ಗದಗ:ತಾನೇ ಜನ್ಮಕೊಟ್ಟಿದ್ದ ಮಗುವನ್ನ ಕೊಂದಿದ್ದ ಪಾಪಿ ತಂದೆಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ.
ಮರಣದಂಡನೆ ಶಿಕ್ಷೆಗೆ ಒಳಗಾದ ಅಪರಾಧಿ ರೋಣ ತಾಲೂಕಿನ ಹುಲ್ಲೂರ ಗ್ರಾಮದ ಪ್ರಶಾಂತಗೌಡ ಪಾಟೀಲ್. ಈತ ತನ್ನದೇ ಒಂದೂವರೆ ವರ್ಷದ ಹೆಣ್ಣು ಮಗುವನ್ನು ಕತ್ತು ಹಿಸುಕಿ, ಸುಟ್ಟು ಹಾಕಿ ಕೊಲೆ ಮಾಡಿದ್ದ.ಇದನ್ನೂ ಓದಿರಿಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ
ಪ್ರಶಾಂತಗೌಡ ಪಾಟೀಲ್ 2013ರಲ್ಲಿ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದ. ಆಕೆ ಗರ್ಭಿಣಿ ಆಗುತ್ತಿದ್ದಂತೆ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಚಿತ್ರಹಿಂಸೆ ನೀಡುತ್ತಿದ್ದ. ನಿತ್ಯ ಕಿರುಕುಳದಿಂದ ನೊಂದ ಪತ್ನಿ ಮಹಿಳಾ ಸಾಂತ್ವನ ಕೇಂದ್ರ ಮೊರೆ ಹೋಗಿದ್ದಳು. ಹೆಣ್ಣು ಮಗು ಕೂಡ ಆಕೆ ಜನಿಸಿತ್ತೆ. ಅಷ್ಟರಲ್ಲಿ ಪತಿಯನ್ನ ಕರೆಸಿ ಬುದ್ದಿ ಹೇಳಿ ಮಗು-ಪತ್ನಿಯನ್ನು ಆತನ ಜತೆಗೆ ಕಳಿಸಿದ್ದರು.
ತಪ್ಪಿನ ಅರಿವಿನ ನಂತರ ರೋಣ ಪಟ್ಟಣದ ಸಿದ್ದಾರೂಢ ಮಠದ ಬಳಿ ಬಾಡಿಗೆ ಮನೆಯಲ್ಲಿ ಪತ್ನಿ-ಮಗು ಜತೆ ಜೀವನ ನಡೆಸುತ್ತಿದ್ದ. ಕೆಲವು ತಿಂಗಳ ನಂತರ ಸಾಂತ್ವನ ಕೇಂದ್ರ ಕೇಸ್ ಹಿಂಪಡೆಯುವಂತೆ ಆಗಾಗ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಆಗ ನೊಂದ ಪತ್ನಿ ಮಗುವಿಗೆ ಜೀವನಾಂಶ ಕೊಡಿಸುವಂತೆ ಕೋರ್ಟ್ ಮೊರೆ ಹೋಗಿದ್ದಳು.
ಜೀವನಾಂಶ ಕೇಳಿದ್ದಕ್ಕೆ ಸಿಟ್ಟಾಗಿದ್ದ ಪ್ರಶಾಂತಗೌಡ, ಪತ್ನಿ ಬಳಿ ಇದ್ದ ಮಗನನ್ನು 2015ರ ಏಪ್ರಿಲ್ 6ರಂದು ಕಿಡ್ನ್ಯಾಪ್​ ಮಾಡಿ ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ಗುಡ್ಡದಲ್ಲಿ ಕೊಲೆ ಮಾಡಿದ್ದ. ಆಗ ಆ ಮಗುವಿನ ವಯಸ್ಸು ಒಂದೂವರೆ ವರ್ಷ.
ಮಗು ಕೊಲೆ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಗು ಕೊಂದದ್ದು ತಂದೆಯೇ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ರಾಜಶೇಖರ ವಿ.ಪಾಟೀಲ್ ಅವರು ಅಪರಾಧಿಗೆ ಮರಣ ದಂಡನೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಬಿ.ಬಿ. ಪಾಟೀಲ್ ವಾದ ಮಂಡನೆ ಮಾಡಿದ್ದರು.
ಪತ್ನಿಯ ಕುಟುಂಬಸ್ಥರಿಂದಲೇ ಗಂಡನ ಹತ್ಯೆ! ಪ್ರೀತಿಯ ಗಂಡನ ಬರ್ತ್​ ಡೇ ಸಂಭ್ರಮದಲ್ಲಿದ್ದವಳಿಗೆ ಆಘಾತ…

ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

ಧಾರಾಕಾರ ಮಳೆ: ಬದುಕು ಮೂರಾಬಟ್ಟೆ, ಮನೆಗಳಿಗೆ ನುಗ್ಗಿದ ನೀರು, ಬೆಳೆ ನಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + three =
Remember me
