ಬೆಂಗಳೂರು:ಜ್ವರ, ಶೀತ, ಕೆಮ್ಮು ಸೇರಿ ಕೋವಿಡ್ ಸೋಂಕು ಲಕ್ಷಣ ಸಮಸ್ಯೆ ಹೊಂದಿರುವವರು ಮನೆಯಲ್ಲಿ ಪ್ರತ್ಯೇಕವಾಗಿ ಇರುವುದು ಸೂಕ್ತ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಣ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನೆರೆ ರಾಜ್ಯಗಳಲ್ಲಿ ಪತ್ತೆಯಾಗಿರುವ ಹೊಸ ರೂಪಾಂತರಿ ತಳಿ ಜೆ.ಎನ್-1 ಅತೀ ವೇಗವಾಗಿ ಹರಡಲಿದೆ. ಕಳೆದ ನವೆಂಬರ್ ತಿಂಗಳಲ್ಲಿ ವಿಶ್ವದಲ್ಲಿ ಶೇ. 10 ಇದ್ದ ಈ ಪ್ರಕರಣ, ಈಗ ಶೇ. 34ಕ್ಕೆ ಏರಿಕೆಯಾಗಿದೆ. ಸದ್ಯ ಇದು ವೇಗವಾಗಿ ಹರಡುವುದರಿಂದ ಸೋಂಕಿತರು ಸಾರ್ವಜನಿಕವಾಗಿ ಓಡಾಡಿದರೆ ಸೋಂಕು ಹೆಚ್ಚಾಗುವ ಸಾಧ್ಯತೆಗಳಿವೆ. ಹಾಗಾಗಿ ಸೋಂಕಿತರು ಹಾಗೂ ಶಂಕಿತರು ಮನೆಯಲ್ಲಿ ಪ್ರತ್ಯೇಕ ನಿಗಾದಲ್ಲಿ ಇರಬೇಕು ಎಂದು ಹೇಳಿದ್ದಾರೆ.
ಹೊಸ ತಳಿಯ ಪ್ರಭಾವ ಕುರಿತು ಈಗಲೇ ಏನನ್ನು ಹೇಳಲು ಸಾಧ್ಯವಿಲ್ಲ. ಇದು ವ್ಯಕ್ತಿಯ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ನೋಡಬೇಕು. ಸದ್ಯ ಕೋವಿಡ್ ಪರೀಕ್ಷೆ ಸಂಖ್ಯೆ ಹೆಚ್ಚಿಸಲಾಗುತ್ತಿದ್ದು, ಬುಧವಾರದಿಂದ ದಿನಕ್ಕೆ 500 ರಿಂದ ಒಂದು ಸಾವಿರ ಪರೀಕ್ಷೆ ನಡೆಸಲಾಗುವುದು. ಪ್ರಕರಣದ ಸಂಖ್ಯೆ ಆಧರಿಸಿ ಒಂದು ವಾರ ನಂತರ ದಿನಕ್ಕೆ 5 ಸಾವಿರ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 15 =
Remember me
