ಉಡುಪಿ:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್​ಗೆ ಸಾಲು ಸಾಲು ಸಂಕಷ್ಟಗಳು ಎದುರಾಗಿದ್ದು, ಸದ್ಯಕ್ಕೆ ಹೊರಬರುವುದು ಡೌಟ್​ ಎಂದು ಹೇಳಲಾಗಿದೆ. ಮನೆಯೂಟ, ಹಾಸಿಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ​ ವಜಾಗೊಳಿಸಿದ್ದು, ಪತಿಯನ್ನು ಬಿಡಿಸಲು ಪತ್ನಿ ವಿಜಯಲಕ್ಷ್ಮೀ ತೆರೆಮರೆಯಲ್ಲಿ ಇನ್ನಿಲ್ಲದ ಕಸರತ್ತನ್ನು ಮಾಡುತ್ತಿದ್ದಾರೆ. ಜುಲೈ 24 ರಂದು ಡಿಸಿಎಂ ಡಿ.ಕೆ. ಶಿವಕುಮಾರ್​ರನ್ನು ಭೇಟಿ ಮಾಡಿದ್ದ ವಿಜಯಲಕ್ಷ್ಮೀ ಇದೀಗ ಕೊಲ್ಲೂರು ಮೂಕಾಂಬಿಕ ದೇವಸ್ಥಾನದಲ್ಲಿ ಪತಿಯ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ಪತಿ ದರ್ಶನ್ ಅವರನ್ನ ಹೊರತರಲು ಪತ್ನಿ ವಿಜಯಲಕ್ಷ್ಮೀ ಹರಸಾಹಸ ಪಡುತ್ತಿದ್ದಾರೆ. ಪತಿ ದರ್ಶನ್‌ ಒಳಿತಿಗಾಗಿ ವಿಜಯಲಕ್ಷ್ಮೀ ಒದ್ದಾಡುತ್ತಿದ್ದಾರೆ. ವಕೀಲರ ಜೊತೆ ಚರ್ಚೆ ನಡೆಸಿರುವ ವಿಜಯಲಕ್ಷ್ಮೀ ಆಗಾಗ ಜೈಲಿಗೆ ಭೇಟಿಕೊಟ್ಟು ಪತಿ ದರ್ಶನ್​ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಇದೀಗ ಸಂಕಷ್ಟದಲ್ಲಿ ಸಿಲುಕಿರುವ ಪತಿಯನ್ನ ಪಾರು ಮಾಡಲು ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋಗಿದ್ದಾರೆ.
ಇದನ್ನೂ ಓದಿ:ಈ ಒಂದು ಕಾರಣಕ್ಕೆ ನಾನು…; ಟೀಮ್​ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸದಿರಲು ಕಾರಣ ತಿಳಿಸಿದ ಆಶಿಶ್ ನೆಹ್ರಾ
ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನಲ್ಲಿರುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮೀ ಶುಕ್ರವಾರ ಚಂಡಿಕಾ ಯಾಗ ಮಾಡಿಸಿದ್ದಾರೆ ಎಂದು ಹೇಳಲಾಗಿದೆ. ನರಸಿಂಹ ಅಡಿಗ ನೇತೃತ್ವದಲ್ಲಿ ನವ ಚಂಡಿಕಾ ಹೋಮ, ಪಾರಾಯಣ ನಡೆದಿದೆ. ದರ್ಶನ್ ಬಂಧನ ಮುಕ್ತಿಗಾಗಿ ವಿಜಯಲಕ್ಷ್ಮೀ ಪ್ರಾರ್ಥನೆ ಮಾಡಿದ್ದಾರೆ.
ದರ್ಶನ್ ಬಂಧಮುಕ್ತಿಗಾಗಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಿರುವುದು ಇದೇ ಮೊದಲಲ್ಲ. ಈ ಹಿಂದೆ ಬೆಂಗಳೂರಿನಲ್ಲಿರುವ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಪತಿ ಬೇಗ ಬಿಡುಗಡೆ ಆಗಲೆಂದು ಪ್ರಾರ್ಥಿಸಿದ್ದರು. ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸುವವರೆಗೂ ದರ್ಶನ್​ಗೆ ಸೆರೆವಾಸ ಅನುಭವಿಸಬೇಕಾಗಿದೆ. ಇದಾದ ಬಳಿಕ ದರ್ಶನ್​ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
