ಬಳ್ಳಾರಿ:ಅನ್ಯಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುಡಿತಿನಿ ಪಟ್ಟಣದಲ್ಲಿ ನಡೆದಿದೆ.
ಕುಡುತಿನಿ ಪಟ್ಟಣದ ಬುಡ್ಗ ಜಂಗಮ ಕಾಲನಿ ನಿವಾಸಿ ಓಂಕಾರಗೌಡನೇ ತನ್ನ ಮಗಳನ್ನು ಕೊಲೆ ಮಾಡಿದ ತಂದೆ. ಓಂಕಾರಗೌಡನ ಮಗಳು ಹೈಸ್ಕೂಲ್‌ನಲ್ಲಿ ಓದುತ್ತಿದ್ದಳು. ಅನ್ಯ ಕೋಮಿನ ಯುವಕನೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು‌. ಈ ಬಗ್ಗೆ ಮನೆಯವರಿಗೆ ಗೊತ್ತಾಗಿತ್ತು. ಆ ಯುವಕನಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದರು. ಆದರೂ ಆಕೆ ಆ ಯುವಕನೊಡನೆ ಪ್ರೀತಿ- ಒಡನಾಟ ಮುಂದುವರಿಸಿದ್ದಳು.
ಇದರಿಂದ ಸಿಟ್ಟಾಗಿದ್ದ ಓಂಕಾರ್ ಗೌಡ, ಅಕ್ಟೋಬರ್ 31ರಂದು ಮಧ್ಯಾಹ್ನ ಮಗಳನ್ನು ಸಿನಿಮಾ ತೋರಿಸುವುದಾಗಿ ಬೈಕ್‌ನಲ್ಲಿ ಕರೆದೊಯ್ದ. ಚಿತ್ರಮಂದಿರದ ಬಳಿ ಹೋದಾಗ ಸಿನಿಮಾ ಆರಂಭವಾಗಿತ್ತು, ಅಲ್ಲಿಂದ ಹೊಟೇಲ್‌ಗೆ ಕರೆದೊ‌ಯ್ದು ತಿಂಡಿ ತಿನ್ನಿಸಿದ. ಬಳಿಕ ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿಸಿದ. ಆಭರಣದ ಅಂಗಡಿಯಲ್ಲಿ ಒಂದು ಜತೆ ಓಲೆ, ಉಂಗುರವನ್ನೂ ಮಗಳಿಗೆ ಕೊಡಿಸಿದ.
ಊರಿಗೆ ಹಿಂತಿರುಗುವ ಹೊತ್ತಿಗೆ ರಾತ್ರಿಯಾಗಿತ್ತು. ಪಟ್ಟಣದ ಸಿದ್ದಮ್ಮನಹಳ್ಳಿ ಬಳಿಯ ಎಚ್‌ಎಲ್‌ಸಿ ಕಾಲುವೆ ಬಳಿಗೆ ಮಗಳನ್ನು ಕರೆತಂದು, “ಸ್ವಲ್ಪ ಹೊತ್ತು ನಿಂತಿರು, ಕೆಲಸವಿದೆ” ಎಂದು ಹೇಳಿ ಕಣ್ಮರೆಯಾದ. ಆನಂತರ ಹಿಂದಿನಿಂದ ಬಂದು ಕಾಲುವೆಗೆ ಅವಳನ್ನು ತಳ್ಳಿದ. ಬಾಲಕಿ “ಅಪ್ಪ, ಅಪ್ಪ” ಎಂದು ಕೂಗುತ್ತ ನೀರಿನಲ್ಲಿ ಕೊಚ್ಚಿಕೊಂಡು ಹೋದಳು. ಆನಂತರ ಓಂಕಾರ್‌ಗೌಡ ಬೈಕ್‌ ಅನ್ನು ತನ್ನ ಗೆಳೆಯ ಭೀಮಪ್ಪನ ಮನೆಯಲ್ಲಿ ಬಿಟ್ಟು ತಿರುಪತಿಗೆ ರೈಲು ಹತ್ತಿದ.
ನಂತರ ಸ್ಥಳೀಯರಿಂದ ಪೊಲೀಸರಿಗೆ ವಿಷಯ ಗೊತ್ತಾಗಿತ್ತು. ತಿರುಪತಿ ದರ್ಶನ ಮುಗಿಸಿ ವಾಪಸ್‌ ಬರುವಾಗ ಕೊಪ್ಪಳದ ಬಳಿ ಓಂಕಾರಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಮಗಳನ್ನು ತಾನೇ ಹತ್ಯೆ ಮಾಡಿರುವುದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ. ಬಾಲಕಿಯ ಶವಕ್ಕಾಗಿ ಪೊಲೀಸರು ಕಾಲುವೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ವೃದ್ಧನ ಮನೆ ಬಾಗಿಲಿಗೇ ತೆರಳಿ ದೂರು ಸ್ವೀಕರಿಸಿದ ನ್ಯಾಯಾಧೀಶರು! ತುಮಕೂರಲ್ಲಿ ಅಪರೂಪದ ಪ್ರಕರಣ

ಕೆಂಪೇಗೌಡರನ್ನು ಜಾತಿಯ ಬುಟ್ಟಿ ಒಳಗಿಡುವುದು ಅಪಮಾನ; ನ.11ರಂದು ಪ್ರಗತಿಯ ಪ್ರತಿಮೆ ಲೋಕಾರ್ಪಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
