ದಾವಣಗೆರೆ:ಮದುವೆಗೆ ಹೊರಟಿದ್ದ ಕ್ಯಾಂಟರ್ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಮಹಿಳೆಯರು ಮೃತಪಟ್ಟಿದ್ದು, 17ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಮತ್ತು ಹಂಚಿನಸಿದ್ದಾಪುರದ ಮಧ್ಯೆ ಘಡನೆ ನಡೆದಿದೆ. ಆಂಧ್ರಪ್ರದೇಶದ ಇಂದೂಪುರದ ನಾಗರತ್ನಮ್ಮ (70), ಶಿವಮೊಗ್ಗದ ವರಲಕ್ಷ್ಮೀ (60), ಅನುಷಾ (25) ಮೃತಪಟ್ಟವರು,
ಆಂಧ್ರಪ್ರದೇಶದ ಇಂದೂಪುರದಿಂದ ಶಿವಮೊಗ್ಗಕ್ಕೆ ಮದುವೆ ದಿಬ್ಬಣ ಹೋಗುತ್ತಿತ್ತು. ದಿಬ್ಬಣದ ಲಾರಿ ನಿಯಂತ್ರಣ ತಪ್ಪಿ ಮೈಲುಗಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶವಗಳನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
