ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಬಹಿರಂಗಗೊಂಡಿದ್ದರ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ ಎಂಬ ಜೆಡಿಎಸ್ ನಾಯಕರ ಆರೋಪ ಕೈಪಾಳಯವನ್ನು ಕಂಗಾಲಾಗಿಸಿದ್ದು, ಕಾಂಗ್ರೆಸ್ ನಾಯಕರು ಡಿಸಿಎಂ ಡಿ.ಕೆ.ಶಿವಕುಮಾರ್ ಬೆನ್ನಿಗೆ ನಿಂತಿದ್ದಾರೆ.
ಒಕ್ಕಲಿಗ ಸಮುದಾಯದ ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ದೇವರಾಜೇಗೌಡರನ್ನು ತರಾಟೆಗೆ ತೆಗೆದುಕೊಂಡು ವಿಷಯಾಂತರ ಮಾಡದಂತೆ ತಾಕೀತು ಮಾಡಿದರು. ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ವಿಡಿಯೋ ಮಾಡಿಕೊಂಡವರ ಕೃತ್ಯದ ಬಗ್ಗೆ ಮಾತನಾಡುವುದು ಬಿಟ್ಟು ವಿಡಿಯೋ ಹಂಚಿಕೆ ಬಗ್ಗೆ ಮಾತನಾಡಲಾಗುತ್ತಿದೆ. ಇದರಲ್ಲಿ ಡಿ.ಕೆ.ಶಿವಕುಮಾರ್ ಮಧ್ಯ ಪ್ರವೇಶವಾಗಿಲ್ಲ. ಟೀಕೆ ಮಾಡಿದ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರು ತಿರುಗೇಟು ನೀಡಿದ್ದಾರೆ. ಈ ವಿಚಾರಕ್ಕೂ ಮೊದಲೇ ಇಬ್ಬರ ನಡುವೆ ಟೀಕೆ, ಟಿಪ್ಪಣಿಗಳು ನಡೆದಿವೆ ಎಂದು ಸ್ಪಷ್ಟಪಡಿಸಿದರು.
ಇಂತಹ ಸೂಕ್ಷ್ಮ ವಿಚಾರವನ್ನು ಜನತಾದಳದವರು ಬೀದಿ ರಂಪ ಮಾಡುತ್ತಿದ್ದಾರೆ. ಡಿಕೆಶಿ, ದೇವರಾಜೇಗೌಡ ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಸಹ ಏನೂ ಇಲ್ಲ. ದೇವರಾಜೇಗೌಡ ಹಾಗೂ ಶಿವರಾಮೇಗೌಡ ಇಬ್ಬರೂ ಬಿಜೆಪಿ ನಾಯಕರಾಗಿರುವ ಕಾರಣಕ್ಕೆ ಪೋನ್ ನೀಡಿದಾಗ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಅವರ ಮಧ್ಯಪ್ರವೇಶವಾಗಿಲ್ಲ. ಪ್ರಕರಣದಲ್ಲಿ ಒಕ್ಕಲಿಗ ಸಮಾಜವನ್ನು ಎಳೆದು ತರುವುದು ಒಳ್ಳೆಯದಲ್ಲ. ಸಮಾಜವು ಒಂದಷ್ಟು ಜನರಿಗೆ ಹೆಚ್ಚು, ಕಡಿಮೆ ಆಶೀರ್ವಾದ ಮಾಡಿರಬಹುದು. ಆದರೆ ಎಲ್ಲವೂ ನಮ್ಮದೇ ಹಿಡಿತದಲ್ಲಿ ಇದೆ ಎಂದು ಭಾವಿಸುವುದು ತಪ್ಪು ಎಂದರು.
ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣ. ಮಾನಹರಣ, ಶೀಲ ಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ. ಇಲ್ಲಿ ತಪ್ಪು ಮಾಡಿದವರಿಗೆ, ಮಾನ ಹಾನಿ ಮಾಡಿದವರಿಗೆ ಶಿಕ್ಷೆ ಆಗಬೇಕು. ಆದರೆ ಮಾನ, ಮನೆ, ಮಾಂಗಲ್ಯ ದೋಚಿದ್ದು ಅಪರಾಧ ಅಲ್ಲ, ಇದರ ವಿರುದ್ದ ಮಾತನಾಡಿದ್ದು ಅಪರಾಧವಾಗಿದೆ. ಮೂಲ ಪ್ರಕರಣವನ್ನು ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. ಸಂತ್ರಸ್ಥರ ಮಾನ ಹರಣವಾಗಿದೆ ಜೊತೆಗೆ ನ್ಯಾಯ ಹರಣ ಮಾಡಲಾಗುತ್ತಿದೆ ಎಂದರು.
