ಬಳ್ಳಾರಿ:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ತಿಗೊಳಿಸಿದ್ದು, ದರ್ಶನ್​ ಮತ್ತು ಗ್ಯಾಂಗ್​ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಅತ್ತ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸುತ್ತಿದ್ದಂತೆ ಇತ್ತ ದರ್ಶನ್​ಗೆ ಟೆನ್ಷನ್​ ಹೆಚ್ಚಾಗಿದ್ದು, ಇದರ ನಡುವೆಯೇ ಪತ್ನಿ ವಿಜಯಲಕ್ಷ್ಮಿಗೆ ಕರೆ ಮಾಡಿ ಮಾತನಾಡಿದ್ದಾರೆ.
ಪ್ರಿಸನ್ ಕಾಲ್ ಸಿಸ್ಟಮ್​ನಲ್ಲಿ ದರ್ಶನ್​ ಅವರ ಪತ್ನಿ ವಿಜಯಲಕ್ಷ್ಮಿ ಅವರ ನಂಬರ್​ಅನ್ನು ಸೇವ್​ ಮಾಡಲಾಗಿದ್ದು, ಐದು ನಿಮಿಷಗಳ ಕಾಲ ಪತ್ನಿಯೊಂದಿಗೆ ದರ್ಶನ್​ ಮಾತುಕತೆ ನಡೆಸಿದ್ದಾರೆ. ಮಧ್ಯಾಹ್ನ 2:30ರ ಸುಮಾರಿಗೆ ಪತ್ನಿಗೆ ಕರೆ ಮಾಡಿದ ದರ್ಶನ್​ ಚಾರ್ಜ್​ಶೀಟ್​ ಸಲ್ಲಿಕೆ ಮತ್ತು ಇಂದಿನ ಬೆಳವಣಿಗೆಗಳ ಕುರಿತು ಮಾತುಕತೆ ನಡೆಸಿದ್ದಾರೆ.
ಮಾತನಾಡುವ ವೇಳೆ ಪತಿಯ ಆರೋಗ್ಯವನ್ನು ವಿಜಯಲಕ್ಷ್ಮಿ ವಿಚಾರಿಸಿದ್ದು, ಈ ವೇಳೆ ಭಾವುಕರಾಗಿದ್ದಾರೆ. ದರ್ಶನ್​ ಹಾಗೂ ವಿಜಯಲಕ್ಷ್ಮಿ ನಡುವಿನ ಸಂಭಾಷಣೆಯನ್ನು ನಿಯಮದ ಪ್ರಕಾರ ಜೈಲಧಿಕಾರಿಗಳು ರೆಕಾರ್ಡ್​ ಮಾಡಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆದ ಆರೋಪದ ಮೇಲೆ ನಟ ದರ್ಶನ್​ರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಸ್ಥಳಾಂತರಿಸಲಾಗಿದ್ದು, ಉಳಿದ ಆರೋಪಿಗಳನ್ನು ತುಮಕೂರು, ಶಿವಮೊಗ್ಗ, ಮೈಸೂರು, ವಿಜಯಪುರ, ಧಾರವಾಡ ಹಾಗೂ ಬೆಳಗಾವಿಗೆ ಸ್ಥಳಾಂತರಿಸಲಾಗಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 + 11 =
Remember me
