ಬೆಂಗಳೂರು:ನಿನ್ನೆಯಷ್ಟೇ ಐಪಿಎಸ್​ ಅಧಿಕಾರಿ ಡಿ ರೂಪಾ ರೋಹಿಣಿ ಸಿಂಧೂರಿ ಮೇಲೆ ಬರೋಬ್ಬರಿ 19 ಪ್ರಶ್ನೆಗಳನ್ನು ಕೇಳಿದ್ದು ನಂತರ ಒಂದಷ್ಟು ಫೋಟೊಗಳನ್ನೂ ಹಂಚಿಕೊಂಡಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದರು. ಅದರಲ್ಲಿ ಡಿ ರೂಪಾ ಮೇಲೆ ವೈಯಕ್ತಿಕ ಆರೋಪಗಳನ್ನೂ ಮಾಡಿದ್ದು ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದರು. ಇದೀಗ ಅಧಿಕಾರಿಗಳ ಸಮರದಲ್ಲಿ ಅಭಿಮಾನಿಗಳೂ ಇಳಿದಿದ್ದು ಇಂದು ಬೆಳಗ್ಗೆ ಸಿಂಧೂರಿ ಆರ್ಗನೈಸೇಶನ್​ ಎಂಬ ಫೇಸ್​ಬುಕ್​ ಖಾತೆಯಿಂದ ಡಿ ರೂಪಾ ಐಪಿಎಸ್​ಗೆ 9 ಪ್ರಶ್ನೆಗಳನ್ನು ಕೇಳಿದ್ದಾರೆ.
ರೋಹಿಣಿ ಅಭಿಮಾನಿಗಳ ಪ್ರಶ್ನೆ ಈ ರೀತಿ ಇದೆ:ರೋಹಿಣಿ ಅಭಿಮಾನಿಗಳ ಪ್ರಶ್ನೆ 1-ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ರೋಹಿಣಿ ಸಿಂಧೂರಿ ಅವರದ್ದು ಏನೂ ತಪ್ಪಿಲ್ಲ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದ್ದು, ಮತ್ತೆ ಮತ್ತೆ ನೀವು ಅವರ ಮೇಲೆ ಆರೋಪ ಹೊರಿಸುತ್ತಿರುವುದು ಏಕೆ?
ರೋಹಿಣಿ ಅಭಿಮಾನಿಗಳ ಪ್ರಶ್ನೆ -2ಹಿರಿಯ ಐಪಿಎಸ್ ಅಧಿಕಾರಿಯಾದ ತಮ್ಮ ಗಮನಕ್ಕೆ ಈ ಆದೇಶ ಬಂದಿಲ್ಲವೇ ಡಿ ರೂಪಾ ಅವರೇ..? ಎಂದು ಪ್ರಶ್ನಿಸಿ ಸುತ್ತೋಲೆಯನ್ನು ಟ್ಯಾಗ್ ಮಾಡಲಾಗಿದೆ.

ರೋಹಿಣಿ ಅಭಿಮಾನಿಗಳ ಪ್ರಶ್ನೆ-3ತಮ್ಮ ಟ್ವೀಟ್’ನಲ್ಲಿ ಶಿಲ್ಪಾನಾಗ್ ಅವರನ್ನು ‘ಕನ್ನಡತಿ’ ಎಂದು ಹೈಲೈಟ್ ಮಾಡಿರುವ ತಾವು, ಸಿಂಧೂರಿಯವರು ಎಂದಾದರೂ ಕನ್ನಡಿಗರನ್ನು ದ್ವೇಷಿಸಿದ್ದನ್ನು ನೋಡಿದ್ದೀರಾ? ಅವರು ಯಾವುದೇ ವೇದಿಕೆ ಮೇಲೆ ತೆಲುಗಿನಲ್ಲಿ ಭಾಷಣ ಮಾಡಿದ್ದನ್ನು ನೋಡಿದ್ದೀರಾ?
ರೋಹಿಣಿ ಅಭಿಮಾನಿಗಳ ಪ್ರಶ್ನೆ -4ತಾವು ನಿನ್ನೆ ಮಾತನಾಡುವಾಗ ‘ರೋಹಿಣಿಗೂ ನನಗೂ ಹೋಲಿಸಬೇಡಿ’ ಎಂದಿದ್ರಿ. ಇಷ್ಟೆಲ್ಲಾ ನಡೆದರೂ ‘ಎಂದಿನಂತೆ ಶ್ರದ್ಧೆಯಿಂದ ಕೆಲಸ ಮಾಡ್ತೀನಿ’ ಎನ್ನುವ ಅವರೆಲ್ಲಿ? ಮಾಧ್ಯಮಗಳ ಗಮನ ತಮ್ಮೆಡೆಗೆ ಪ್ರಯತ್ನಿಸುತ್ತಿರುವ ನೀವೆಲ್ಲಿ?