ಚಿಕ್ಕಮಗಳೂರು:ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ ಕೇವಲ ಬ್ಲ್ಯಾಕ್​ವೆುೕಲರ್ ಅಲ್ಲ. ಬದಲಿಗೆ ಕಿಂಗ್ ಆಫ್ ಬ್ಲ್ಯಾಕ್​ವೆುೕಲರ್. ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಹೆದರಿ ಸುವುದೇ ಅವರ ಕೆಲಸ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪೆನ್​ಡ್ರೖೆವ್ ಪ್ರಕರಣ ಪೂರ್ತಿ ಎಚ್.ಡಿ.ಕುಮಾರಸ್ವಾಮಿಗೆ ಗೊತ್ತಿದೆ. ಆದರೆ ಈಗ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ ಎನ್ನುತ್ತಿದ್ದಾರೆ. ಜತೆಗೆ ಇದು ಒಕ್ಕಲಿಗ ನಾಯಕರ ಪೈಪೋಟಿಗಾಗಿ ನಡೆದ ಘಟನೆ ಎನ್ನುತ್ತಿದ್ದಾರೆ. ನನ್ನ ರಾಜೀನಾಮೆ ಬೇಕಿದ್ದರೆ ಕೊಡೋಣ. ಮುಗಿಸುವುದೇ ಅವರ ಕೆಲಸ. ಅದಕ್ಕೂ ಮೊದಲು ಪ್ರಕರಣದ ಕುರಿತು ಚರ್ಚೆ ನಡೆಸಲು ಸಮಯ ಹಾಗೂ ವಿಧಾನಸಭೆ ಇದೆ. ಎಲ್ಲ ದಾಖಲೆ ತೆಗೆದುಕೊಂಡು ಬಂದರೆ ಅಲ್ಲೇ ರ್ಚಚಿಸೋಣ ಎಂದು ಸವಾಲೆಸೆದರು.
ಪ್ರಕರಣದಲ್ಲಿ ಅವರದೇ ಆಯಾಮದಲ್ಲಿ ಮಾತನಾಡುತ್ತಿದ್ದಾರೆ. ಹೀಗೆ ಮಾತನಾಡಲು ಅವರು ವಕೀಲರೇ ಅಥವಾ ತೀರ್ಪು ನೀಡಲು ನ್ಯಾಯಾಧೀಶರೇ. ಎಸ್​ಐಟಿ ಎಂದರೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ಎನ್ನುತ್ತಿದ್ದಾರೆ. ಆದರೆ ಕಥಾನಾಯಕ, ಡೈರೆಕ್ಟರ್ ಎಲ್ಲ ಕುಮಾರಸ್ವಾಮಿ ಅವರೇ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.
ಬೆಂಗಳೂರು:ಪ್ರಜ್ವಲ್ ಪ್ರಕರಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡ ವ್ಯಕ್ತಿ ನೀನು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಏಕವಚನದಲ್ಲಿ ಹರಿಹಾಯ್ದಿದ್ದಾರೆ.

ಬೆಂಗಳೂರಿನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಮಾತನಾಡಿದ ಅವರು, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೖೆವ್​ಗಳನ್ನು ಹಾದಿಬೀದಿಯಲ್ಲಿ ಸುರಿದಿರುವ ಕಿಡಿಗೇಡಿಗಳನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಆರೋಪ ಮಾಡಿದರು. ಡಿ.ಕೆ.ಶಿವಕುಮಾರ್ ಸಂಸ್ಕೃತಿ ಎಂಥದು ಎಂದು ಎಲ್ಲರಿಗೂ ಗೊತ್ತಿದೆ. ವಕೀಲರಾದ ದೇವರಾಜೇಗೌಡ ಜತೆ ಯಾಕಪ್ಪ ಮಾತಾನಾಡಿದೆ ನೀನು? ನಿನಗೇನಿತ್ತು ಅವರ ಹತ್ತಿರ ಕೆಲಸ ಡಿ.ಕೆ.ಶಿವಕುಮಾರ್? ಎಂದು ಪ್ರಶ್ನಿಸಿದರು.
