ಬೆಂಗಳೂರು:ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ನಟ ದರ್ಶನ್​​ ವಿಚಾರಣಧಿನ ಕೈದಿಯಾಗಿ ಜೈಲು ಸೇರಿದ್ದಾರೆ. ಇತ್ತ ಇವರ ಅಭಿಮಾನಿಗಳು ದಚ್ಚು ಮೇಲಿನ ಪ್ರೀತಿಗಾಗಿ ಟ್ಯಾಟು, ಕೈದಿನಂಬರ್ ಟ್ಯಾಟು, ಫೋಟೋಶೂಟ್​​ ಮಾಡುತ್ತಿದ್ದಾರೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ದರ್ಶನ್​​ ಅವರ ಫೋಟೋಗೆ ಪೂಜೆ ಸಲ್ಲಿಸಿದ್ದಾರೆ.
ಆರಾಧ್ಯ ದೈವ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭ ಗುಡಿಯಲ್ಲಿ ಶಿಲಾ ಮೂರ್ತಿಯ ಮುಂದೆ ಸಿನಿಮಾ ನಟ ದರ್ಶನ್​​ ಅವರ ಫೋಟೋಗಳನ್ನು ಇಟ್ಟು ಪೂಜೆ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕ ನಟ ದರ್ಶನ್ ಪೋಟೋ ಇಟ್ಟು ಪೂಜೆ ಮಾಡಿದ್ದಾರೆ. ಪೂಜೆ ಮಾಡಿ ಮಂಗಳಾರತಿ ಎತ್ತಿದ್ದಾರೆ. ಈ ಫೊಟೋಗಳು ವೈರಲ್​ ಆಗುತ್ತಿದ್ದಂತೆ ಕೆಲವರು ದೇವಸ್ಥಾನದ ಸಂಪ್ರದಾಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಕ್ಕೆ ಅರ್ಚಕ ಸ್ಥಾನದಿಂದ ಅಮಾನತು ಆಗಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪರವರು ಅರ್ಚಕನನ್ನು ಅಮಾನತು ಮಾಡಿದ್ದಾರೆ. ವಿಚಾರಣೆ ಮುಗಿಯೋವರೆಗೂ ದೇವಸ್ಥಾನಕ್ಕೆ ಬಾರದಂತೆ ನಿಷೇಧ ಹೇರಿದ್ದಾರೆ ಎನ್ನಲಾಗಿದೆ.
ಪಂಚೆ ಉಟ್ಟು ಧರ್ಮಸ್ಥಳದಲ್ಲಿ ಕಾಣಿಸಿಕೊಂಡ ನಟ ಯಶ್
ಪಂಚೆ ಉಟ್ಟು ಧರ್ಮಸ್ಥಳದಲ್ಲಿ ಕಾಣಿಸಿಕೊಂಡ ನಟ ಯಶ್
ಪಂಚೆ ಉಟ್ಟು ಧರ್ಮಸ್ಥಳದಲ್ಲಿ ಕಾಣಿಸಿಕೊಂಡ ನಟ ಯಶ್

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nineteen − sixteen =
Remember me