ರೋಹಿಣಿ ಅಭಿಮಾನಿಗಳ ಪ್ರಶ್ನೆ -5ಮೈಸೂರಿನ ಡಿಸಿ ನಿವಾಸದ ಈಜುಕೊಳ ನಿರ್ಮಾಣದ ಯೋಜನೆ ಮತ್ತು ಯೋಚನೆ ಎರಡು ನನ್ನದಲ್ಲ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದು ತಮ್ಮ ಗಮನಕ್ಕೆ ಬಂದಿಲ್ಲವೇ ಮೇಡಂ?
ರೋಹಿಣಿ ಅಭಿಮಾನಿಗಳ ಪ್ರಶ್ನೆ -6‘ಗಾಯಕ ಲಕ್ಕಿ ಅಲಿ ಜಮೀನಿಗೂ ನನಗೂ ಯಾವುದು ಸಂಬಂಧ ಇಲ್ಲ’ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದಾರೆ. ಅವರ ಕುಟುಂಬದ ಯಾರ ಮೇಲೆ ಆರೋಪ ಬಂದರೂ, ಸಿಂಧೂರಿಯವರ ಮೇಲೆ ನೇರ ಆರೋಪ ಹೊರಿಸುವುದು ಏಕೆ?
ರೋಹಿಣಿ ಅಭಿಮಾನಿಗಳ ಪ್ರಶ್ನೆ -7ಎಲ್ಲಾ ಕನ್ನಡಿಗರಿಗೆ ತಮ್ಮ ಮೇಲೆ ಅಪಾರ ಗೌರವವಿದೆ. ಕನ್ನಡದ ಎಲ್ಲಾ ಹೆಣ್ಣು ಮಕ್ಕಳಿಗೆ ತಾವೇ ದೊಡ್ಡ ಸ್ಪೂರ್ತಿ. ಇದರ ನಡುವೆ ಕರ್ನಾಟಕ ಸರ್ಕಾರದ ಹಿರಿಯ ಮಹಿಳಾ ಅಧಿಕಾರಿಯನ್ನು ಬೇರೆ ರಾಜ್ಯದವರು ಎಂದು ಹೇಳಿ ನೋವುಂಟು ಮಾಡುವುದು ಸರಿಯೇ? ಬೇರೆ ರಾಜ್ಯಗಳಲ್ಲಿ ಕನ್ನಡಿಗರು ಯಾರು ಸೇವೆ ಸಲ್ಲಿಸುತ್ತಿಲ್ಲವೇ?
ರೋಹಿಣಿ ಅಭಿಮಾನಿಗಳ ಪ್ರಶ್ನೆ -8ಸಿಂಧೂರಿಯವರು ಕರ್ನಾಟಕಕ್ಕೆ ಬಂದ ಆರೇ ತಿಂಗಳಲ್ಲಿ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದನ್ನು ಕಲಿತಿದ್ದಾರೆ. ಅವರು ತಮ್ಮ ಕಚೇರಿ ವೇಳೆಯಲ್ಲಿ ಎಂದಾದರೂ ಕನ್ನಡಿಗರನ್ನು ಕಡೆಗಣಿಸಿರುವುದು ತಮ್ಮ ಗಮನಕ್ಕೆ ಬಂದಿದೆಯೇ?
ರೋಹಿಣಿ ಅಭಿಮಾನಿಗಳ ಪ್ರಶ್ನೆ-9ರೋಹಿಣಿ ಅವರ ಮೇಲೆ ಯಾವುದೇ ಆರೋಪ ಇದ್ದರೂ, ಅದನ್ನು ನೇರವಾಗಿ ಕರ್ನಾಟಕದ ಚೀಫ್​ ಸೆಕ್ರೆಟರಿ ಹಾಗೂ ಕರ್ನಾಟಕದ ಡಿಜಿಪಿ ರವರ ಗಮನಕ್ಕೆ ತರದೆ, ವಾಟ್ಸ್​ಆ್ಯಪ್​ ಸ್ಕ್ರೀನ್​ಶಾಟ್​ಗಳನ್ನು ತೆಗೆದು ಅವರ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು ಸರಿಯೇ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − five =
Remember me