ನಾನು ಬ್ಲಾ್ಯಕ್ ಮೇಲರ್ ಅಲ್ಲ:ಕುಮಾರಸ್ವಾಮಿ ಬ್ಲಾ್ಯಕ್​ವೆುೕಲರ್ ಅಲ್ಲ. ಐದು ಜನರನ್ನು ಇಟ್ಟಕೊಂಡಿದ್ದೀನಿ ಅಂತ ಹೇಳಿದ್ದೀಯಾ ಅಲ್ಲವೇ ನೀನು? ನಿಮ್ಮ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಇದೆಯಾ? ಡಾ.ಜಿ.ಪರಮೇಶ್ವರ ಅವರೇ ನಿಮಗೆ ಬೆನ್ನು ಮೂಳೆ ಇದೆಯಾ? ನನ್ನನ್ನು ಹಿಟ್ ಅಂಡ್ ರನ್ ಅಂತಾರೆ.. ಹಾಗಾದರೆ ನಿಮ್ಮದೇನು? ನಿಮ್ಮ ಎಸ್​ಐಟಿ ಅಧಿಕಾರಿಗಳಿಗೆ ಕ್ರೆಡಿಬಲಿಟಿ ಎನ್ನುವುದು ಇದೆಯಾ? ಎಂದು ಕಿಡಿಕಾರಿದರು.
ಕುಮಾರಕೃಪಾದಲ್ಲಿ ನೊಂದ ಮಹಿಳೆಯರು:ಹನ್ನೆರಡು ಜನ ನೊಂದವರು ಎನ್ನಲಾದ ಮಹಿಳೆ ಯರನ್ನು ಕುಮಾರಕೃಪಾದಲ್ಲಿ ಇಟ್ಟಿದ್ದಾರೆ. ಎಲ್ಲಾ ಸಂಚು ಮಾಡಿ ಈಗ ಅನುಕಂಪ ತೋರಿಸ್ತಾ ಇದ್ದೀರಿ ಅಲ್ಲವೇ ಶಿವಕುಮಾರ್? ನಿಮ್ಮ ಯೋಗ್ಯತೆಗೆ ಈಗ ಯಾಕೆ ಅನುಕಂಪ? ಪೆನ್​ಡ್ರೖೆವ್ ಲೀಕ್ ಮಾಡುವಾಗ ಆ ಮಹಿಳೆಯರ ಮುಖ ತೋರಿಸಿದ್ದೀರಿ. ಅವರ ಮಾನ ಮರ್ಯಾದೆಯನ್ನು ಹಾದಿ ಬೀದಿಯಲ್ಲಿ ಹರಾಜು ಹಾಕಿದ್ದೀರಿ. ಈಗ ನೋಡಿದರೆ ಅವರ ಬಗ್ಗೆ ಅನುಕಂಪ ತೋರಿಸುತ್ತೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಪಕ್ಷದ ಶಾಸಕ, ನನ್ನ ಸಹೋದರನಾದ್ದರಿಂದ ರೇವಣ್ಣ ಅವರ ಪರವಾಗಿ ಶಾಸಕಾಂಗ ಪಕ್ಷದ ನಾಯಕನಾಗಿ ಹೋರಾಟ ಮಾಡುತ್ತೇನೆ. ಪ್ರಜ್ವಲ್ ರೇವಣ್ಣ ಪ್ರಕರಣ ಬಗ್ಗೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಹಿಂದೆ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಕೆಂಪಯ್ಯ ಎಂಬ ವ್ಯಕ್ತಿಯನ್ನು ಇಟ್ಟುಕೊಂಡು ನನ್ನನ್ನು ಬಂಧಿಸಬೇಕು ಎಂದು ಸಂಚು ಮಾಡಿದ್ದರು. ಅವರ ಆಸೆ ಈಡೇರಲಿಲ್ಲ. ನನ್ನನ್ನು ಒಂದು ದಿನವಾದರೂ ಅರೆಸ್ಟ್ ಮಾಡಿಸಿ ಜೈಲಿಗೆ ಕಲಿಸಬೇಕು ಎಂದು ಹೊಂಚು ಹಾಕಿದ್ದರು. ವಕೀಲರು ವಿಚಾರಣೆ ಹೋಗಬೇಡಿ ಎಂದು ಸಲಹೆ ಮಾಡಿದ್ದರು.
