ಬೆಂಗಳೂರು:ಬಿಜೆಪಿ ಪಕ್ಷದಲ್ಲಿ ಶಿಸ್ತು ಕಡಿಮೆಯಾಗಲು ಕಾಂಗ್ರೆಸ್​ನ ಗಾಳಿ ಸೋಕಿರುವುದೇ ಕಾರಣ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದ್ದರು. ಇದು ಸಾಕಷ್ಟು ಚರ್ಚೆಗೂ ಅವಕಾಶ ಮಾಡಿಕೊಟ್ಟಿತ್ತು. ಇದರ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಮಾತನಾಡುತ್ತಾ, ಈಶ್ವರಪ್ಪ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.
‘ಪಕ್ಷಾಂತರವಾಗಿ ಬಂದವರಿಂದ ಬಿಜೆಪಿಯಲ್ಲಿ ಶಿಸ್ತು ತಪ್ಪಿದೆ ಎಂಬ ಮಾತನ್ನು ಒಪ್ಪಲು ಸಾಧ್ಯವಿಲ್ಲ. ನಮ್ಮ ಮನೆಗೆ ಬಂದ ಸೊಸೆಯನ್ನು ಮನೆಯವರಂತೆ ನೋಡಿಕೊಳ್ಳಬೇಕು’ ಎಂದು ಬಿಜೆಪಿ ಕಚೇರಿಯಲ್ಲಿ ಮಾತನಾಡುತ್ತಾ ಸದಾನಂದ ಗೌಡ ಹೇಳಿದ್ದಾರೆ.
ಇದನ್ನೂ ಓದಿ:ಬಿಜೆಪಿಯಲ್ಲಿ ಶಿಸ್ತು ಮಾಯವಾಗಲು ಕಾಂಗ್ರೆಸ್​ನ‌ ಗಾಳಿ ಸೋಕಿರುವುದೇ ಕಾರಣ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ
ವಿಧಾನಸಭೆ ಫಲಿತಾಂಶ ನಮ್ಮ‌ ನಿರೀಕ್ಷೆಗೆ ವಿರುದ್ಧವಾಗಿ ಬಂದಿರುವುದರ ಬಗ್ಗೆ ನೋವಿದೆ. ಈ ಬಗ್ಗೆ ಬಹಿರಂಗವಾಗಿವಾಗಿ ಮಾತನಾಡುವುದು ಸರಿಯಲ್ಲ. ಮತ್ತಷ್ಟು ಗೌಪ್ಯವಾಗಿ ಸಭೆಗಳು ನಡೆಯಬೇಕು. ಕಾಂಗ್ರೆಸ್ ಹಾಗು ಜೆಡಿಎಸ್​ನಲ್ಲಿ ಹೊಂದಾಣಿಕೆ ಆಗಿದೆ. ಆದರೆ ಬಿಜೆಪಿ ಪಕ್ಷದಲ್ಲಿ ಹೊಂದಾಣಿಕೆ ರಾಜಕಾರಣ ಆಗಿಲ್ಲ ಎಂದು ಹೇಳಿದರು.
‘ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ’ ಎನ್ನುತ್ತಾ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪರೋಕ್ಷವಾಗಿ ಆಪರೇಷನ್ ಕಮಲದ ವಿರುದ್ದ ಹುಬ್ಬಳ್ಳಿಯಲ್ಲಿ ಮಾತನಾಡುತ್ತಾ ಗರಂ ಆಗಿದ್ದರು.
‘ಬಿಜೆಪಿ ಪಕ್ಷದಲ್ಲಿ, ಅಲ್ಲಲ್ಲಿ ಶಿಸ್ತು ಕಳೆದು ಹೋಗಿದೆ. ಕಾಂಗ್ರೆಸ್​ನ‌ ಗಾಳಿ ಸೋಕಿರುವುದೇ ಇದಕ್ಕೆ ಕಾರಣ. ಬಹಿರಂಗವಾಗಿ ಅಡ್ಜೆಸ್ಟ್​ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವ. ಇಂತಹದ್ದೆನ್ನಲ್ಲ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ’ ಎಂದು ತಿಳಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 4 =
Remember me
