
ಬೆಂಗಳೂರು:ನಟ ದರ್ಶನ್​ ಅವರ ಜತೆ 10 ವರ್ಷದಿಂದ ಖುಷಿಯಾಗಿದ್ದೇನೆ ಎಂದು ಸೋಶಿಯಲ್​​ ಮೀಡಿಯಾದಲ್ಲಿ ಕೆಲವು ಫೋಟೋಗಳು ಹಂಚಿಕೊಳ್ಳುವ ಮೂಲಕವಾಗಿ ಪವಿತ್ರಾ ಗೌಡ ಸುದ್ದಿಯಾಗಿದ್ದರು. ಈ ವಿವಾದಕ್ಕೆ ದಶರ್ನ್​ ಅವರ ಪತ್ನಿ ವಿಜಯಲಕ್ಷ್ಮೀ ಕಾನೂನಿ ಹೊರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಈ ವಿಚಾರವಾಗಿ ಬೇರಸಗೊಂಡ ಪವಿತ್ರಾ ಗೌಡಾ ಖಡಕ್ಕ ಉತ್ತರ ಕೊಟ್ಟಿದ್ದಾರೆ. ಇಬ್ಬರ ಕಿತ್ತಾಟ ವಿಚಾರವಾಗಿ ಇಲ್ಲಿಯವರೆಗೂ ಸುಮ್ಮನಿದ್ದ ನಟ ದರ್ಶನ್​​ ಅವರು ಪರೋಕ್ಷವಾಗಿ ಮಾತನಾಡುವ ಮೂಲಕವಾಗಿ ಟಾಂಗ್​​ ಕೊಟ್ಟಿದ್ದಾರೆ.
ಪವಿತ್ರಾ ಗೌಡ, ವಿಜಯಲಕ್ಷ್ಮೀ ಪೋಸ್ಟರ್ ವಾರ್ ಶುರುವಾಗಿ 2 ದಿನ ಕಳೆದ್ರೂ ದರ್ಶನ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ವಿವಾದದ ಹೊಗೆ ಏಳ್ತಿದ್ದಂತೆ ಕೆಲವು ಸುದ್ದಿಗೋಷ್ಟಿಗಳನ್ನೂ ಕ್ಯಾನ್ಸಲ್ ಮಾಡಿದ್ರು. ಆದ್ರೀಗ ಕೊನೆಗೂ ಪರೋಕ್ಷವಾಗಿ ಕಾಂಟ್ರವರ್ಸಿ ಬಗ್ಗೆ ಮಾತನಾಡಿದ್ದಾರೆ.
ಮಂಡ್ಯದ ಪಾಂಡವಪುರದಲ್ಲಿ ನಡೆದ ರೈತ ನಾಯಕ ಪುಟ್ಟಣ್ಣಯ್ಯ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ದರ್ಶನ್​ ಭಾಗಿಯಾಗಿ ಸನ್ಮಾನವನ್ನ ಸ್ವೀಕರಿಸಿದ್ರು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದರ್ಶನ್, ಯಾರು ಏನೇ ಅನ್ಕೊಂಡ್ರು, ಏನೇ ಮಾಡ್ಕೊಂಡ್ರು ನನಗೆ ಸೆಲೆಬ್ರಿಟಿಗಳು ಸಾಕು. ತುಂಬಾ ತಾಳ್ಮೆಯಿಂದ ಇದೀನಿ, ತಾಳ್ಮೆ ತುಂಬಾ ಕಲಿಸುತ್ತಿದೆ ಎಂದಿದ್ದಾರೆ . ಪವಿತ್ರಾ ಗೌಡ, ವಿಜಯಲಕ್ಷ್ಮೀ ವಿವಾದದ ಬಗ್ಗೆ ದರ್ಶನ್ ಮಾರ್ಮಿಕವಾದ ಉತ್ತರ ನೀಡಿದ್ದಾರೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಹೊಸ ಬಿರುದು ಸಿಕ್ಕಿದೆ. ಭೂಮಿ ಪುತ್ರ ಎಂಬ ಬಿರುದು ಕೊಟ್ಟು ರೈತ ಸಂಘ ಅವರನ್ನು ಸನ್ಮಾನಿಸಿದೆ. ಎಲ್ಲಾ ಜಿಲ್ಲೆಗಳ ಮಣ್ಣು, ಮಂಡ್ಯ ಭತ್ತ, ಕಬ್ಬು, ಟಗರು ಎಂದು ನೀಡಿ ಗೌರವಿಸಿದೆ. ರೈತ ಪರ ಕಾಳಜಿವುಳ್ಳ ಕಾಟೇರ ಸಿನಿಮಾ ಮಾಡಿದ್ದಕ್ಕೆ ಬಿರುದು ಪ್ರಧಾನ ಮಾಡಲಾಗಿದೆ.
