ಬೆಂಗಳೂರು:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್​ ಹಾಗೂ ಸಂಗಡಿಗರಿಗೆ ದಿನ ಕಳೆದಂತೆ ಸಂಕಷ್ಟಗಳು ಎದುರಾಗುತ್ತಿದ್ದು, ತನಿಖೆ ಇನ್ನೇನು ಪೂರ್ತಿಗೊಂಡು ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್​​ಶೀಟ್​ ಸಲ್ಲಿಸಬೇಕನ್ನುವಷ್ಟರಲ್ಲಿ ದರ್ಶನ್​ಗೆ ರಾಜಾತಿಥ್ಯ ಸಿಗುತ್ತಿರುವ ವಿಷಯ ರಾಜ್ಯಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ನಾಂದಿ ಹಾಡಿತ್ತು. ರಾಜ್ಯಾತಿಥ್ಯ ಸಿಗುತ್ತಿರುವುದಕ್ಕೆ ಸಾಕ್ಷಿಯಾಗಿ ಕೆಲ ಫೋಟೋ ಹಾಗೂ ವಿಡಿಯೋಗಳು ಲೀಕ್​ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ. ರಾಜ್ಯದ ಪೊಲೀಸ್​ ವ್ಯವಸ್ಥೆಯ ವಿರುದ್ಧ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.
ನಟ ದರ್ಶನ್​ ಕೈಯಲ್ಲಿ ಸಿಗರೇಟ್​ ಹಾಗೂ ರೌಡಿಶೀಟರ್​ ಓರ್ವನ ಜೊತೆ ವಿಡಿಯೋ ಕಾಲ್​ನಲ್ಲಿ ಮಾತನಾಡಿರುವ ವಿಚಾರ ಹೊರಬರುತ್ತಿದ್ದಂತೆ ಜೈಲಿನ 7 ಸಿಬ್ಬಂದಿಯನ್ನು ಸರ್ಕಾರ ಅಮಾನತು ಮಾಡಿದೆ. ಅಲ್ಲದೇ ದರ್ಶನ್​ ಸೇರಿದಂತೆ ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಸಿದ್ದು, ದರ್ಶನ್ ವಿರುದ್ಧ FIR ದಾಖಲಾದ ಬೆನ್ನಲ್ಲೇ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ  24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಚೀಫ್ ಸೂಪರಿಡೆಂಟ್ ರಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಇದೀಗ ಕೋರ್ಟ್ ಆದೇಶ ಹೊರಡಿಸಿದೆ. ಜೈಲಿನ ಅಧಿಕಾರಿಗಳ ಶಿಫಾರಸ್ಸಿನ ಮೇರೆಗೆ ಕೋರ್ಟ್​ ಆರೋಪಿಗಳನ್ನು ಪರಪ್ಪನ ಅಗ್ರಹಾರದಿಂದ ಬೇರೆ ಜೈಲುಗಳಿಗೆ ಶಿಫ್ಟ್​ ಮಾಡಲು ಅನುಮತಿ ನೀಡಿದೆ.
ರೇಣುಕಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿಯಾಗಿರುವ ನಟ ದರ್ಶನ್​ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್​ ಆದೇಶಿಸಿದೆ. ಉಳಿದಂತೆ ಆರೋಪಿಗಳಾದ ಪವನ್, ರಾಘವೇಂದ್ರ, ನಂದೀಶ್​ರನ್ನು ಮೈಸೂರು ಜೈಲಿಗೆ, ವಿನಯ್ ವಿಜಯಪುರ ಜೈಲಿಗೆ, ಜಗದೀಶ್, ಲಕ್ಷಣ್​ನನ್ನು​ ಶಿವಮೊಗ್ಗ ಜೈಲಿಗೆ, ಧನರಾಜ್ ಧಾರವಾಡ ಜೈಲಿಗೆ, ನಾಗರಾಜ್​ನನ್ನು ಕಲಬುರಗಿ, ಪ್ರದೂಷ್​ನನ್ನು ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್​ ಆದೇಶಿಸಿದೆ.
ಪ್ರಕರಣದ ಉಳಿದ ಆರೋಪಿಗಳಾದ  ರವಿ , ಕಾರ್ತಿಕ್, ನಿಖಿಲ್, ಕೇಶವಮೂರ್ತಿ ತುಮಕೂರು ಕೇಂದ್ರ ಕಾರಾಗೃಹದಲ್ಲಿದ್ದು, ಅವರುಗಳು ಅಲ್ಲಿಯೇ ಇರಲಿದ್ದಾರೆ. ಉಳಿದಂತೆ ಪ್ರಕರಣ ಪ್ರಮುಖ ಆರೋಪಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲೇ ಇರಲಿದ್ದಾರೆ. ಆರೋಪಿಗಳಾದ ಅನು ಕುಮಾರ್ ಹಾಗೂ ದೀಪಕ್​ ಕೂಡ ಪರಪ್ಪನ ಅಗ್ರಹಾರದಲ್ಲಿರಲಿದ್ದಾರೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 + 10 =
Remember me
