ಮಟ್ಟದಲ್ಲೇ ಇದನ್ನು ನಿಭಾಯಿಸುತ್ತಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
‘ಪಂಚರಾಜ್ಯ ಚುನಾವಣೆ ನಂತರ ಪಕ್ಷದ ಹೈಕಮಾಂಡ್ ಶಾಸಕರ ರಕ್ಷಣೆ ಜವಾಬ್ದಾರಿ ನೀಡಿದೆಯೇ ಎಂದು ಮಾಧ್ಯಗಳ ಪ್ರಶ್ನೆಗೆ ಸದಾಶಿವನಗರ ನಿವಾಸದ ಬಳಿ ಉತ್ತರಿಸುತ್ತಾ, ರಾಜಸ್ಥಾನದಲ್ಲಿ ತೀವ್ರ ಸ್ಪರ್ಧೆ ಇರುವ ಮುನ್ಸೂಚನೆ ಸಿಕ್ಕಿದೆ ಎಂದು ಕೇಳಿದಾಗ, “ನನಗೆ ನನ್ನದೇ ಆದ ಅಭಿಪ್ರಾಯವಿದೆ. ಮತಯಂತ್ರದಲ್ಲಿರುವ ಮತದ ಮಾಹಿತಿ ನಿಮಗೂ ಗೊತ್ತಿಲ್ಲ, ನಮಗೂ ಗೊತ್ತಿಲ್ಲ. 48 ತಾಸುಗಳ ನಂತರ ಎಲ್ಲವೂ ಹೊರಬೀಳಲಿದೆ. ಈ ಸಮೀಕ್ಷೆಗಳು ಸುಮಾರು 10 ಸಾವಿರ ಮತದಾರರನ್ನು ಸಂಪರ್ಕಿಸಿ ಸಮೀಕ್ಷೆ ಮಾಡಲಾಗಿದೆ. ನಾವು ನಮ್ಮ ರಾಜ್ಯದಲ್ಲಿ ಪ್ರತಿ ಕ್ಷೇತ್ರದಲ್ಲಿ ಟಿಕೆಟ್ ನೀಡುವಾಗ 1 ಲಕ್ಷದಷ್ಟು ಜನರನ್ನು ಸಮೀಕ್ಷೆ ಮಾಡಿದ್ದೆವು. ತೆಲಂಗಾಣದಲ್ಲಿ ನಾನು 20 ಕ್ಷೇತ್ರ ಓಡಾಡಿದ್ದೇನೆ. ಬೇರೆ ಕ್ಷೇತ್ರಗಳಲ್ಲೂ ವರದಿ ಬಹಳ ಉತ್ತಮವಾಗಿದೆ” ಎಂದರು.
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆ ಕುರಿತು ಕೇಳಿದ ಪ್ರಶ್ನೆಗೆ, “ಪಕ್ಷದ ಅಧ್ಯಕ್ಷ ಹೊರತಾಗಿ ವೈಯಕ್ತಿಕವಾಗಿ ನನಗೆ ಎಕ್ಸಿಟ್ ಪೋಲ್​ಗಳ ಮೇಲೆ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಮ್ಮ ರಾಜ್ಯದಲ್ಲಿ ನಾನು ಏನು ಮಾಡಿದ್ದೆ, ಯಾವ ರೀತಿ ಎಕ್ಸಿಟ್ ಪೋಲ್ ಗಳು ಬಂದವು ಎಂಬುದು ನನಗೆ ಗೊತ್ತಿದೆ. ಯಾರು ಕ್ಷೇತ್ರಗಳಲ್ಲಿ ಸುತ್ತಾಡಿರುತ್ತಾರೋ ಅವರಿಗೆ ಮಾತ್ರ ವಾಸ್ತವಾಂಶ ತಿಳಿದಿರುತ್ತದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ತೆಗೆದುಕೊಳ್ಳುವ ಮಾದರಿಗಳು ಅಲ್ಪಪ್ರಮಾಣದ್ದಾಗಿರುತ್ತದೆ. ಅದು ಇಡೀ ರಾಜ್ಯದ ಚಿತ್ರಣವನ್ನು ನಿರ್ಧರಿಸುವುದಿಲ್ಲ” ಎಂದು ತಿಳಿಸಿದರು.
ಕೆಲ ರಾಜ್ಯಗಳಲ್ಲಿ ನೇರಹಣಾಹಣಿ ಇದ್ದು, ಆ ರಾಜ್ಯಗಳ ಶಾಸಕರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, “ಈ ಬಗ್ಗೆ ಗೊತ್ತಿಲ್ಲ. ರಾಜಸ್ಥಾನ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಪಕ್ಷ ಹೇಳಿದ ಕೆಲಸ ಮಾಡಬೇಕಾಗುತ್ತದೆ. ನಮ್ಮ ಮುಂದೆ ಬೇರೆ ಆಯ್ಕೆಗಳಿಲ್ಲ” ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 1 =
Remember me
