ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಯುವನಿಧಿ ಯೋಜನೆ ಜಾರಿಗೆ ಕಾಲ ಕೂಡಿ ಬಂದಿದ್ದು, 2024ರ ಜನವರಿಯಲ್ಲಿ ಯುವನಿಧಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ ಎಂದು ತಿಳಿದು ಬಂದಿದೆ.
ಡಿಸೆಂಬರ್ 21 ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಮುಂದಿನ ವರ್ಷ ಅಂದರೆ 2024ರ ಜನವರಿಯಲ್ಲಿ ಯುವನಿಧಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ. ಇನ್ನೂ ಜನವರಿಯಲ್ಲಿ ಎರಡನೇ ವಾರದಂದು ಯುವ ನಿಧಿ ಯೋಜನೆಯನ್ನ ಜಾರಿಗೊಳ್ಳಲಿದ್ದು, ಫೆಬ್ರವರಿಯಲ್ಲಿ ಪಲಾನುಭವಿಗಳ ಖಾತೆಗೆ ಹಣ ಬರಲಿದೆ ಎಂದು ಹೇಳಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಸಚಿವ ಶರಣಪ್ರಕಾಶ ಪಾಟೀಲ್​, ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಅನ್ಯ ಧರ್ಮೀಯ ಯುವತಿಯೊಂದಿಗೆ ಅಸಭ್ಯ ವರ್ತನೆ ಆರೋಪ; ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್​ಗಿರಿ
ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದು ಬರೆದುಕೊಂಡಿದ್ದಾರೆ.
ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ನಿಗದಿ ಮಾಡಿದ್ದರೆ, ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.
ಯುವನಿಧಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು. ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ, ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ, ಆಧಾರ್‌ ಕಾರ್ಡ್‌, ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ), ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 11 =
Remember me
