ಮಂಡ್ಯ:ಪ್ರಸ್ತುತ ಆಧುನಿಕತೆಯ ದಿನಗಳಲ್ಲೂ ಸೃಜನಾತ್ಮಕ ಕವಿತೆ-ಕವನಗಳು ಸಮಾಜವನ್ನು ಎಚ್ಚರಿಸುತ್ತಿವೆ ಎಂದು ಮೈಸೂರು ಮಹಾರಾಜ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ.ಎಂ.ಬಿ.ಸುರೇಶ್ ಮಾರನಹಳ್ಳಿ ಅಭಿಪ್ರಾಯಪಟ್ಟರು.ನಗರದ ಜಿಲ್ಲಾ ಕಸಾಪ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಬುಧವಾರ ಆಯೋಜಿಸಿದ್ದ ದಸರಾ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಇಂದಿನ ಕವಿತೆಗಳು ಸಮಾಜಕ್ಕೆ ತತ್‌ಕ್ಷಣದಲ್ಲಿ ಪ್ರತಿಕ್ರಿಯಿಸುತ್ತಿವೆ. ಯಾವುದೇ ಸಮಸ್ಯೆ ಇರಲಿ, ಸಂಕಷ್ಟಕರ ತಂದ ಕೋವಿಡ್ ದಿನಗಳಲ್ಲಿನ ತಳಮಳ, ತಲ್ಲಣಗಳನ್ನು ಪದಗಳ ಸಾಲಿನಲ್ಲಿ ಕಟ್ಟಿಕೊಡುವ ಕೌಶಲ ಜ್ಞಾನ, ಸಾಹಿತ್ಯ ಪ್ರಜ್ಞೆ ಹೆಚ್ಚಾಗುತ್ತಿದೆ. ವಾಟ್ಸಾಪ್, ಫೇಸ್‌ಬುಕ್‌ಗಳಿಗೆ ಹಾಕಿ ಜಾಗೃತಿ ಮೂಡಿಸುವುದು ಕಂಡು ಬರುತ್ತಿದೆ ಎಂದು ನುಡಿದರು.ಹಿರಿಯ ಸಾಹಿತಿ ಡಾ.ಪ್ರದೀಪಕುಮಾರ ಹೆಬ್ರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ, ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಬಿ.ಹೂಗಾರ ಇತರರಿದ್ದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eleven − 8 =
Remember me
