ಬೆಂಗಳೂರು :ಲಾಕ್‌ಡೌನ್ ಹಿನ್ನೆಲೆಯಲ್ಲಿ ತೊಂದರೆಗೆ ಸಿಲುಕಿರುವ ವಲಸೆ ಹಾಗೂ ಬಡ ಕಾರ್ಮಿಕರ ಹಸಿದ ಹೊಟ್ಟೆಗಳನ್ನು ‘ದಾಸೋಹ’ ಸಹಾಯವಾಣಿ ತುಂಬುತ್ತಿದೆ. ಕರೊನಾ ತಡೆಗಟ್ಟಲು ಕೈಗೊಂಡಿರುವ ಬಿಗಿಕ್ರಮಗಳಿಂದಾಗಿ ಕಷ್ಟಕ್ಕೆ ಸಿಲುಕಿದವರಿಗೆ ಆತ್ಮಸ್ಥೈರ್ಯ ತುಂಬಲು ಆಸರೆಯಾಗಿದೆ.
ರಾಜ್ಯ ಸರ್ಕಾರ ಆರಂಭಿಸಿರುವ ಈ ದಾಸೋಹ ಸಹಾಯವಾಣಿ (155214) ಪ್ರತಿದಿನ 2 ಲಕ್ಷ ಆಹಾರ ಪೊಟ್ಟಣಗಳನ್ನು ವಿತರಿಸಿ ಹಸಿವು ನೀಗಿಸುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಸಹಾಯವಾಣಿ ದೊಡ್ಡಮಟ್ಟದಲ್ಲಿ ಕೆಲಸ ಮಾಡುತ್ತಿದ್ದು, ಸ್ಪಂದಿಸಲು 100 ಸಿಬ್ಬಂದಿ ಇದ್ದಾರೆ. ಕರೆ ಬಂದ ತಕ್ಷಣ ವಿವರ ಪಡೆದು ಆಹಾರ ಪೊಟ್ಟಣ ತಲುಪಿಸುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆಹಾರದ ಅವಶ್ಯಕತೆ ಇರುವ ವಲಸೆ ಹಾಗೂ ಬಡ ಕಾರ್ಮಿಕರು 155214 ಸಂಖ್ಯೆಯನ್ನು ಸಂಪರ್ಕಿಸಬಹುದು. ಕರೆ ಮಾಡಿದವರು ಯಾವ ಸ್ಥಳದಲ್ಲಿದ್ದಾರೆ ಎಂಬುದನ್ನು ಖಚಿತಪಡಿಸಿಕೊಂಡು ಅಲ್ಲಿಗೆ ಆಹಾರ ತಲುಪಿಸಲು ಈ ಸಹಾಯವಾಣಿ ನೆರವು ನೀಡಲಿದೆ.
ಹಸಿದವರಿಗೆ ದಾಸೋಹ ಸಹಾಯವಾಣಿ
ಲಾಕ್ ಡೌನ್ ನಿಂದ ತೊಂದರೆಗೊಳಗಾಗಿರುವ ಕಾರ್ಮಿಕರಿಗೆ ಆಹಾರ ಪೂರೈಸಲು ರಾಜ್ಯ ಸರ್ಕಾರ ಆರಂಭಿಸಿರುವ ದಾಸೋಹ ಸಹಾಯವಾಣಿ 155214 ದೊಡ್ಡಮಟ್ಟದಲ್ಲಿ ನೆರವಾಗುತ್ತಿದೆ.100ಕ್ಕೂ ಹೆಚ್ಚು ಸಿಬ್ಬಂದಿ ಕರೆ ಮಾಡಿದವರ ವಿವರ ಪಡೆದು ಆಹಾರ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದಾರೆ. 1/2pic.twitter.com/lnltPLYVkU
— CM of Karnataka (@CMofKarnataka)April 10, 2020

ಸಂಕಷ್ಟದ ಪರಿಸ್ಥಿತಿ ನಿಭಾಯಿಸುವಲ್ಲಿ ಮಹಿಳೆಯರದ್ದೇ ಎತ್ತಿದ ಕೈ, ಕರೊನಾ ವಿಷಯದಲ್ಲೂ ಇದು ಸಾಬೀತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + fifteen =
Remember me
