
ಬೆಂಗಳೂರು:ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(ಎ್ಕೆಸಿಸಿಐ) ಸಹಯೋಗದಲ್ಲಿ ರಾಜ್ಯ ಸರ್ಕಾರ ಜೂ.15 ಮತ್ತು 16ರಂದು ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ ಏರ್ಪಡಿಸಲಾಗಿದೆ ಎಂದುಕಾನೂನು ಮತ್ತು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸ್ಪೀಕರ್ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವರುಗಳು ಭಾಗವಹಿಸಲಿದ್ದಾರೆ ಎಂದರು.ಗೇಟ್ ನಂಬರ್ 9ರಲ್ಲಿ ಪ್ರಿನ್ಸೆನ್ಸ್ ಶ್ರೈನ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಹೂಡಿಕೆಯ ಅವಕಾಶಗಳು ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.ಕ್ರೀಯಾತ್ಮಕ ಪ್ರವಾಸೋದ್ಯಮ ಉದ್ಯಮದೊಳಗೆ ಪಾಲುದಾರರನ್ನು ತೊಡಗಿಸಿಕೊಳ್ಳಲು ಮತ್ತು ಸಬಲೀಕರಣಗೊಳಿಸಲು ಈ ಉತ್ಸವ ನೆರವಾಗಲಿದೆ. ದಕ್ಷಿಣ ರಾಜ್ಯಗಳ ಶ್ರೀಮಂತ ಸಂಸ್ಕೃತಿ, ಪಾಕಪದ್ದತಿ, ಪ್ರವಾಸೋದ್ಯಮ ಕೊಡುಗೆಗಳನ್ನು ವಿಶ್ಲೇಷಿಸಿ ತೋರಿಸುವ ಪ್ರದರ್ಶನ, ಬಿ 2 ಬಿ, ಬಿ 2 ಜಿ ಮತ್ತು ಬಿ 2 ಸಿ ಸಂವಹನಗಳ ಮೂಲಕ ಸಂಪರ್ಕ ಅವಕಾಶಗಳು ಸೇರಿದಂತೆ ವೈವಿದ್ಯಮಯ ಚಟುವಟಿಕೆಗಳನ್ನು ಸಮ್ಮೇಳನ ಒಳಗೊಂಡಿದೆ ಎಂದರು.ದಕ್ಷಿಣ ಭಾರತದ ಪ್ರವಾಸೋದ್ಯಮದ ಸಾಮರ್ಥ್ಯ ಮತ್ತು ಆಕರ್ಷಣೆಯನ್ನು ಪ್ರದರ್ಶಿಸಲಾಗುವುದು. ಲಭ್ಯವಿರುವ ಅವಕಾಶ ಮತ್ತು ಹೂಡಿಕೆಗಳನ್ನು ಪ್ರದರ್ಶಿಸಲಾಗುವುದು. ಸಾಂಸ್ಕೃತಿಕ ವಿನಿಮಯದ ಪ್ರವಾಸೋದ್ಯಮಕ್ಕೆ ಉತ್ತೇಜನ ಮಾಡುವುದು ಮತ್ತು ವ್ಯಾಪಾರ ಅವಕಾಶಗಳನ್ನು ಸುಗಮಗೊಳಿಸಲಾಗುವುದು ಎಂದರು.ಚಿಕ್ಕಮಗಳೂರು, ಉಡುಪಿ, ವೈನಾಡು, ಕೊಚ್ಚಿ, ಕೊಯಮತ್ತೂರು ಸೆರಿದಂತೆ ಹಲವು ಭಾಗಗಳಲ್ಲಿ ರೋಡ್ ಶೋ ಆಯೋಜನೆ ಮಾಡಲಾಗುವುದು. ಆರ್ಥಿಕ ಸಂಪನ್ಮೂಲ ಕ್ರೋಡೀಕರಣಕ್ಕೂ ಆದ್ಯತೆ ನೀಡಲಾಗುವುದು ಎಂದರು.
