ಬೆಂಗಳೂರು:ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ.  ಆದರೆ ಈ ಪ್ರಕರಣದ ಬೆನ್ನಲ್ಲೆ ದರ್ಶನ್​ ಅವರ ಸುತ್ತ ಮತ್ತೊಂದು ಪ್ರಕರಣವು ಸುತ್ತಿಕೊಂಡಿದೆ ಎನ್ನಲಾಗಿದೆ.ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದರ್ಶನ್​ರ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ, ದರ್ಶನ್​ರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಶ್ರೀಧರ್ ಎಂಬುವರು ಏಪ್ರಿಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಮೃತ ಮ್ಯಾನೇಜರ್ ಶ್ರೀಧರ್ ಆಗಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಮ್ಯಾನೇಜರ್ ಶ್ರೀಧರ್  ಆತ್ಮಹತ್ಯೆಗೆ ಶರಣಾಗಿದ್ದ. ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್‌ನಲ್ಲಿ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದನು. ಆತ, ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಇನ್ನು ಶ್ರೀಧರ್ ಮೃತ ದೇಹವನ್ನು ನೋಡಿದ್ದ ಆತನ ಶ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದನು. ಈ ವಿಷಯ ಇದೀಗ ಮಹತ್ವ ಪಡೆದುಕೊಂಡಿದ್ದು, ಆತ್ಮಹತ್ಯೆ ಪ್ರಕರಣದ ಮರು ತನಿಖೆ ನಡೆಯುವ ಸಾಧ್ಯತೆ ಇದೆ. ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ನಡೆದಿದ್ದ ಘಟನೆ ನಡೆದಿದೆ.
ಪೊಲೀಸರು ಸ್ಥಳ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಮ್ಯಾನೇಜರ್ ಶ್ರೀಧರ್ ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಮೃತಪಟ್ಟಿದ್ದನು. ಒಂದು ವರ್ಷಗಳ ಕಾಲ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ ಶ್ರೀಧರ್, ಫಾರ್ಮ್‌ಹೌಸ್ ಪಕ್ಕದ ಕಲ್ಲು ಬಂಡೆ ಮೇಲೆ ಅನಾಥವಾಗಿ ಶವವಾಗಿ ಪತ್ತೆಯಾಗಿದ್ದಾರೆ.  ನನ್ನ ಸಾವಿಗೆ ನಾನೇ ಕಾರಣ, ಒಂಟಿತನ ಕಾಡುತ್ತಿದೆ ಎಂದು ಡೆತ್ ಬರೆದಿಟ್ಟು ಸ್ಯೂಸೈಡ್ ಮಾಡಿಕೊಂಡಿದ್ದಾರೆ. ಈ ಘಟನೆಯ ಬೆನ್ನಲ್ಲಿ ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ದಾಖಲು ಮಾಡಿಕೊಂಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