| ಎಚ್.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ
ಮಹಿಳಾ ಆಯೋಗಕ್ಕೆ ದೂರು:ಬೆಂಗಳೂರು: ಅಪಾರ ಪ್ರಮಾಣದಲ್ಲಿ ಪೆನ್​ಡ್ರೖೆವ್​ಗಳನ್ನು ಹಂಚುವ ಮೂಲಕ ಮಹಿಳೆಯರ ಮಾನಹಾನಿಗೆ ಕಾರಣವಾಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಈ ಕುರಿತ ಎಲ್ಲ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಜೆಡಿಎಸ್ ಮಹಿಳಾ ಘಟಕ, ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದೆ. ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಅವರ ನೇತೃತ್ವದ ನಿಯೋಗ ಆಯೋಗಕ್ಕೆ ತೆರಳಿ ಬುಧವಾರ ದೂರು ಸಲ್ಲಿಸಿತು.
ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ. ಅವರನ್ನು ತೆಗೆದುಹಾಕಲು ಕೋಳಿ ಮರಿಯೇ? ಸಿದ್ದರಾಮಯ್ಯ, ರಾಹುಲ್ ಗಾಂಧಿಯವರನ್ನು ಎಚ್​ಡಿಕೆ ಏಕವಚನದಲ್ಲಿ ಸಂಬೋಧಿಸುತ್ತಿದ್ದಾರೆ. ಮೊದಲು ಅದನ್ನು ನಿಲ್ಲಿಸಬೇಕು. ನಿಮಗಿಂತ ಚೆನ್ನಾಗಿ ಏಕವಚನದಲ್ಲಿ ಮಾತನಾಡಲು ನಮಗೆ ಸಾಧ್ಯವಾಗುತ್ತದೆ.
| ಚಲುವರಾಯಸ್ವಾಮಿ ಸಚಿವ
ಈ ವಿಚಾರವಾಗಿ ಪ್ರತಿಭಟನೆ ಮಾಡುವವರಿಗೆ ಮಾನ ಮರ್ಯಾದೆ ಇದೆಯೇ? ಕುಮಾರಸ್ವಾಮಿ ಜಾತಿ ಎಳೆದು ತರುತ್ತಿರುವುದು ಸರಿಯಲ್ಲ.
| ಸುಧಾಕರ್ ಉನ್ನತ ಶಿಕ್ಷಣ ಸಚಿವ
ಬ್ಲ್ಯಾಕ್​ ಮೇಲ್ ಮಾಡುವ ಆ ವ್ಯಕ್ತಿ (ದೇವರಾಜೇಗೌಡ) ಕುಮಾರಸ್ವಾಮಿಯವರನ್ನೂ ಭೇಟಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಇವರು ಹಾಸನಾಂಬ ದೇವಸ್ಥಾನಕ್ಕೆ ಬಂದು ದೇವರ ಮೇಲೆ ಕೈಯಿಟ್ಟು ಚರ್ಚೆ ಏನು ಮಾಡಲಾಗಿದೆ ಎಂದು ಹೇಳಲಿ. ಕುಮಾರಸ್ವಾಮಿ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಇವರು ಕಾನೂನಿಗಿಂತ ಮೇಲೆ ಇದ್ದಾರೆ. ಲೈಂಗಿಕ ದೌರ್ಜನ್ಯ ಮಾಡಿ ಎಂದು ನಾವು ಹೇಳಿದ್ದೆವಾ? ಕಿಡ್ನಾಪ್ ಮಾಡಲು ನಾವು ಹೇಳಿದ್ದೇವೆಯೇ?
| ಕೃಷ್ಣಬೈರೇಗೌಡ ಸಚಿವ
ಪೆನ್​ಡ್ರೖೆವ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದರೆ ತಪ್ಪೇನಿಲ್ಲ. ಅಸಹ್ಯ ಹಾಗೂ ನೀಚಕೃತ್ಯ ಯಾರೇ ಮಾಡಿದ್ದರೂ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕು. ಡಿ.ಕೆ.ಶಿವಕುಮಾರ್ ವಿರುದ್ಧವೂ ತನಿಖೆ ನಡೆಸಿ, ಸತ್ಯಾಂಶ ಹೊರಗೆ ಹಾಕುವ ಅಗತ್ಯವಿದೆ.
| ವಿ.ಸೋಮಣ್ಣ ಮಾಜಿ ಸಚಿವ
ಕಾಶ್ಮೀರದಲ್ಲಿ ಮುಂದುವರಿದ ಸೇನಾ ಕಾರ್ಯಾಚರಣೆ: ಓರ್ವ ಉಗ್ರನ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − three =
Remember me
