ರಾಮನಗರ:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಮಪತ್ರ ಅಂಗೀಕಾರವಾದ ಹಿನ್ನಲೆಯಲ್ಲಿ ಸಹೋದರ ಡಿ.ಕೆ.ಸುರೇಶ್ ನಾಮಪತ್ರ ತಿರಸ್ಕಾರವಾಗಿದೆ.
ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಬದಲಿ‌ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ಸಹ ನಾಮಪತ್ರ ಸಲ್ಲಿಸಿದ್ದರು. ಒಂದೇ ಪಕ್ಷದಿಂದ ಇಬ್ಬರೂ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ, ಅಧಿಕೃತ ಅಭ್ಯರ್ಥಿ ಡಿ.ಕೆ. ಶಿವಕುಮಾರ್ ನಾಮಪತ್ರ ಊರ್ಜಿತ ಹಿನ್ನೆಲೆಯಲ್ಲಿ ಡಿ.ಕೆ.ಸುರೇಶ್ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕಾರ ಮಾಡಿದ್ದಾರೆ.
ಇದನ್ನೂ ಓದಿ:ಹೊಟ್ಟೆಪಾಡಿಗಾಗಿ ಸಾಬೂನು ಮಾರಲು ಬಿಡದ ಕಾಮುಕರು: ವಿಡಿಯೋ ಮೂಲಕ ನಟಿ ಐಶ್ವರ್ಯಾ ಬೇಸರ
ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಸುರೇಶ್ ಅವರು ನಾಮಪತ್ರ ಸಲ್ಲಿಸಿದ್ದರು. ಡಿಕೆಶಿ ಸಲ್ಲಿಸಿದ್ದ ನಾಮಪತ್ರದಲ್ಲಿ ತಕರಾರು ಬರುವ ಸಾಧ್ಯತೆ ಇತ್ತು. ಅದರಲ್ಲೂ ವಿಶೇಷವಾಗಿ ಆಸ್ತಿ ವಿವರಕ್ಕೆ ಸಂಬಂಧಿಸಿದಂತೆ ಕೆಲವರಿಂದ ತಕರಾರು ಮಾಡುವ ಸುಳಿವು ಸಿಕ್ಕ ಬೆನ್ನಲ್ಲೇ ಆಪ್ತರು ಹಾಗು ಕಾನೂನು ಸಲಹೆಗಾರರ ಜತೆ ಸಮಾಲೋಚನೆ ನಡೆಸಿ ಸಹೋದರ ಡಿ.ಕೆ. ಸುರೇಶ್​ಗೆ ನಾಮಪತ್ರ ಸಲ್ಲಿಸಲು ಹೇಳಿದ್ದರು.
ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಿಕೆ ಸುರೇಶ್, ಡಿ.ಕೆ. ಶಿವಕುಮಾರ್ ಅವರ ಮೇಲೆ ಸಾಕಷ್ಟು ಕಣ್ಣುಗಳು ಬಿದ್ದಿವೆ. ವಾಮಮಾರ್ಗದಿಂದ ಡಿಕೆಶಿಯನ್ನು ಮಣಿಸಲು ಬಿಜೆಪಿ ಪ್ಲಾನ್ ಮಾಡಿದೆ. ಡಿಕೆಶಿಯನ್ನು ಬಂಧಿಸುವುದು, ನೋಟಿಸ್ ನಿಡುವುದನ್ನು ನೀವೆಲ್ಲ ನೋಡಿದ್ದೀರಿ. ನಾಲ್ಕು ದಿನದ ಹಿಂದೆ ಕೂಡ ಚೆನೈನಿಂದ ಐಟಿ ಅವರು ನೋಟಿಸ್ ನೀಡಿದರು. ಖುದ್ದು ನೀವೆ ಹಾಜರಾಗಬೇಕು ಎಂದು ಹೇಳಿದ್ದಾರೆ ಎಂದರು.
ಚುನಾವಣೆ ಆದ್ಮಲೇ ನಾವು ಬರ್ತೇವೆ ಎಂದು ಐಟಿ ಅವರಿಗೆ ಹೇಳಿದ್ದೇವೆ. ಅನವಶ್ಯಕವಾಗಿ ನಾವು ಬರೋದಿಲ್ಲ ಎಂದು ಹೇಳಿದ್ದೇವೆ. ನಮ್ಮ ಮೇಲಿನ ಕೇಸ್​ಗಳ ಮೇಲೆ ಎಲ್ಲ ಕಡೆ ತಡೆಯಾಜ್ಞೆಗಳು ಇವೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಡಿಕೆಶಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:ಯುಪಿಐಗೆ ಸಂದ ಜಯ: ಡಿಜಿಟಲ್ ಪಾವತಿಯಲ್ಲಿ ಭಾರತಕ್ಕೆ ಅಗ್ರಸ್ಥಾನ
ಬಿಜೆಪಿ ಅವರು ಮೊದಲೇ ಹೇಳಿದ್ದಾರೆ. ಟಿಕೆಟ್ ಘೋಷಣೆ ಮಾಡುವ ವೇಳೆ ಡಿಕೆಶಿಗೆ ಟಕ್ಕರ್ ಕೊಡ್ತೀನಿ ಅಂತಾ ಹೇಳಿದ್ದಾರೆ. ನಾವು ಕೂಡ ಮುಂಜಾಗ್ರತಾ ಕ್ರಮವಾಗಿ ರೆಡಿಯಾಗಿದ್ದೇವೆ. ಬಿಜೆಪಿ ಅವರು ಏನು ಮಾಡಿದ್ರೂ ಸಹ ಏನು ಆಗುವುದಿಲ್ಲ. ಅವರು ನಾಮಪತ್ರ ರಿಜೆಕ್ಟ್ ಮಾಡಿಸುತ್ತಾರೆ ಅನ್ನೋ ಅನುಮಾನ ಇದೆ. ಇದು ನನ್ನ ಮತ ಕ್ಷೇತ್ರ. ಏನೇ ಕುತಂತ್ರ ಮಾಡಿದ್ರು ಜನ ಅದಕ್ಕೆ ಉತ್ತರ ಕೊಡ್ತಾರೆ ಎಂದು ಡಿ.ಕೆ. ಸುರೇಶ್​ ಹೇಳಿದ್ದರು.(ದಿಗ್ವಿಜಯ ನ್ಯೂಸ್​)
ಹೋಟೆಲ್​ ರೂಮಲ್ಲಿ ಸಿಕ್ಕಿಬಿದ್ದ ನಟಿ ಆರತಿಗೆ ಬಾಲಿವುಡ್ ಲಿಂಕ್​ ಹಿಂದಿರುವ ಕರಾಳತೆ ಬಯಲು

ಮದುವೆ ಆಗಲು ಇಷ್ಟವಿಲ್ಲ ಆದರೆ ಇದು ಓಕೆ! ಸೌಂದರ್ಯದ ಗಣಿ ಹನಿ ರೋಸ್​ ಅಚ್ಚರಿಯ ಹೇಳಿಕೆ

‘ಮಳೆಯಲ್ಲಿ ಸಾಂಗ್​ ಶೂಟಿಂಗ್​ ವೇಳೆ ಒಳ ಉಡುಪು ಧರಿಸಿರಲಿಲ್ಲ: ಮೇಲಕ್ಕೆತ್ತಿದಾಗ ರಜನಿ ಸರ್ ಗಲಿಬಿಲಿಗೊಂಡಿದ್ದರು’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
