ಬೆಂಗಳೂರು:ಲೋಕಸಭೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಬಹುದು. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಎರಡನೇ ಹಂತದ ಬಿರುಸಿನ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಬಾರಿ ಕರ್ನಾಟಕ ಸೇರಿದಂತೆ ದಕ್ಷಿಣದ ಪಂಚ ರಾಜ್ಯಗಳಲ್ಲಿ ಪ್ರಧಾನಿ ಪ್ರವಾಸ ಕೈಗೊಳ್ಳಲಿದ್ದಾರೆ.
ಇದನ್ನೂ ಓದಿ:ಹಾರ್ದಿಕ್​​​ ಪಾಂಡ್ಯಗೆ ಹಿಗ್ಗಾಮುಗ್ಗಾ ಜಾಡಿಸಿದ ಸ್ಟಾರ್​​ ಕ್ರಿಕೆಟರ್​: ಕಾರಣ ಹೀಗಿದೆ?
ರಾಜ್ಯದಲ್ಲಿ ಮೋದಿ ಅವರ ಲೋಕಸಭಾ ಚುನಾವಣೆಯ ಪ್ರಚಾರ ಸಮಾವೇಶಗಳು ಮಾರ್ಚ್‌ 16ರಿಂದ ಆರಂಭವಾಗಲಿವೆ. ಅವರು ಮಾರ್ಚ್‌ 16ರಂದು ಕಲಬುರಗಿಯಲ್ಲಿ ಮತ್ತು ಮಾರ್ಚ್‌ 18ರಂದು ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಅವರು ಮಾ.16ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಭೇಟಿ ಕೊಡಲಿದ್ದಾರೆ. ಅಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾರೆ ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೋದಿ ಅವರ ಎರಡು ದಿನಗಳ ಪ್ರವಾಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 16ರಂದು ಕಲಬುರ್ಗಿ ಎನ್‍ವಿ ಆಟದ ಮೈದಾನದಲ್ಲಿ ಸಭೆ ನಡೆಯಲಿದೆ. 18ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಪಕ್ಷದ ಪ್ರಮುಖರು ಬೇರೆ ಬೇರೆ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ಕೊಡಲಿದ್ದಾರೆ ಎಂದು ಹೇಳಿದರು.
ಹಾರ್ದಿಕ್​​​ ಪಾಂಡ್ಯಗೆ ಹಿಗ್ಗಾಮುಗ್ಗಾ ಜಾಡಿಸಿದ ಸ್ಟಾರ್​​ ಕ್ರಿಕೆಟರ್​: ಕಾರಣ ಹೀಗಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 17 =
Remember me
