ಬೆಂಗಳೂರು:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಹಾಗೂ ಅವರ ಆಪ್ತರು ಪೊಲೀಸರ ವಶದಲ್ಲಿದ್ದು, ದಿನ ಕಳೆದಂತೆ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ. ಇತ್ತ ವಿಚಾರಣೆ ತೀವ್ರಗೊಂಡಂತೆ ಡಿ ಗ್ಯಾಂಗ್​ನ ಕರಾಳ ಮುಖ ಬಯಲಾಗುತ್ತಿದ್ದು, ಸ್ಟಾರ್​ ನಟನೊಬ್ಬ ತನ್ನ ಅಭಿಮಾನಿ ಮೇಲೆಯೇ ಇಂತಹ ಹೇಯ ಕೃತ್ಯ ಎಸಗಿದ್ದಾನೆ ಎಂಬ ವಿಚಾರ ಯಾರಿಂದಲೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಮಾಜಕ್ಕೆ ಮಾದರಿಯಾಗಬೇಕಿದ್ದ ನಟನೇ ಇಂದು ತಲೆತಗ್ಗಿಸುವ ಕೆಲಸ ಮಾಡಿದ್ದು, ಈ ವಿಚಾರ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣ ಹೊರ ಬರುತ್ತಿದ್ದಂತೆಯೇ ನಟ ದರ್ಶನ್​ರ ವಿರುದ್ಧ ಹೊಸ ಹೊಸ ಆರೋಪಗಳು ಕೇಳಿ ಬರುತ್ತಿದ್ದು, ಅವರ ತೂಗುದೀಪ ಫಾರ್ಮ್​ಹೌಸ್​ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ಎತ್ತಿನ ಕೊಂಬು ಚುಚ್ಚಿ ಗಾಯವಾದಾಗ ದರ್ಶನ್​ ಸಹಾಯ ಮಾಡಲಿಲ್ಲ ಎಂಬ ಆರೋಪ ಮೊನ್ನೆಯಷ್ಟೇ ಕೇಳಿಬಂತು. ಅಲ್ಲದೇ, ಸಹಾಯ ಕೇಳಲು ಹೋದಾಗ ನಾಯಿ ಛೂ ಬಿಟ್ಟಿದ್ದರು ಎಂದು ಸಂತ್ರಸ್ತನ ಸಂಬಂಧಿಕರು ಮಾಧ್ಯಮದ ಮುಂದೆ ಹೇಳಿದ್ದರು. ಇದೆಲ್ಲದರ ನಡುವೆ ಈ ಹಿಂದೆ ದರ್ಶನ್ ಅವರ ಮ್ಯಾನೇಜರ್​ ಆಗಿದ್ದ ಮಲ್ಲಿಕಾರ್ಜುನ್​ ನಾಪತ್ತೆ ಪ್ರಕರಣವೂ ಇದೀಗ ಹಲವು ಅನುಮಾನಗಳನ್ನ ಹುಟ್ಟಿ ಹಾಕಿದೆ.​ ಇದರ ನಡುವೆಯೆ ದರ್ಶನ್​ ಆಪ್ತ ಮಲ್ಲಿಕಾರ್ಜುನ್ ಬರೆದಿದ್ದ ಎನ್ನಲಾದ ಪತ್ರ ಸದ್ಯ ವೈರಲ್​ ಆಗುತ್ತಿದೆ.
ಗದಗ ಮೂಲದ ಮಲ್ಲಿಕಾರ್ಜುನ್​ ಎಲ್ಲಿದ್ದಾರೆ? ಏನು ಮಾಡ್ತಿದ್ದಾರೆ? ಎಂಬ ಪ್ರಶ್ನೆಗೆ ಈವರೆಗೂ ಉತ್ತರ ಸಿಕ್ಕಿಲ್ಲ. ಬಹಳ ಹಿಂದೆ ದರ್ಶನ್​ ಜತೆ ಕೆಲಸ ಮಾಡುತ್ತಿದ್ದರು ಎಂಬ ವಿಚಾರ ಮಾತ್ರ ಎಲ್ಲರಿಗೂ ತಿಳಿದಿದೆ. ದರ್ಶನ್​ ಡೇಟ್ಸ್​ಗಳನ್ನು ನಿರ್ವಹಿಸುವುದು ಮತ್ತು ದರ್ಶನ್​ಗೆ ಸಂಬಂಧಿಸಿದ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು. ಸದಾ ದರ್ಶನ್​ ಜತೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ದರ್ಶನ್​ 2018ರಿಂದ ಏಕಾಏಕಿ ನಾಪತ್ತೆಯಾಗಿದ್ದಾರೆ. ಅವರ ಸುಳಿವೇ ಇಲ್ಲ. ಇದೀಗ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಬಂಧನವಾಗಿರುವ ಹಿನ್ನೆಲೆಯಲ್ಲಿ ಮಲ್ಲಿ ಪ್ರಕರಣವೂ ಸಹ ಮುನ್ನೆಲೆಗೆ ಬಂದಿದೆ. ಇದರ ಬೆನ್ನಲ್ಲೇ ಮಲ್ಲಿಕಾರ್ಜುನ್ ಬರೆದಿದ್ದ ಎನ್ನಲಾದ ಪತ್ರ ಸದ್ಯ ಹೊಸ ಚರ್ಚೆಗೆ ನಾಂದಿ ಹಾಡಿದೆ.