ಪಿಪಿಪಿ ಮಾದರಿಯಲ್ಲಿ ದತ್ತುರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿದ್ದು, ಅವುಗಳ ಸಂರಕ್ಷಣೆ ದೃಷ್ಟಿಯಿಂದ ಸ್ಮಾರಕ ದತ್ತು ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪಿಪಿಪಿ ಮಾದರಿಯಲ್ಲಿ ಪ್ರವಾಸೋಧ್ಯಮ ಸೌಕರ್ಯಗಳ ಅಭಿವೃದ್ಧಿ ಮಾಡಲಾಗುವುದು. ಈ ನಿಟ್ಟಿನಲ್ಲಿ ಧರ್ಮಸ್ಥಳ ಸಂಸ್ಥೆ ಐಹೊಳೆ, ಪಟ್ಟದಕಲ್ಲುವಿನಲ್ಲಿ ಕೆಲಸ ಮಾಡುತ್ತಿದೆ ಎಂದರು.
ಮೂಲ ಸೌಕರ್ಯಕ್ಕೆ 590 ಕೋಟಿಐತಿಹಾಸಿಕ ಸ್ಮಾರಕಗಳಿರುವ ಕಡೆಯಲ್ಲಿ 590 ಕೋಟಿ ವೆಚ್ಚದಲ್ಲಿ ಸೌಕರ್ಯಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ವಿಜಯಪುರ ಜಿಲ್ಲೆ ಮತ್ತು ಬೀದರ್ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದು, ಅಲ್ಲಿನ ಸ್ಮಾರಕಗಳ ರಕ್ಷಣೆಗೆ ಕ್ರಮ ವಹಿಸಲಾಗಿದೆ. ಲಕ್ಕುಂಡಿ, ಮುಳಖೇಡ್, ಹಂಪಿ, ನಾಗಾವಿ, ಶ್ರೀರಂಗಪಟ್ಟಣ, ಬೇಲೂರು ಸೇರಿದಂತೆ ಹಲವು ಕಡೆಯಲ್ಲಿ ಯೋಜನೆ ಜಾರಿ ಮಅಡಲು ಯೋಜಿಸಲಾಗಿದೆ ಎಂದರು.
ಜಲಾಶಯ ಪ್ರವಾಸೋದ್ಯಮಕೆಆರ್‌ಎಸ್ ಸೇರಿದಂತೆ ಜಲಾಶಯಗಳಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗಾಗಿ ಹೂಡಿಕೆದಾರರಿಗೆ ಆಹ್ವಾನ ನೀಡಿದ್ದೇವೆ. 320 ಕಿ.ಮೀ. ಉದ್ದದ ಕಡಲತೀರದಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿಗೆ 40 ಸ್ಥಳಗಳನ್ನ ಈಗಾಗಲೇ ಗುರುತಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಕ್ಯಾಸಿನೋ ಇಲ್ಲರಾಜ್ಯದಲ್ಲಿಯೂ ಗೋವಾ ಮಾದರಿಯ ಕ್ಯಾಸಿನೋ ಪ್ರಾರಂಭ ವಿಚಾರ ಹಿಂದೆ ಚರ್ಚೆಯಾಗಿದ್ದು ಗಮನಕ್ಕೆ ಇದೆ. ಆದರೆ, ನಮ್ಮ ಸರ್ಕಾರ ಇದಕ್ಕೆ ಅವಕಾಶ ನೀಡುವುದಿಲ್ಲ. ಕ್ಯಾಸಿನೊ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಅದಕ್ಕೆ ಪ್ರೋತ್ಸಾಹವನ್ನು ಕೊಡುವುದಿಲ್ಲ. ನಮ್ಮದೇ ಆದ ಸಂಸ್ಕೃತಿ ಇದೆ. ಅದಕ್ಕೆ ದಕ್ಕೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದರು.
2 ತಿಂಗಳಲ್ಲಿ ಟೂರಿಸಂ ಪಾಲಿಸಿಟೂರಿಸಂ ಪಾಲಿಸಿ ಬಗ್ಗೆ ಚರ್ಚೆ ನಡೆದಿದ್ದು, ಪ್ರಸ್ತಾವನೆ ಸಿದ್ಧವಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಟೂರಿಸಂ ಪಾಲಿಸಿಯನ್ನು ಜಾರಿಗೆ ತರಲಾಗುವುದು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + nine =
Remember me
