ಬೆಂಗಳೂರು:ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್ ಬಂಧನವಾದ ಬಳಿಕ ರಾಜ್ಯದಲ್ಲಿ ಸ್ವಾಮೀಜಿ, ಸೆಲೆಬ್ರಿಟಿ, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಪ್ರಕರಣದ ಕುರಿತಾಗಿ ನಟ ದರ್ಶನ್​ ವಿರುದ್ಧವಾಗಿ ದೂರು ನೀಡಿದ್ದ ವಂದೇ ಮಾತರಂ ಸಂಘಟನೆಯ ಮುಖಂಡ ಶಿವಕುಮಾರ್​ ಕೊಲೆ ಬೆದರಿಕೆ ಬಂದಿದೆ ಎನ್ನಲಾಗಿದೆ.
ನಟ ದರ್ಶನ್​ ಹುಲಿ ಉಗುರು ಮಾದರಿ ಲಾಕೆಟ್​ ಧರಿಸಿದ ಆರೋಪ ಅವರ ಮೇಲಿದೆ. ದರ್ಶನ್​ ವಿರುದ್ಧ ವಂದೇ ಮಾತರಂ ಸಂಘಟನೆಯ ಮುಖಂಡ ಶಿವಕುಮಾರ್​ ಕ್ರಮ ಕೈ ಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದರು. ಈಗ ದರ್ಶನ್​ ಅಭಿಮಾನಿಗಳಿಂದ ಶಿವಕುಮಾರ್​ಗೆ ಕೊಲೆ ಬೆದರಿಕೆ ಬಂದಿದೆ.
ಇದನ್ನೂ ಓದಿ:ಹುಲಿ ಉಗುರು ಪ್ರಕರಣ: ನಟ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್​​ ಅವರ ಮನೆಯಲ್ಲಿ ಈಗಾಗಲೇ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ದರ್ಶನ್​ ಅಭಿಮಾನಿಗಳಿಂದ ಕೊಲೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶಿವಕುಮಾರ್​ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ಬಿ. ದಯಾನಂದ್​ಗೆ ದೂರು ನೀಡಿದ್ದಾರೆ. ಆಡಿಯೋ ಮತ್ತು ವಿಡಿಯೋ ಕಾಲ್​ ಮೂಲಕ ತಮಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಶಿವಕುಮಾರ್​ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅಕ್ಟೋಬರ್​ 25ರಂದು ದರ್ಶನ್​ ವಿರುದ್ಧ ಅರಣ್ಯಾಧಿಕಾರಿಗೆ ದೂರು ಕೊಟ್ಟಿದ್ದೆವು. ದೂರು ನೀಡಿದ್ದಕ್ಕೆ ನಮಗೆ ಬೆದರಿಕೆ ಕರೆಗಳು ಬರುತ್ತಿವೆ. ಅವರ ಅಭಿಮಾನಿಗಳು ನಿನ್ನೆ ನನ್ನ ಕಾರನ್ನು ಹಿಂಬಾಲಿಸಿ ಟಚ್ ಮಾಡಿದ್ದಾರೆ. ದರ್ಶನ್​ ತಪ್ಪು ಮಾಡಿಲ್ಲ ಎಂಬುದಾದರೆ ಅಭಿಮಾನಿಗಳು ಯಾಕೆ ಈ ರೀತಿ ಮಾಡುತ್ತಿದ್ದಾರೆ? ದರ್ಶನ್ ಅಭಿಮಾನಿಗಳ ಸಂಘದವರೇ ಈ ಕೆಲಸ ಮಾಡುತ್ತಿದ್ದಾರೆ. ಬೆದರಿಕೆ ಕರೆ ಹಿಂದೆ ಶೇಕಡಾ 100ರಷ್ಟು ದರ್ಶನ್​ ಅವರ ಕೈವಾಡವಿದೆ’ ಎಂದು ಶಿವಕುಮಾರ್​ ಹೇಳಿಕೆ ನೀಡಿದ್ದಾರೆ.
ಸದ್ಯಕ್ಕಂತೂ ರಾಜ್ಯದಲ್ಲಿ ಹುಲಿ ಉಗುರಿನ ವಿಷಯ ಹೆಚ್ಚು ಚರ್ಚೆ ಆಗುತ್ತಿದೆ. ವರ್ತೂರು ಸಂತೋಷ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದ್ದು, ಜಾಮೀನಿಗಾಗಿ ಅವರು ಪ್ರಯತ್ನಿಸುತ್ತಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ:ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು, ಅಂದರೆ ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.
ನಟ ದರ್ಶನ್ ಬಳಿ ಇತ್ತಾ 8 ಹುಲಿ ಉಗುರಿನ ಮಾದರಿಯ ಪೆಂಡೆಂಟ್!;ಇದ್ಯಾವುದೂ ಅಸಲಿ ಅಲ್ವಾ?

ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ತುಮಕೂರಿನ ಮೂವರು ಅರೆಸ್ಟ್

ಹುಲಿ ಉಗುರು ಪ್ರಕರಣ: ನಟ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 9 =
Remember me