ಇದನ್ನೂ ಓದಿ: ರೇಣುಕಸ್ವಾಮಿಗೆ ಕರೆಂಟ್​ ಶಾಕ್ ಕೊಟ್ಟು​ ಕೊಂದ ಡಿ ಗ್ಯಾಂಗ್​; ವಿಚಾರಣೆ ವೇಳೆ ಹೊರಬಂತು ಸ್ಫೋಟಕ ಅಂಶ
ಪ್ರೀತಿಯ ತೇಜಸ್ವಿನಿಗೆ, ಮೊದಲನೆಯದಾಗಿ ದಯವಿಟ್ಟು ನನ್ನನ್ನು ಕ್ಷಮಿಸು. ನಾನು ನನ್ನ ವೈಯಕ್ತಿಕ ವ್ಯವಹಾರಕ್ಕಾಗಿ ತುಂಬಾ ಸಾಲ ಮಾಡಿಕೊಂಡು ಅದನ್ನು ತೀರಿಸಲಾಗದ ಪರಿಸ್ಥಿತಿಗೆ ಬಂದು ತಲುಪಿದ್ದೇನೆ. ನನ್ನ ಈ ಕೆಲಸದಿಂದ ನಾನು ಯಾರಿಗೂ ಮುಖ ತೋರಿಸದ ಪರಿಸ್ಥಿತಿಯಲ್ಲಿದ್ದೇನೆ. ಆದ ಕಾರಣ ನಾನು ಎಲ್ಲೋ ಕಷ್ಟಪಟ್ಟು ದುಡಿದು ವಾಪಸ್ಸು ಬಂದು ಸಾಲ ತೀರಿಸಿ ನನಗಂಟಿರೋ ಕಳಂಕನಾ ಹೋಗಲಾಡಿಸಿ ಮತ್ತೆ ಧೈರ್ಯವಾಗಿ ತೆಲ್ಲೆಯೆತ್ತಿ ಎಲ್ಲರ ಮುಂದೆ ಜೀವನ ನಡೆಸುಬೇಕೆಂದುಕೊಂಡಿದ್ದೇನೆ.
ಅಲ್ಲಿಯವರೆಗೆ ನಿಮ್ಮ ಎದುರಿಗೆ ಬರುವ ಶಕ್ತಿ ನನಗಿಲ್ಲ. ನನ್ನನ್ನು ಯಾವುದೇ ಕಾರಣಕ್ಕೂ ಹುಡುಕು ಪ್ರಯತ್ನ ಮಾಡಬೇಡಿ. ನನ್ನ ಈ ಸಮಸ್ಯೆಯಿಂದ ನಿನ್ನನ್ನು, ಮಗನನ್ನು ಹಾಗೂ ಮನೆಯವರನ್ನು ಬಿಟ್ಟು ಹೋಗುವ ಪರಿಸ್ಥಿತಿ ಬಂದೊದಗಿದೆ. ದಯವಿಟ್ಟು ನನ್ನನ್ನು ಕ್ಷಮಿಸಿ ಇಂತಿ ನಿಮ್ಮ ಪ್ರೀತಿಯ ಮಲ್ಲಿಕಾರ್ಜುನ ಎಂದು ಪತ್ರದಲ್ಲಿ ಬರೆಯಲಾಗಿದೆ. ಇತ್ತ ಈ ಪ್ರಕರಣ ಹೊಸ ಚರ್ಚೆಗೆ ನಾಂದಿ ಹಾಡಿದೆ. ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × one =
Remember me