ನಡೆದಿದ್ದೇನು?:ನಮ್ಮಿಬ್ಬರ ಸಂಬಂಧ 10 ವರ್ಷ ಪೂರೈಸಿದೆ. ಥ್ಯಾಂಕ್​ ಯು ಎಂದು ಹೇಳಿ ದರ್ಶನ್ ಜತೆಗಿನ ಫೋಟೋಗಳನ್ನು ಶೇರ್​ ಮಾಡಿಕೊಂಡು​ ಇನ್​ಸ್ಟಾಗ್ರಾಂನಲ್ಲಿ ದರ್ಶನ್​ಗೂ ಪವಿತ್ರಾ ಗೌಡಾ ಟ್ಯಾಗ್​ ಮಾಡಿದ್ದಾರೆ. ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ಇನ್​​ಸ್ಟಾಗ್ರಾಂ ಮೂಲಕ ಧ್ವನಿ ಎತ್ತಿದ್ದು, ದೂರು ನೀಡುವುದಾಗಿ ಪವಿತ್ರಾ ಗೌಡಗೆ ಎಚ್ಚರಿಕೆ ನೀಡಿದ್ದಾರೆ. ಈ ಫೋಸ್ಟ್​​ ವೈರಲ್​​ ಆಗುತ್ತಿದ್ದಂತೆ ದರ್ಶನ್​ ಅವರ ಪತ್ನಿ ಪವಿತ್ರಾ ಗೌಡ ವಿರುದ್ಧವಾಗಿ ಕಿಡಿಕಾರಿದ್ದಾರೆ.
ವಿಜಯಲಕ್ಷ್ಮೀ ಹೇಳಿದ್ದೇನು?:ಬೇರೊಬ್ಬರ ಪತಿಯ ಫೋಟೋವನ್ನು ಪೋಸ್ಟ್​ ಮಾಡುವ ಮುನ್ನ ಈ ಮಹಿಳೆ(ಪವಿತ್ರಾ ಗೌಡ)ಗೆ ತನ್ನ ಪ್ರಜ್ಞೆ ಇರಬೇಕು ಎಂದು ನಾನು ಭಾವಿಸುತ್ತೇನೆ. ಈ ರೀತಿ ಪೋಸ್ಟ್​ ಮಾಡುವುದು ಆಕೆಯ ವ್ಯಕ್ತಿತ್ವ, ನಡತೆ ಮತ್ತು ನೈತಿಕ ನಿಲುವಿನ ಬಗ್ಗೆ ಹೇಳುತ್ತದೆ. ಆ ಪುರುಷ ವಿವಾಹಿತನಾಗಿದ್ದರೂ ಆಕೆ ಇನ್ನೂ ಕೂಡ ತನ್ನ ವೈಯಕ್ತಿಕ ಅಗತ್ಯತೆಗಳು ಮತ್ತು ಅಜೆಂಡಾ ಈಡೇರಿಕೆಗಾಗಿ ಅದನ್ನೇ ಮುಂದುವರಿಸಲು ಆಯ್ಕೆ ಮಾಡಿಕೊಂಡಿದ್ದಾಳೆ. ಖುಷಿ ಗೌಡ, ಪವಿತ್ರಾ ಗೌಡ ಹಾಗೂ ಸಂಜಯ್​ ಸಿಂಗ್​ ಮಗಳು ಎಂಬುದನ್ನು ಈ ಫೋಟೋಗಳು ಸ್ಪಷ್ಟವಾಗಿ ನಿರೂಪಿಸುತ್ತವೆ. ಸಾಮಾನ್ಯವಾಗಿ ನಾನು ವೈಯಕ್ತಿಕ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತುವುದಿಲ್ಲ. ಆದರೆ, ನನ್ನ ಕುಟುಂಬ ಹಿತಾಸಕ್ತಿಗಾಗಿ ಧ್ವನಿ ಎತ್ತಲು ಇದು ಸೂಕ್ತ ಸಮಯ ಎಂದು ನನಗೆ ಅನಿಸುತ್ತಿದೆ. ಫೋಟೋಗಳನ್ನು ಶೇರ್​ ಮಾಡುವ ಮೂಲಕ ಸಮಾಜಕ್ಕೆ ಬೇರೆ ಕಲ್ಪನೆ ಬಿತ್ತುತ್ತಿರುವ ಜನರ ವಿರುದ್ಧ ನಾನು ಕಾನೂನು ಕ್ರಮವನ್ನು ತೆಗೆದುಕೊಳ್ಳುತ್ತೇನೆ ಎಂದು ಪವಿತ್ರಾ ಗೌಡ ಮತ್ತು ಸಂಜಯ್​ ಸಿಂಗ್​ ಫೋಟೋಗಳ ಸಮೇತ ಖಡಕ್​ ಎಚ್ಚರಿಕೆ ನೀಡಿರುವ ವಿಜಯಲಕ್ಷ್ಮೀ, ಸಂಜಯ್​ ಸಿಂಗ್​, ಖುಷಿಗೌಡ ಹಾಗೂ ಪವಿತ್ರಾ ಗೌಡಗೆ ಟ್ಯಾಗ್​ ಮಾಡಿದ್ದಾರೆ.
ಪವಿತ್ರಾ ಗೌಡಾ ಹೇಳಿದ್ದೇನು?:ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ life ನಲ್ಲಿ ಉಂಟಾದ ಕೆಲವು ಸಮಸ್ಯೆಯಿಂದ ಇಂದ ನಾನು ಸಂಜಯ್ ಅವರಿಂದ ಡಿವೊರ್ಸ್​​ ಪಡೆದಿದ್ದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ. ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ. ದಯವಿಟ್ಟು ಇದನ್ನು ಗಮನಿಸಿ “I’m not here for any own personal needs and agenda”ಇದು 10 ವರ್ಷಗಳ ಕಾಲ ಶುದ್ಧ ಪ್ರೀತಿ ಮತ್ತು ಕಾಳಜಿಯ ಬಗ್ಗೆ ಇದು ಸುಲಭವಲ್ಲ ,,ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ ಕರೆ ಮಾಡಿ ನನ್ನ ಬಳಿ ಮಾತನಾಡಿದ್ದು ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು ಸಾಕ್ಷಿ ಹಾಗೂ ನನ್ನ ನನ್ನ ವಿಚ್ಛೇದನದ ಪತ್ರವನ್ನು ಸಮಯ ಬಂದಾಗ ಹಂಚಿಕೊಳ್ಳುತ್ತೇನೆ). ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ  ಪೋಸ್ಟ್​​ಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ ಮಗಳಾದ ಖುಷಿ ಗೌಡಳ ಬಗ್ಗೆ Vijayalakshmi darshan ಯಂಬ ಇನ್​ಸ್ಟಾಗ್ರಾಮ್​​ನಲ್ಲಿ ಬಹಳಷ್ಟು ಜನ  ಕೆಟ್ಟ ಪದಗಳಿಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ ವಯಕ್ತಿಕ ಪೋಟೋಗಳು ಶೇರ್​ ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ ಈ ಮೂಲಕ ನಾನು ಹೇಳುವುದೇನೆಂದರೆ ನನಗೂ ಕಾನೂನು ಕ್ರಮ ತಗೊಳೋ ಹಕ್ಕು ಇದೆ ,ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ..ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. I hope you alll know about problems between them, what and all he had gone through.Even before,I came in to his life,. plz Recalll it 🙏 @viji_darshsn ಅವರನ್ನು ಟ್ಯಾಗ್​ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
